< Salmos 100 >
1 Cantád con júbilo a Dios los de toda la tierra.
೧ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
2 Servíd a Jehová con alegría: entrád delante de él con regocijo.
೨ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3 Sabéd que Jehová, él es el Dios: él nos hizo, y no nosotros a nosotros: pueblo suyo somos, y ovejas de su pasto.
೩ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4 Entrád por sus puertas con confesión, por sus patios con alabanza: alabádle, bendecíd a su nombre.
೪ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.
5 Porque Jehová es bueno, para siempre es su misericordia: y hasta en generación y generación su verdad.
೫ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.