< Deuteronomio 19 >
1 Cuando el SEÑOR tu Dios talare los gentiles, cuya tierra el SEÑOR tu Dios te da a ti, y tú los heredares, y habitares en sus ciudades, y en sus casas;
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.
2 te apartarás tres ciudades en medio de tu tierra que el SEÑOR tu Dios te da para que la heredes.
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು.
3 Te arreglarás el camino, y dividirás en tres partes el término de tu tierra, que el SEÑOR tu Dios te dará en heredad, y será para que todo homicida huya allí.
ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
4 Y éste es el caso del homicida que ha de huir allí, y vivirá: el que hiriere a su prójimo por yerro, que no le tenía enemistad desde ayer ni anteayer;
ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.
5 y el que fue con su prójimo al monte a cortar leña, y poniendo fuerza con su mano en el hacha para cortar algún leño, saltó el hierro del cabo, y encontró a su prójimo, y murió; aquél huirá a una de estas ciudades, y vivirá.
ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.
6 Para que el vengador de la sangre no vaya tras el homicida, cuando se enardeciere su corazón, y le alcance por ser largo el camino, y le hiera de muerte, no debiendo ser condenado a muerte; por cuanto no tenía enemistad desde ayer ni anteayer con el muerto.
ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.
7 Por tanto yo te mando, diciendo: Tres ciudades te apartarás.
ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.
8 Y si el SEÑOR tu Dios ensanchare tu término, como lo juró a tus padres, y te diere toda la tierra que dijo a tus padres que había de dar;
ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.
9 cuando guardases todos estos mandamientos, que yo te mando hoy, para ponerlos por obra, que ames al SEÑOR tu Dios y andes en sus caminos todos los días, entonces añadirás otras tres ciudades a más de estas tres;
ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಕಾಪಾಡಿ ಕೈಗೊಳ್ಳಬೇಕು. ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ಯಾವಾಗಲೂ ನಡೆದರೆ ನೀವು ಈ ಮೂರು ಪಟ್ಟಣಗಳ ಜೊತೆಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
10 para que no sea derramada sangre inocente en medio de tu tierra, que el SEÑOR tu Dios te da por heredad, y no sea sobre ti la sangre.
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.
11 Mas cuando hubiere alguno que aborreciere a su prójimo, y lo acechare, y se levantare sobre él, y lo hiriere de muerte, y muriere, y huyere a alguna de estas ciudades;
ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,
12 entonces los ancianos de su ciudad enviarán y lo sacarán de allí, y lo entregarán en mano del pariente del muerto, y morirá.
ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.
13 No le perdonará tu ojo; y quitarás de Israel la culpa de la sangre inocente, y te irá bien.
ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.
14 No reducirás el término de tu prójimo, el cual señalaron los antiguos en tu heredad, la que poseyeres en la tierra que el SEÑOR tu Dios te da para que la heredes.
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.
15 No valdrá un testigo contra ninguno en cualquier delito, o en cualquier pecado, en cualquier pecado que se cometiere. En el dicho de dos testigos, o en el dicho de tres testigos consistirá el negocio.
ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.
16 Cuando se levantare testigo falso contra alguno, para testificar contra él rebelión,
ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ,
17 entonces los dos hombres litigantes se presentarán delante del SEÑOR, delante de los sacerdotes y jueces que fueren en aquellos días;
ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
18 y los jueces inquirirán bien, y si pareciere ser aquél testigo falso, que testificó falsamente contra su hermano,
ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,
19 haréis a él como él pensó hacer a su hermano; y quitarás el mal de en medio de ti.
ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
20 Y los que quedaren oirán, y temerán, y no volverán más a hacer una mala cosa como ésta, en medio de ti.
ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.
21 Y no perdonará tu ojo; vida por vida, ojo por ojo, diente por diente, mano por mano, pie por pie.
ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.