< Proverbios 16 >
1 Del hombre son las preparaciones del corazón: mas de Jehová la respuesta de la lengua.
೧ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
2 Todos los caminos del hombre son limpios en su opinión: mas Jehová pesa los espíritus.
೨ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.
3 Encomienda a Jehová tus obras; y tus pensamientos serán afirmados.
೩ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.
4 Todas las cosas ha hecho Jehová por sí mismo; y aun al impío para el día malo.
೪ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
5 Abominación es a Jehová todo altivo de corazón: la mano junta a la mano, no será sin castigo.
೫ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
6 Con misericordia y verdad será reconciliado el pecado; y con el temor de Jehová se aparta del mal.
೬ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
7 Cuando los caminos del hombre serán agradables a Jehová, aun sus enemigos pacificará con él.
೭ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.
8 Mejor es lo poco con justicia, que la muchedumbre de los frutos sin derecho.
೮ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.
9 El corazón del hombre piensa su camino: mas Jehová endereza sus pasos.
೯ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
10 Adivinación está en los labios del rey: en juicio no prevaricará su boca.
೧೦ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.
11 Peso y balanzas derechas son de Jehová: obra suya son todas las pesas de la bolsa.
೧೧ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
12 Abominación es a los reyes hacer impiedad; porque con justicia será confirmado su trono.
೧೨ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.
13 Los labios justos son el contentamiento de los reyes; y al que habla lo recto aman.
೧೩ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು.
14 La ira del rey es mensajero de muerte: mas el hombre sabio la evitará.
೧೪ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
15 En la alegría del rostro del rey está la vida; y su benevolencia es como la nube tardía.
೧೫ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.
16 Mejor es adquirir sabiduría que oro preciado; y adquirir inteligencia vale más que la plata.
೧೬ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
17 El camino de los rectos es apartarse del mal: su alma guarda, el que guarda su camino.
೧೭ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
18 Antes del quebrantamiento es la soberbia; y antes de la caída, la altivez de espíritu.
೧೮ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
19 Mejor es abajar el espíritu con los humildes, que partir despojos con los soberbios.
೧೯ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
20 El entendido en la palabra, hallará el bien; y el que confía en Jehová, bienaventurado él.
೨೦ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
21 El sabio de entendimiento es llamado entendido; y la dulzura de labios aumentará la doctrina.
೨೧ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
22 Manadero de vida es el entendimiento al que le posee: mas la erudición de los insensatos es locura.
೨೨ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.
23 El corazón del sabio hace prudente su boca; y con sus labios aumenta la doctrina.
೨೩ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
24 Panal de miel son las hablas suaves, suavidad al alma, y medicina a los huesos.
೨೪ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
25 Hay camino que es derecho al parecer del hombre: mas su salida son caminos de muerte.
೨೫ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
26 El alma del que trabaja, trabaja para sí; porque su boca le constriñe.
೨೬ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.
27 El hombre perverso cava en busca del mal; y en sus labios es como llama de fuego.
೨೭ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.
28 El hombre perverso levanta contienda; y el chismoso aparta los príncipes.
೨೮ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
29 El hombre malo lisonjea a su prójimo; y le hace caminar por el camino no bueno:
೨೯ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.
30 Cierra sus ojos para pensar perversidades: mueve sus labios, efectúa el mal.
೩೦ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.
31 Corona de honra es la vejez: en el camino de justicia se hallará.
೩೧ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.
32 Mejor es el que tarde se aira, que el fuerte; y el que se enseñorea de su espíritu, que el que toma una ciudad.
೩೨ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
33 La suerte se echa en el seno: mas de Jehová es todo su juicio.
೩೩ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.