< Levítico 17 >
1 Y habló Jehová a Moisés, diciendo:
೧ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2 Habla a Aarón, y a sus hijos, y a todos los hijos de Israel, y díles: Esto es lo que ha mandado Jehová, diciendo:
೨“ನೀನು ಆರೋನನಿಗೂ ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರಿಗೂ ಹೀಗೆ ಹೇಳಬೇಕು,
3 Cualquier varón de la casa de Israel, que degollare buey, o cordero, o cabra en el real, o fuera del real,
೩ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,
4 Y no lo trajere a la puerta del tabernáculo del testimonio para ofrecer ofrenda a Jehová delante del tabernáculo de Jehová, sangre será imputada al tal varón: sangre derramó; el tal varón será cortado de entre su pueblo:
೪ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
5 Porque traigan los hijos de Israel sus sacrificios que sacrificaren sobre la haz del campo: porque los traigan a Jehová a la puerta del tabernáculo del testimonio al sacerdote, y sacrifiquen sacrificios de paces ellos a Jehová.
೫ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.
6 Y el sacerdote esparza la sangre sobre el altar de Jehová a la puerta del tabernáculo del testimonio, y haga perfume del sebo en olor de holganza a Jehová.
೬ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಯಜ್ಞವೇದಿಗೆ ಎರಚಿ, ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
7 Y nunca más sacrificarán sus sacrificios a los demonios, tras los cuales fornican: esto tendrán por estatuto perpetuo por sus edades.
೭ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’
8 Ítem, decirles has: Cualquier varón de la casa de Israel, o de los extranjeros, que peregrinan entre vosotros, que ofreciere holocausto, o sacrificio,
೮“ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,
9 Y no lo trajere a la puerta del tabernáculo del testimonio, para hacerlo a Jehová, el tal varón también, será cortado de sus pueblos.
೯ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
10 Ítem, cualquier varón de la casa de Israel, y de los extranjeros que peregrinan entre ellos, que comiere alguna sangre, yo pondré mi rostro contra la persona, que comiere sangre, y yo la cortaré de entre su pueblo.
೧೦“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
11 Porque el alma de la carne en la sangre está: y yo os la he dado para expiar vuestras personas sobre el altar: por lo cual la misma sangre expiará la persona:
೧೧ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
12 Por tanto he dicho a los hijos de Israel: Ninguna persona de vosotros comerá sangre, ni el extranjero, que peregrina entre vosotros comerá sangre.
೧೨ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ.
13 Y cualquier varón de los hijos de Israel, y de los extranjeros, que peregrinan entre ellos que tomare caza de animal, o de ave, que sea de comer, derramará su sangre, y cubrirla ha con tierra.
೧೩“‘ಇಸ್ರಾಯೇಲರಲ್ಲಾಗಲಿ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಬೇಟೆಯಾಡಿ ತಿನ್ನತಕ್ಕ ಮೃಗವನ್ನು ಇಲ್ಲವೆ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿಸಿ ಮಣ್ಣಿನಿಂದ ಮುಚ್ಚಿಬಿಡಬೇಕು.
14 Porque el alma de toda carne en su sangre está su alma: por tanto he dicho a los hijos de Israel: No comeréis la sangre de ninguna carne, porque el alma de toda carne es su sangre: cualquiera que la comiere, será cortado.
೧೪ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
15 Ítem, cualquiera persona que comiere cosa mortecina, o despedazada, así de los naturales como de los extranjeros, lavará sus vestidos, y a sí se lavará con agua, y será inmunda hasta la tarde, y limpiarse ha.
೧೫“‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.
16 Y si no lavare, ni lavare su carne, llevará su iniquidad.
೧೬ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು.