< Eclesiastés 12 >
1 Y ACUÉRDATE de tu Criador en los días de tu juventud, antes que vengan los malos días, y lleguen los años, de los cuales digas, No tengo en ellos contentamiento;
೧ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
2 Antes que se oscurezca el sol, y la luz, y la luna y las estrellas, y las nubes se tornen tras la lluvia:
೨ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
3 Cuando temblarán los guardas de la casa, y se encorvarán los hombres fuertes, y cesarán las muelas, porque han disminuído, y se oscurecerán los que miran por las ventanas;
೩ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
4 Y las puertas de afuera se cerrarán, por la bajeza de la voz de la muela; y levantaráse á la voz del ave, y todas las hijas de canción serán humilladas;
೪ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
5 [Cuando] también temerán de lo alto, y los tropezones en el camino; y florecerá el almendro, y se agravará la langosta, y perderáse el apetito: porque el hombre va á la casa de su siglo, y los endechadores andarán en derredor por la plaza:
೫ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
6 Antes que la cadena de plata se quiebre, y se rompa el cuenco de oro, y el cántaro se quiebre junto á la fuente, y la rueda sea rota sobre el pozo;
೬ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
7 Y el polvo se torne á la tierra, como era, y el espíritu se vuelva á Dios que lo dió.
೭ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
8 Vanidad de vanidades, dijo el Predicador, todo vanidad.
೮“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
9 Y cuanto más sabio fué el Predicador, tanto más enseñó sabiduría al pueblo; é hizo escuchar, é hizo escudriñar, y compuso muchos proverbios.
೯ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
10 Procuró el Predicador hallar palabras agradables, y escritura recta, palabras de verdad.
೧೦ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
11 Las palabras de los sabios son como aguijones; y como clavos hincados, [las] de los maestros de las congregaciones, dadas por un Pastor.
೧೧ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
12 Ahora, hijo mío, á más de esto, sé avisado. No hay fin de hacer muchos libros; y el mucho estudio aflicción es de la carne.
೧೨ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
13 El fin de todo el discurso oído [es este]: Teme á Dios, y guarda sus mandamientos; porque esto es el todo del hombre.
೧೩ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
14 Porque Dios traerá toda obra á juicio, [el cual se hará] sobre toda cosa oculta, buena ó mala.
೧೪ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.