< Zacarías 5 >
1 Y TORNÉME, y alcé mis ojos, y miré, y he aquí un rollo que volaba.
೧ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು.
2 Y díjome: ¿Qué ves? Y respondí: Veo un rollo que vuela, de veinte codos de largo, y diez codos de ancho.
೨ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.
3 Díjome entonces: Esta es la maldición que sale sobre la haz de toda la tierra; porque todo aquel que hurta, (como [está] de la una parte del rollo) será destruído; y todo aquel que jura, (como [está] de la otra parte del rollo) será destruído.
೩ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.
4 Yo la saqué, dice Jehová de los ejércitos, y vendrá á la casa del ladrón, y á la casa del que jura falsamente en mi nombre; y permanecerá en medio de su casa, y consumirála, con sus enmaderamientos y sus piedras.
೪ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.
5 Y salió aquel ángel que hablaba conmigo, y díjome: Alza ahora tus ojos, y mira qué es esto que sale.
೫ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.
6 Y dije: ¿Qué es? Y él dijo: Este es un epha que sale. Además dijo: Este es el ojo de ellos en toda la tierra.
೬ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.
7 Y he aquí, traían un talento de plomo, y una mujer estaba asentada en medio de aquel epha.
೭ಇಗೋ, ತಟ್ಟೆಯಾಕಾರದ ಸೀಸದ ಮುಚ್ಚಳವು ತೆರೆಯಲ್ಪಡಲಾಗಿ ಆಹಾ, ಒಬ್ಬ ಸ್ತ್ರೀ ಅದರಲ್ಲಿ ಕುಳಿತುಕೊಂಡಿದ್ದಳು.
8 Y él dijo: Esta es la Maldad; y echóla dentro del epha, y echó la masa de plomo en su boca.
೮ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.
9 Alcé luego mis ojos, y miré, y he aquí dos mujeres que salían, y traían viento en sus alas, y tenían alas como de cigüeña, y alzaron el epha entre la tierra y los cielos.
೯ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.
10 Y dije al ángel que hablaba conmigo: ¿A dónde llevan el epha?
೧೦ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದು ಹೇಳಿದೆನು.
11 Y él me respondió: Para que le sea edificada casa en tierra de Shinar: y será asentado y puesto allá sobre su asiento.
೧೧ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.