< 2 Crónicas 4 >
1 HIZO además un altar de bronce de veinte codos de longitud, y veinte codos de anchura, y diez codos de altura.
೧ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.
2 También hizo un mar de fundición, el cual tenía diez codos del un borde al otro, enteramente redondo: su altura era de cinco codos, y una línea de treinta codos lo ceñía alrededor.
೨ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
3 Y debajo de él había figuras de bueyes que lo circundaban, diez en cada codo todo alrededor: eran dos órdenes de bueyes fundidos juntamente con el mar.
೩ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.
4 Y estaba asentado sobre doce bueyes, tres de los cuales miraban al septentrión, y tres al occidente, y tres al mediodía, y tres al oriente: y el mar asentaba sobre ellos, y todas sus traseras estaban á la parte de adentro.
೪ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.
5 Y tenía de grueso un palmo, y el borde era de la hechura del borde de un cáliz, ó flor de lis. Y hacía tres mil batos.
೫ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.
6 Hizo también diez fuentes, y puso cinco á la derecha y cinco á la izquierda, para lavar y limpiar en ellas la obra del holocausto; mas el mar era para lavarse los sacerdotes en él.
೬ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.
7 Hizo asimismo diez candeleros de oro según su forma, los cuales puso en el templo, cinco á la derecha, y cinco á la izquierda.
೭ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.
8 Además hizo diez mesas y púsolas en el templo, cinco á la derecha, y cinco á la izquierda: igualmente hizo cien tazones de oro.
೮ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
9 A más de esto hizo el atrio de los sacerdotes, y el gran atrio, y las portadas del atrio, y cubrió las puertas de ellas de bronce.
೯ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.
10 Y asentó el mar al lado derecho hacia el oriente, enfrente del mediodía.
೧೦ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
11 Hizo también Hiram calderos, y palas, y tazones; y acabó Hiram la obra que hacía al rey Salomón para la casa de Dios;
೧೧ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.
12 Dos columnas, y los cordones, los capiteles sobre las cabezas de las dos columnas, y dos redes para cubrir las dos bolas de los capiteles que estaban encima de las columnas;
೧೨ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,
13 Cuatrocientas granadas en las dos redecillas, dos órdenes de granadas en cada redecilla, para que cubriesen las dos bolas de los capiteles que estaban encima de las columnas.
೧೩ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,
14 Hizo también las basas, sobre las cuales asentó las fuentes;
೧೪ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,
15 Un mar, y doce bueyes debajo de él;
೧೫ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
16 Y calderos, y palas, y garfios; y todos sus enseres hizo Hiram su padre al rey Salomón para la casa de Jehová, de metal purísimo.
೧೬ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.
17 Y fundiólos el rey en los llanos del Jordán, en tierra arcillosa, entre Suchôt y Seredat.
೧೭ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.
18 Y Salomón hizo todos estos vasos en grande abundancia, porque no pudo ser hallado el peso del metal.
೧೮ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
19 Así hizo Salomón todos los vasos para la casa de Dios, y el altar de oro, y las mesas sobre las cuales se ponían los panes de la proposición;
೧೯ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,
20 Asimismo los candeleros y sus candilejas, de oro puro, para que las encendiesen delante del oratorio conforme á la costumbre.
೨೦ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,
21 Y las flores, y las lamparillas, y las despabiladeras [se hicieron] de oro, de oro perfecto;
೨೧ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.
22 También los platillos, y las jofainas, y las cucharas, y los incensarios, de oro puro. Cuanto á la entrada de la casa, sus puertas interiores para el lugar santísimo, y las puertas de la casa del templo, de oro.
೨೨ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.