< San Mateo 22 >
1 Y RESPONDIENDO Jesus, les volvió á hablar en parábolas, diciendo:
೧ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,
2 El reino de los cielos es semejante á un hombre rey, que hizo bodas á su hijo:
೨“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
3 Y envió sus siervos para que llamasen los llamados á las bodas; mas no quisieron venir.
೩ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
4 Volvió á enviar otros siervos, diciendo: Decid á los llamados: Hé aquí, mi comida he aparejado; mis toros, y animales engordados [son] muertos, y todo [está] prevenido: venid á las bodas.
೪ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
5 Mas ellos no se cuidaron, y se fueron; uno á su labranza, y otro á sus negocios;
೫ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
6 Y otros, tomando sus siervos, [los] afrentaron, y [los] mataron.
೬ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
7 Y el rey, oyendo [esto, ] se enojó; y enviando sus ejércitos, destruyó á aquellos homicidas, y puso fuego á su ciudad.
೭ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
8 Entónces dice á sus siervos: las bodas á la verdad están aparejadas; mas los que eran llamados no eran dignos.
೮ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
9 Id pues á las salidas de los caminos, y llamad á las bodas á cuantos hallareis.
೯ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
10 Y saliendo los siervos por los caminos, juntaron á todos los que hallaron, juntamente malos y buenos; y las bodas fueron llenas de convidados.
೧೦ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
11 Y entró el rey para ver los convidados, y vió allí un hombre no vestido de boda.
೧೧ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
12 Y le dijo: Amigo, ¿cómo entraste acá no teniendo vestido de boda? Mas él cerró la boca.
೧೨ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
13 Entónces el rey dijo á los que servian: Atado de piés y de manos tomadle y echadle en las tinieblas de afuera; ahí será el lloro, y el crujir de dientes.
೧೩ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
14 Porque muchos son llamados, y pocos escogidos.
೧೪ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
15 Entónces idos los Fariséos, consultaron como le tomarian en [alguna] palabra.
೧೫ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
16 Y envian á él los discípulos de ellos con los Herodianos, diciendo: Maestro, sabemos que eres amador de verdad, y [que] enseñas con verdad el camino de Dios, y [que] no te curas de nadie, por que no tienes acepcion de persona de hombres.
೧೬ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
17 Dínos pues, ¿qué te parece? ¿es lícito dar tributo á César, ó no?
೧೭ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
18 Mas Jesus, entendida la malicia de ellos, [les] dice: ¿Por qué me tentais, hipócritas?
೧೮ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
19 Mostradme la moneda del tributo. Y ellos le presentaron un denario.
೧೯ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
20 Entónces les dice: ¿Cuya [es] esta figura, y lo que está encima escrito?
೨೦ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
21 Dícenle: De César. Y díceles: Pagad, pues, á César lo [que es] de César, y á Dios lo [que es] de Dios.
೨೧ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
22 Y oyendo [esto] se maravillaron, y dejándole se fueron.
೨೨ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
23 Aquel dia llegaron á él los Saducéos, que dicen no haber resurreccion, y le preguntaron,
೨೩ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
24 Diciendo: Maestro, Moisés dijo: Si alguno muriere sin hijos, su hermano se casará con su mujer, y despertará simiente á su hermano.
೨೪ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
25 Fueron pues entre nosotros siete hermanos: y el primero tomó mujer, y murió; y no teniendo generacion, dejó su mujer á su hermano.
೨೫ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
26 De la misma manera tambien el segundo, y el tercero, hasta los siete.
೨೬ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
27 Y despues de todos murió tambien la mujer.
೨೭ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
28 En la resurreccion, pues, ¿de cuál de los siete sera ella mujer? porque todos la tuvieron.
೨೮ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
29 Entónces, respondiendo Jesus, les dijo: Errais, ignorando las escrituras, y la potencia de Dios.
೨೯ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
30 Porque en la resurreccion, ni los hombres tomarán mujeres, ni las mujeres maridos; mas son como los ángeles de Dios en el cielo.
೩೦ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
31 Y de la resurreccion de los muertos, ¿no habeis leido lo que os es dicho por Dios, que dice:
೩೧ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
32 Yo soy el Dios de Abraham, y el Dios de Isaac, y el Dios de Jacob? Dios no es Dios de muertos, sino de vivos.
೩೨‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
33 Y oyendo [esto] las gentes, estaban atónitas de su doctrina.
೩೩ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
34 Entónces los Fariséos, oyendo que habia cerrado la boca á los Saducéos, se juntaron á una;
೩೪ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
35 Y preguntó uno de ellos, intérprete de la ley, tentándole, y diciendo:
೩೫ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
36 Maestro, ¿cuál [es] el mandamiento grande en la ley?
೩೬“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
37 Y Jesus le dijo: Amarás al Señor tu Dios de todo tu corazon, y de toda tu alma, y de toda tu mente.
೩೭ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
38 Este es el primero y el grande mandamiento.
೩೮ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
39 Y el segundo [es] semejante á este: Amarás á tu prójimo como á tí mismo.
೩೯ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
40 De estos dos mandamientos depende toda la ley, y los profetas.
೪೦ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
41 Y estando juntos los Fariséos, Jesus les preguntó,
೪೧ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
42 Diciendo: ¿Qué os parece del Cristo? ¿de quién es Hijo? Dícenle: De David.
೪೨“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
43 El les dice: ¿Pues cómo David en Espíritu le llama Señor, diciendo:
೪೩ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
44 Dijo el Señor á mi Señor: Siéntate á mi diestra, entretanto que pongo tus enemigos por estrado de tus piés?
೪೪“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
45 Pues si David le llama Señor, ¿cómo es su Hijo?
೪೫ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
46 Y nadie le podia responder palabra; ni osó alguno desde aquel dia preguntarle más.
೪೬ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.