< 1 Juan 5 >
1 Todo aquel que cree que Jesús es el Cristo, es nacido de Dios; y cualquiera que ama al que engendró, ama también al que es nacido de él.
೧ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.
2 En esto conocemos que amamos a los hijos de Dios, cuando amamos a Dios, y guardamos sus mandamientos.
೨ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
3 Porque esta es la caridad de Dios, que guardemos sus mandamientos, y sus mandamientos no son gravosos.
೩ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
4 Porque todo aquello que es nacido de Dios, vence al mundo; y esta es la victoria que vence al mundo, es a saber nuestra fe.
೪ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ.
5 ¿Quién es el que vence al mundo, sino el que cree que Jesús es el Hijo de Dios?
೫ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
6 Este es Jesús, el Cristo, que vino por agua y sangre; no por agua solamente, sino por agua y sangre. Y el Espíritu es el que da testimonio, porque el Espíritu es la verdad.
೬ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.
7 Porque tres son los que dan testimonio del cielo: el Padre, la Palabra y el Espíritu Santo; y estos tres son uno.
೭ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
8 También son tres los que dan testimonio en la tierra, el Espíritu, y el agua, y la sangre; y estos tres concuerdan en uno.
೮ಆತ್ಮ, ನೀರು, ರಕ್ತ ಎಂಬ ಮೂರು ಸಾಕ್ಷಿಗಳುಂಟು. ಈ ಮೂರು ಒಂದೇ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತವೆ.
9 Si recibimos el testimonio de los hombres, el testimonio de Dios es mayor; porque éste es el testimonio de Dios, que ha testificado de su Hijo.
೯ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.
10 El que cree en el Hijo de Dios, tiene el testimonio de Dios en sí mismo; el que no cree a Dios, ha hecho mentiroso a Dios, porque no ha creído en el testimonio que Dios ha testificado de su Hijo.
೧೦ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
11 Y este es el testimonio, que Dios nos ha dado vida eterna; y esta vida está en su Hijo. (aiōnios )
೧೧ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. (aiōnios )
12 El que tiene al Hijo, tiene la vida; el que no tiene al Hijo de Dios, no tiene vida.
೧೨ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
13 Estas cosas he escrito a vosotros que creéis en el Nombre del Hijo de Dios; para que sepáis que tenéis vida eterna, y para que creáis en el Nombre del Hijo de Dios. (aiōnios )
೧೩ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ. (aiōnios )
14 Y esta es la confianza que tenemos en Dios, que si pedimos alguna cosa conforme a su voluntad, él nos oye.
೧೪ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
15 Y si sabemos que él nos oye en cualquier cosa que pidamos, también sabemos que tenemos las peticiones que le hubiéremos pedido.
೧೫ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
16 Si alguno viere pecar a su hermano pecado que no es de muerte, pedirá a Dios, y él le dará vida; digo a los que pecan no de muerte: Hay pecado de muerte, por el cual yo no digo que ruegues.
೧೬ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
17 Toda maldad es pecado; mas hay pecado que no es de muerte.
೧೭ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
18 Bien sabemos que cualquiera que es nacido de Dios, no peca; mas el que es engendrado de Dios, se guarda a sí mismo, y el maligno no le toca.
೧೮ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
19 Sabemos que somos de Dios, y el mundo entero yace en maldad.
೧೯ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
20 Pero sabemos que el Hijo de Dios es venido, y nos ha dado entendimiento; para conocer al que es verdadero; y estamos en el verdadero, en su Hijo Jesús, el Cristo. Este es el verdadero Dios, y la vida eterna. (aiōnios )
೨೦ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ. (aiōnios )
21 Hijitos, guardaos de los ídolos. Amén.
೨೧ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.