< Salmos 10 >
1 ¿POR qué estás lejos, oh Jehová, y te escondes en el tiempo de la tribulación?
೧ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?
2 Con arrogancia el malo persigue al pobre: serán cogidos en los artificios que han ideado.
೨ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
3 Por cuanto se alaba el malo del deseo de su alma, y bendice al codicioso, [á quien] Jehová aborrece.
೩ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
4 El malo, por la altivez de su rostro, no busca [á Dios]: no hay Dios [en] todos sus pensamientos.
೪ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
5 Sus caminos son viciosos en todo tiempo: tus juicios [los tiene] muy lejos de su vista: echa bocanadas en [orden á] todos sus enemigos.
೫ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.
6 Dice en su corazón: No seré movido en ningún tiempo, ni jamás [me alcanzará] el infortunio.
೬ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.
7 Llena está su boca de maldición, y de engaños y fraude: debajo de su lengua, vejación y maldad.
೭ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
8 Está en las guaridas de las aldeas: en los escondrijos mata al inocente: sus ojos están acechando al pobre.
೮ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
9 Acecha en oculto, como el león desde su cama: acecha para arrebatar al pobre: arrebata al pobre trayéndolo á su red.
೯ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.
10 Encógese, agáchase, y caen en sus fuerzas muchos desdichados.
೧೦ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ.
11 Dice en su corazón: Dios está olvidado, ha encubierto su rostro; nunca lo verá.
೧೧ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.
12 Levántate, oh Jehová Dios, alza tu mano, no te olvides de los pobres.
೧೨ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.
13 ¿Por qué irrita el malo á Dios? En su corazón ha dicho que no [lo] inquirirás.
೧೩“ದೇವರು ವಿಚಾರಿಸುವುದೇ ಇಲ್ಲ” ಎಂದು ಹೇಳುತ್ತಾ, ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
14 Tú [lo] tienes visto: porque tú miras el trabajo, y la vejación, para vengar[le] por tu mano: á ti se acoge el pobre, tú eres el amparo del huérfano.
೧೪ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
15 Quebranta el brazo del malo: del maligno buscarás su maldad, hasta que ninguna halles.
೧೫ದುಷ್ಟನ ಭುಜಬಲವನ್ನು ಮುರಿದುಹಾಕು, ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲಮಾಡಿಬಿಡು.
16 Jehová, Rey eterno y perpetuo; de su tierra fueron destruídas las gentes.
೧೬ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
17 El deseo de los humildes oíste, oh Jehová: tú dispones su corazón, y haces atento tu oído;
೧೭ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.
18 Para juzgar al huérfano y al pobre, á fin de que no vuelva más á hacer violencia el hombre de la tierra.
೧೮ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.