< Números 5 >
1 Y el SEÑOR habló a Moisés, diciendo:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 Manda a los hijos de Israel que echen del campamento a todo leproso, y a todos los que padecen flujo de semen, y a todo contaminado sobre muerto.
೨“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.
3 Así hombres como mujeres echaréis, fuera del campamento los echaréis; para que no contaminen el campamento de aquellos entre los cuales yo habito.
೩ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”
4 Y lo hicieron así los hijos de Israel, los echaron fuera del campamento; como el SEÑOR dijo a Moisés, así lo hicieron los hijos de Israel.
೪ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.
5 Además habló el SEÑOR a Moisés, diciendo:
೫ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
6 Habla a los hijos de Israel: El hombre o la mujer que cometiere alguno de todos los pecados de los hombres, haciendo prevaricación contra el SEÑOR, y pecare aquella persona;
೬“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
7 confesarán su pecado que cometieron, y restituirán su ofensa enteramente, y añadirán sobre ello la quinta parte, y lo darán a aquel contra quien pecaron.
೭ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.
8 Y si aquel varón no tuviere redentor al cual el delito sea restituido, el delito se restituirá al SEÑOR, al sacerdote, a más del carnero de las expiaciones, con el cual lo expiará.
೮“ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
9 Y toda ofrenda de todas las cosas santas que los hijos de Israel presentaren al sacerdote, suya será.
೯ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
10 Y lo santificado de cualquiera será suyo; asimismo lo que cualquiera diere al sacerdote, suyo será.
೧೦ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
11 Y el SEÑOR habló a Moisés, diciendo:
೧೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
12 Habla a los hijos de Israel, y diles: Cuando la mujer de alguno errare, e hiciere traición contra él,
೧೨“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,
13 que alguno se hubiere echado con ella por ayuntamiento de simiente, y su marido no lo hubiese visto por haberse ella contaminado ocultamente, ni hubiere testigo contra ella, ni ella hubiere sido cogida en el acto;
೧೩ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ,
14 si viniere sobre él espíritu de celo, y tuviere celos de su mujer, habiéndose ella contaminado; o viniere sobre él espíritu de celo, y tuviere celos de su mujer, no habiéndose ella contaminado;
೧೪ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
15 entonces el marido traerá su mujer al sacerdote, y traerá su ofrenda con ella, la décima de un efa de harina de cebada; no echará sobre ella aceite, ni pondrá sobre ella incienso, porque es presente de celos, presente de recordación, que trae en memoria pecado.
೧೫ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
16 Y el sacerdote la hará acercar, y la hará poner delante del SEÑOR.
೧೬“‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.
17 Luego tomará el sacerdote del agua santa en un vaso de barro; tomará también el sacerdote del polvo que hubiere en el suelo del tabernáculo, y lo echará en el agua.
೧೭ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
18 Y hará el sacerdote estar en pie a la mujer delante del SEÑOR, y descubrirá la cabeza de la mujer, y pondrá sobre sus manos el presente de la recordación, que es el presente de celos; y el sacerdote tendrá en la mano las aguas amargas que acarrean maldición.
೧೮ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
19 Y el sacerdote la conjurará, y le dirá: Si ninguno hubiere dormido contigo, y si no te has apartado de tu marido a inmundicia, limpia seas de estas aguas amargas que traen maldición.
೧೯ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
20 Mas si te has apartado de tu marido, y te has contaminado, y alguno hubiere puesto en ti su simiente, fuera de tu marido;
೨೦ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,”
21 (el sacerdote conjurará a la mujer con juramento de maldición, y dirá a la mujer): el SEÑOR te dé en maldición y en conjuración en medio de tu pueblo, haciendo el SEÑOR a tu muslo que caiga, y a tu vientre que se te hinche;
೨೧“ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
22 y estas aguas que dan maldición entren en tus entrañas, y hagan henchir tu vientre, y caer tu muslo. Y la mujer dirá: Amén, amén.
೨೨ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
23 Y el sacerdote escribirá estas maldiciones en un libro, y las borrará con las aguas amargas;
೨೩“‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು.
24 y dará a beber a la mujer las aguas amargas que traen maldición; y las aguas que obran maldición entrarán en ella por amargas.
೨೪ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
25 Después tomará el sacerdote de la mano de la mujer el presente de los celos, y lo mecerá delante del SEÑOR, y lo ofrecerá delante del altar.
೨೫ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.
26 Y tomará el sacerdote un puñado del presente, en memoria de ella, y hará perfume de ello sobre el altar, y después dará a beber las aguas a la mujer.
೨೬ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.
27 Le dará, pues, a beber las aguas; y será, que si fuere inmunda y hubiere hecho traición contra su marido, las aguas que obran maldición entrarán en ella en amargura, y su vientre se hinchará, y caerá su muslo; y la tal mujer será por maldición en medio de su pueblo.
೨೭ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.
28 Mas si la mujer no fuere inmunda, sino que estuviere limpia, ella será libre, y será fecunda.
೨೮ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.
29 Esta es la ley de los celos, cuando la mujer errare estando en poder de su marido, y se contaminare;
೨೯ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.
30 o del marido, sobre el cual pasare espíritu de celo, y tuviere celos de su mujer; la presentará entonces delante del SEÑOR, y el sacerdote ejecutará en ella toda esta ley.
೩೦ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
31 Y aquel varón será libre de iniquidad, y la mujer llevará su pecado.
೩೧ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’”