< Salmos 141 >

1 Salmo de David. JEHOVÁ, á ti he clamado: apresúrate á mí; escucha mi voz, cuando te invocare.
ದಾವೀದನ ಕೀರ್ತನೆ. ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.
2 Sea enderezada mi oración delante de ti como un perfume, el don de mis manos como la ofrenda de la tarde.
ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
3 Pon, oh Jehová, guarda á mi boca: guarda la puerta de mis labios.
ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.
4 No dejes se incline mi corazón á cosa mala, á hacer obras impías con los que obran iniquidad, y no coma yo de sus deleites.
ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
5 Que el justo me castigue, [será] un favor, y que me reprenda [será] un excelente bálsamo [que] no me herirá la cabeza: así que aun mi oración [tendrán] en sus calamidades.
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
6 Serán derribados en lugares peñascosos sus jueces, y oirán mis palabras, que son suaves.
ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.
7 Como quien hiende y rompe la tierra, son esparcidos nuestros huesos á la boca de la sepultura. (Sheol h7585)
ಒಬ್ಬನು ಹೊಲವನ್ನು ಉಳುತ್ತಾ, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. (Sheol h7585)
8 Por tanto á ti, oh Jehová Señor, [miran] mis ojos: en ti he confiado, no desampares mi alma.
ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.
9 Guárdame de los lazos que me han tendido, y de los armadijos de los que obran iniquidad.
ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.
10 Caigan los impíos á una en sus redes, mientras yo pasaré adelante.
೧೦ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.

< Salmos 141 >