< Éxodo 4 >
1 ENTONCES Moisés respondió, y dijo: He aquí que ellos no me creerán, ni oirán mi voz; porque dirán: No te ha aparecido Jehová.
ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.
2 Y Jehová dijo: ¿Qué es eso que tienes en tu mano? Y él respondió: Una vara.
ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.
3 Y él le dijo: Échala en tierra. Y él la echó en tierra, y tornóse una culebra: y Moisés huía de ella.
ಯೆಹೋವ ದೇವರು ಅವನಿಗೆ, “ಅದನ್ನು ನೆಲದ ಮೇಲೆ ಬಿಸಾಡು,” ಎಂದರು. ಅವನು ಅದನ್ನು ನೆಲದ ಮೇಲೆ ಬಿಸಾಡಿದನು. ಆಗ ಅದು ಸರ್ಪವಾಯಿತು. ಮೋಶೆ ಅಲ್ಲಿಂದ ಓಡಿಹೋದನು.
4 Entonces dijo Jehová á Moisés: Extiende tu mano, y tómala por la cola. Y él extendió su mano, y tomóla, y tornóse vara en su mano.
ಯೆಹೋವ ದೇವರು ಮೋಶೆಗೆ, “ನಿನ್ನ ಕೈಚಾಚಿ, ಅದರ ಬಾಲವನ್ನು ಹಿಡಿ,” ಎಂದಾಗ, ಅವನು ಕೈಚಾಚಿ ಅದನ್ನು ಹಿಡಿದ ಕೂಡಲೇ, ಅದು ಅವನ ಕೈಯಲ್ಲಿ ಕೋಲಾಯಿತು.
5 Por esto creerán que se te ha aparecido Jehová, el Dios de tus padres, el Dios de Abraham, Dios de Isaac y Dios de Jacob.
ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.
6 Y díjole más Jehová: Mete ahora tu mano en tu seno. Y él metió la mano en su seno; y como la sacó, he aquí que su mano estaba leprosa como la nieve.
ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇನ್ನೂ ಮಾತನಾಡಿ, “ನಿನ್ನ ಕೈಯನ್ನು ನಿನ್ನ ಉಡಿಯಲ್ಲಿ ಇಟ್ಟುಕೋ,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆದನು. ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
7 Y dijo: Vuelve á meter tu mano en tu seno: y él volvió á meter su mano en su seno; y volviéndola á sacar del seno, he aquí que se había vuelto como la otra carne.
ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.
8 Sí aconteciere, que no te creyeren, ni obedecieren á la voz de la primera señal, creerán á la voz de la postrera.
ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.
9 Y si aun no creyeren á estas dos señales, ni oyeren tu voz, tomarás de las aguas del río, y derrámalas en tierra; y volverse han aquellas aguas que tomarás del río, se volverán sangre en la tierra.
ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು.
10 Entonces dijo Moisés á Jehová: ¡Ay Señor! yo no soy hombre de palabras de ayer ni de anteayer, ni aun desde que tú hablas á tu siervo; porque soy tardo en el habla y torpe de lengua.
ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.
11 Y Jehová le respondió: ¿Quién dió la boca al hombre? ¿ó quién hizo al mudo y al sordo, al que ve y al ciego? ¿no soy yo Jehová?
ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?
12 Ahora pues, ve, que yo seré en tu boca, y te enseñaré lo que hayas de hablar.
ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.
13 Y él dijo: ¡Ay Señor! envía por mano del que has de enviar.
ಅದಕ್ಕೆ ಮೋಶೆಯು, “ಸ್ವಾಮಿ, ನೀವು ಬೇರೊಬ್ಬನನ್ನು ಕಳುಹಿಸಿರಿ, ಎಂದು ಬೇಡುತ್ತೇನೆ,” ಎಂದನು.
14 Entonces Jehová se enojó contra Moisés, y dijo: ¿No conozco yo á tu hermano Aarón, Levita, y que él hablará? Y aun he aquí que él te saldrá á recibir, y en viéndote, se alegrará en su corazón.
ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.
15 Tú hablarás á él, y pondrás en su boca las palabras, y yo seré en tu boca y en la suya, y os enseñaré lo que hayáis de hacer.
ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.
16 Y él hablará por ti al pueblo; y él te será á ti en lugar de boca, y tú serás para él en lugar de Dios.
ಅವನು ನಿನ್ನ ಪರವಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿರುವನು, ನೀನು ಅವನಿಗೆ ದೇವರಂತಿರುವಿ.
17 Y tomarás esta vara en tu mano, con la cual harás las señales.
ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.
18 Así se fué Moisés, y volviendo á su suegro Jethro, díjole: Iré ahora, y volveré á mis hermanos que están en Egipto, para ver si aun viven. Y Jethro dijo á Moisés: Ve en paz.
ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.
19 Dijo también Jehová á Moisés en Madián: Ve, y vuélvete á Egipto, porque han muerto todos los que procuraban tu muerte.
ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.
20 Entonces Moisés tomó su mujer y sus hijos, y púsolos sobre un asno, y volvióse á tierra de Egipto: tomó también Moisés la vara de Dios en su mano.
ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.
21 Y dijo Jehová á Moisés: Cuando hubiereis vuelto á Egipto, mira que hagas delante de Faraón todas las maravillas que he puesto en tu mano: yo empero endureceré su corazón, de modo que no dejará ir al pueblo.
ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.
22 Y dirás á Faraón: Jehová ha dicho así: Israel es mi hijo, mi primogénito.
ಆಗ ನೀನು ಫರೋಹನಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲ ನನ್ನ ಮಗನು, ನನ್ನ ಜೇಷ್ಠಪುತ್ರನು.
23 Ya te he dicho que dejes ir á mi hijo, para que me sirva, mas no has querido dejarlo ir: he aquí yo voy á matar á tu hijo, tu primogénito.
ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.
24 Y aconteció en el camino, que en una posada le salió al encuentro Jehová, y quiso matarlo.
ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ ವಸತಿಗೃಹದಲ್ಲಿದ್ದಾಗ, ಯೆಹೋವ ದೇವರು ಮೋಶೆಯ ಎದುರಿಗೆ ಬಂದು ಅವನನ್ನು ಕೊಲ್ಲುವುದಕ್ಕಿದ್ದಾಗ,
25 Entonces Séphora cogió un afilado pedernal, y cortó el prepucio de su hijo, y echólo á sus pies, diciendo: A la verdad tú me eres un esposo de sangre.
ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು.
26 Así le dejó luego ir. Y ella dijo: Esposo de sangre, á causa de la circuncisión.
ಆಗ ಯೆಹೋವ ದೇವರು ಅವನನ್ನು ಉಳಿಸಿದರು. ಆಗ ಅವಳು, “ಸುನ್ನತಿಯ ನಿಮಿತ್ತ ನೀನು ನನಗೆ ರಕ್ತಧಾರೆಯಿಂದ ಗಂಡನಾಗಿದ್ದೀ,” ಎಂದಳು.
27 Y Jehová dijo á Aarón: Ve á recibir á Moisés al desierto. Y él fué, y encontrólo en el monte de Dios, y besóle.
ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.
28 Entonces contó Moisés á Aarón todas las palabras de Jehová que le enviaba, y todas las señales que le había dado.
ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಯೆಹೋವ ದೇವರ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
29 Y fueron Moisés y Aarón, y juntaron todos los ancianos de los hijos de Israel:
ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲಿನ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
30 Y habló Aarón todas las palabras que Jehová había dicho á Moisés, é hizo las señales delante de los ojos del pueblo.
ಯೆಹೋವ ದೇವರು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ಹೇಳಿ, ಜನರ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.
31 Y el pueblo creyó: y oyendo que Jehová había visitado los hijos de Israel, y que había visto su aflicción, inclináronse y adoraron.
ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.