< 2 Samuel 20 >
1 Y acaeció estar allí un varón de Belial que se llamaba Seba, hijo de Bicri, varón de Jemini, el cual tocó la trompeta diciendo: No tenemos nosotros parte en David, ni heredad en el hijo de Isaí. Israel, ¡cada uno a sus estancias!
೧ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.
2 Así se fueron de en pos de David todos los varones de Israel, y seguían a Seba hijo de Bicri; mas los que eran de Judá fueron adheridos a su rey, desde el Jordán hasta Jerusalén.
೨ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.
3 Y luego que llegó David a su casa en Jerusalén, tomó el rey las diez mujeres concubinas que había dejado para guardar la casa, y las puso en una casa bajo guardia, y les dio de comer; pero nunca más entró a ellas, sino que quedaron encerradas hasta que murieron en viudez de por vida.
೩ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.
4 Y el rey dijo a Amasa: Júntame los varones de Judá para el tercer día, y hállate tú aquí presente.
೪ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.
5 Fue, pues, Amasa a juntar a Judá; pero se detuvo más del tiempo que le había sido señalado.
೫ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ
6 Y dijo David a Abisai: Seba hijo de Bicri nos hará ahora más mal que Absalón; toma pues tú los siervos de tu señor, y ve tras él, no sea que halle las ciudades fortificadas, y se nos vaya de delante.
೬ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.
7 Entonces salieron en pos de él los hombres de Joab, y los cereteos y peleteos, y todos los hombres valientes salieron de Jerusalén para ir tras Seba hijo de Bicri.
೭ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.
8 Y estando ellos junto a la grande peña que está en Gabaón, les salió Amasa al encuentro. Y Joab estaba ceñido sobre su ropa que tenía puesto, sobre la cual tenía ceñido un cuchillo pegado a sus lomos en su vaina, el cual salió y cayó.
೮ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು.
9 Y Joab dijo a Amasa: ¿Tienes paz, hermano mío? Y tomó Joab con la diestra la barba de Amasa, para besarlo.
೯ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
10 Y Amasa no se cuidó del cuchillo que Joab tenía en la mano; y él le hirió con el cuchillo en la quinta costilla, y derramó sus entrañas por tierra, y cayó muerto sin darle segundo golpe. Después Joab y su hermano Abisai persiguieron a Seba hijo de Bicri.
೧೦ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
11 Y uno de los criados de Joab se paró junto a él, diciendo: Cualquiera que amare a Joab y a David vaya en pos de Joab.
೧೧ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು
12 Y Amasa se había revolcado en la sangre en mitad del camino; y viendo aquel hombre que todo el pueblo se paraba, apartó a Amasa del camino al campo, y echó sobre él una vestidura, porque veía que todos los que venían se paraban junto a él.
೧೨ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
13 Luego que fue apartado del camino, pasaron todos los que seguían a Joab, para ir tras Seba hijo de Bicri.
೧೩ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.
14 Y él pasó por todas las tribus de Israel hasta Abel y Bet-maaca y todo Barim; y se juntaron, y lo siguieron también.
೧೪ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.
15 Y vinieron y lo cercaron en Abel de Bet-maaca, y pusieron baluarte contra la ciudad; y el pueblo se puso al muro; y todo el pueblo que estaba con Joab trabajaba por derribar la muralla.
೧೫ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.
16 Entonces una mujer sabia dio voces en la ciudad, diciendo: Oíd, oíd; os ruego que digáis a Joab se llegue hasta acá, para que yo hable con él.
೧೬ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.
17 Y cuando él se acercó a ella, dijo la mujer: ¿Eres tú Joab? Y él respondió: Yo soy. Y ella le dijo: Oye las palabras de tu sierva. Y él respondió: Oigo.
೧೭ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.
18 Entonces volvió ella a hablar, diciendo: Antiguamente solían hablar, diciendo: Quien preguntare, pregunte en Abel; y así concluían.
೧೮ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.
19 Yo soy de las pacíficas y fieles de Israel; y tú procuras destruir una ciudad que es madre de Israel; ¿por qué destruyes la heredad del SEÑOR?
೧೯ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
20 Y Joab respondió, diciendo: Nunca tal, nunca tal me acontezca, que yo destruya ni deshaga.
೨೦ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.
21 La cosa no es así; mas un hombre del monte de Efraín, que se llama Seba hijo de Bicri, ha levantado su mano contra el rey David; entregad a ése solamente, y me iré de la ciudad. Y la mujer dijo a Joab: He aquí su cabeza te será echada desde el muro.
೨೧ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,
22 La mujer fue luego a todo el pueblo con su sabiduría; y ellos cortaron la cabeza a Seba hijo de Bicri, y la echaron a Joab. Y él tocó la trompeta, y se esparcieron todos de la ciudad, cada uno a su estancia. Y Joab se volvió al rey a Jerusalén.
೨೨ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.
23 Así quedó Joab sobre todo el ejército de Israel; y Benaía hijo de Joiada sobre los cereteos y peleteos;
೨೩ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.
24 y Adoram sobre los tributos; y Josafat hijo de Ahilud, el canciller;
೨೪ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.
25 y Seba, escriba; y Sadoc y Abiatar, sacerdotes;
೨೫ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.
26 e Ira jaireo fue sacerdote de David.
೨೬ಯಾಯೀರಿನವನಾದ ಈರನೂ ದಾವೀದನ ಯಾಜಕನು.