< Ester 9 >
1 Y en el mes duodécimo, que es el mes de Adar, a los trece del mismo, donde llegó el mandamiento del rey y su ley, para que se pusiera por obra, el mismo día en que esperaban los enemigos de los judíos enseñorearse de ellos, fue lo contrario; porque los judíos se enseñorearon de los que los aborrecían.
೧ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.
2 Los judíos se juntaron en sus ciudades en todas las provincias del rey Asuero, para meter mano sobre los que habían procurado su mal; y nadie se puso delante de ellos, porque el temor de ellos había caído sobre todos los pueblos.
೨ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.
3 Y todos los príncipes de las provincias, y los virreyes, y capitanes, y oficiales del rey, ensalzaban a los judíos; porque el temor de Mardoqueo había caído sobre ellos.
೩ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.
4 Porque Mardoqueo era grande en la casa del rey, y su fama iba por todas las provincias; pues el varón Mardoqueo iba engrandeciéndose.
೪ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.
5 E hirieron los judíos a todos sus enemigos con plaga de espada, y de mortandad, y de perdición; e hicieron en sus enemigos a su voluntad.
೫ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು.
6 Y en Susa capital del reino, mataron y destruyeron los judíos a quinientos hombres.
೬ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನು ಕೊಂದುಬಿಟ್ಟರು.
7 Mataron entonces a Parsandata, y a Dalfón, y a Aspata,
೭ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
8 y a Porata y a Adalía, y a Aridata,
೮ಪೋರಾತ, ಆದಲ್ಯ, ಅರೀದಾತ,
9 y a Parmasta, y a Arisai, y a Aridai, y a Vaizata,
೯ಪರ್ಮಷ್ಟ, ಅರೀಸೈ, ಅರಿದೈ, ವೈಜಾತ ಎಂಬುವವರಿದ್ದರು.
10 diez hijos de Amán hijo de Hamedata, enemigo de los judíos; mas en el despojo no metieron su mano.
೧೦ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
11 El mismo día vino la cuenta de los muertos en Susa capital del reino, delante del rey.
೧೧ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
12 Y dijo el rey a la reina Ester: En Susa, capital del reino, los judíos han matado y destruido a quinientos hombres, y a diez hijos de Amán; ¿qué habrán hecho en las otras provincias del rey? ¿Cuál pues es tu petición, y te será concedida? ¿Y qué más es tu demanda, y será hecho?
೧೨ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.
13 Y respondió Ester: Si place al rey, concédase también mañana a los judíos en Susa, que hagan conforme a la ley de hoy; y que cuelguen en la horca a los diez hijos de Amán.
೧೩ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.
14 Y mandó el rey que se hiciese así; y fue dada por ley en Susa, y colgaron a los diez hijos de Amán.
೧೪ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.
15 Y los judíos que estaban en Susa, se juntaron también el catorce del mes de Adar, y mataron en Susa trescientos hombres; mas en el despojo no metieron su mano.
೧೫ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.
16 Y los otros judíos que estaban en las provincias del rey, también se juntaron y se pusieron en defensa de su vida, y tuvieron reposo de sus enemigos, y mataron de sus enemigos setenta y cinco mil; mas en el despojo no metieron su mano.
೧೬ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.
17 En el día trece del mes de Adar fue esto; y reposaron en el día catorce del mismo, y lo hicieron día de banquete y de alegría.
೧೭ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.
18 Mas los judíos que estaban en Susa se juntaron en el trece y en el catorce del mismo mes; y al quince del mismo reposaron, y lo hicieron día de banquete y de alegría.
೧೮ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.
19 Por tanto los judíos aldeanos que habitan en las villas sin muro, hacen a los catorce del mes de Adar el día de alegría y de banquete, y buen día, y de enviar porciones cada uno a su vecino.
೧೯ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
20 Y escribió Mardoqueo estas cosas, y envió cartas a todos los judíos que estaban en todas las provincias del rey Asuero, cercanos y distantes,
೨೦ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
21 Constituyéndoles que celebrasen el día décimocuarto del mes de Adar, y el decimoquinto del mismo, cada año,
೨೧ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.
22 por aquellos días en que los judíos tuvieron reposo de sus enemigos, y el mes que se les fue tornado de tristeza en alegría, y de luto en día bueno; que los hiciesen días de banquete y de gozo, y de enviar porciones cada uno a su vecino, y dádivas a los pobres.
೨೨ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.
23 Y los judíos aceptaron y comenzaron a hacer, lo que les escribió Mardoqueo.
೨೩ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು.
24 Porque Amán hijo de Hamedata, agageo, enemigo de los judíos, había ideado contra los judíos para destruirlos, y echó Pur, que quiere decir suerte, para consumirlos y echarlos a perder.
೨೪ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.
25 Mas cuando ella vino a la presencia del rey, él ordenó por escrito: El perverso designio que aquél trazó contra los judíos, recaiga sobre su cabeza; y cuélguenlo a él y a sus hijos en la horca.
೨೫ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.
26 Por esto llamaron a estos días Purim, del nombre Pur. Por todas las palabras pues de esta carta, y por lo que ellos vieron sobre esto, y lo que llegó a su noticia,
೨೬ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.
27 establecieron y tomaron los judíos sobre sí, y sobre su simiente, y sobre todos los allegados a ellos, y no será traspasado, el celebrar estos dos días según está escrito en orden a ellos, y conforme a su tiempo cada año;
೨೭ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,
28 y que estos dos días serían en memoria, y celebrados en todas las naciones, y familias, y provincias, y ciudades. Estos días de Purim no pasarán de entre los judíos, y la memoria de ellos no cesará de su simiente.
೨೮ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.
29 Y la reina Ester hija de Abihail, y Mardoqueo judío, escribieron con toda autoridad, para confirmar esta segunda carta de Purim.
೨೯ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.
30 Y envió Mardoqueo cartas a todos los judíos, a las ciento veintisiete provincias del rey Asuero, con palabras de paz y de verdad,
೩೦ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
31 para confirmar estos días del Purim en sus tiempos señalados, según les había constituído Mardoqueo judío y la reina Ester, y como habían ellos tomado sobre sí y sobre su simiente las palabras de los ayunos y de su clamor.
೩೧ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.
32 Y el mandamiento de Ester confirmó estas palabras del Purim, y fue escrito en el libro.
೩೨ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.