< 1 Reyes 6 >
1 En el año cuatrocientos ochenta después de que los hijos de Israel salieron de la tierra de Egipto, en el cuarto año que Salomón fue rey de Israel, en el mes Ziv, que es el segundo mes, la construcción de La casa del Señor fue iniciada.
೧ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
2 El templo que Salomón hizo para el Señor tenía sesenta codos de largo, veinte codos de ancho y treinta codos de alto.
೨ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ.
3 El pórtico delante del Templo de la casa tenía veinte codos de largo, tan ancho como la casa, y diez codos de ancho frente a la casa.
೩ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.
4 Y para él templo hizo ventanas, con rejas.
೪ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಿಕಿಗಳನ್ನಿರಿಸಿದನು.
5 Y contra los muros alrededor, y contra los muros del Templo y de la habitación de abajo, construyó anexos, con cuartos laterales alrededor:
೫ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.
6 La línea más baja de ellos tiene cinco codos de ancho, los seis codos de ancho y el tercero de siete codos; Porque había un espacio alrededor de las paredes exteriores de la casa para que las tablas que soportaban las habitaciones no tuvieran que fijarse en las paredes del templo.
೬ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.
7 Y las piedras usadas en la construcción del templo estaban cuadradas en el lugar donde fueron cortadas; no se oía ningún martillo, hacha ni ningún instrumento de hierro mientras construían la casa.
೭ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.
8 La puerta de las habitaciones laterales más bajas estaba en el lado derecho de la casa; y subía en caracol los escalones en las habitaciones intermedias, y desde la mitad hacia la tercera.
೮ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.
9 Entonces él levantó el templo y lo completó, lo cubrió con tablas de madera de cedro.
೯ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.
10 Y puso la línea de cuartos laterales contra las paredes de la casa, de quince codos de altura, apoyada contra la casa sobre tablas de madera de cedro.
೧೦ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.
11 Y vino palabra del Señor a Salomón, diciendo:
೧೧ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು.
12 Acerca del templo que estás construyendo, si guardas mis leyes y cumples mis decisiones y te guías por mis reglas, cumpliré mi palabra que le di a David, tu padre.
೧೨“ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
13 Y estaré siempre entre los hijos de Israel, y no abandonaré mi pueblo.
೧೩ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು.
14 Así que Salomón terminó la construcción del templo.
೧೪ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.
15 Las paredes de la casa estaban cubiertas con tablas de madera de cedro; desde el suelo hasta el techo del templo, estaban cubiertas de madera; y el suelo estaba cubierto de tablas de madera de ciprés.
೧೫ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
16 Y en la parte posterior de la casa se cerró un espacio adicional de veinte codos con tablas de madera de cedro, para la habitación del lugar santísimo.
೧೬ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
17 Y la casa, es decir, el Templo, frente al lugar santísimo, tenía cuarenta codos de largo.
೧೭ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.
18 Todo el interior de la casa era de madera de cedro, tallada con diseños de capullos y flores; no se veía piedra en el interior.
೧೮ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
19 Y preparó una habitación en el centro del templo, para poner el cofre del pacto del Señor.
೧೯ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
20 En el interior del lugar santísimo tenía veinte codos de forma cuadrada y veinte codos de altura, revestida de oro puro, e hizo un altar de madera de cedro, recubierto de oro.
೨೦ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.
21 Salomón tenía todo el interior de la casa cubierto de oro, y él puso cadenas de oro frente al lugar santísimo, que a su vez estaba cubierto de oro.
೨೧ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
22 Se pusieron placas de oro en toda la casa hasta que se cubrió completamente y el altar del lugar santísimo estaba cubierto de oro.
೨೨ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
23 En el cuarto más íntimo hizo dos querubines seres alados de madera de olivo, diez codos de altura;
೨೩ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
24 Con las alas extendidas de cinco codos de ancho; la distancia desde el borde de un ala hasta el borde de la otra era de diez codos.
೨೪ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.
25 Los dos seres alados tenían diez codos de altura, del mismo tamaño y forma.
೨೫ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.
26 Los dos tenían diez codos de alto.
೨೬ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.
27 Estos se colocaron dentro del lugar santísimo, sus alas extendidas tocaban las paredes de la casa, una tocaba una pared y la otra, mientras que las otras alas tocaban en el medio.
೨೭ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.
28 Los seres alados estaban cubiertos de oro.
೨೮ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.
29 Y todas las paredes de la casa, por dentro y por fuera, estaban adornadas con formas de querubines, palmeras y flores abiertas.
೨೯ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
30 Y el piso de la casa estaba cubierto de oro, por dentro y por fuera.
೩೦ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.
31 Para el camino al lugar santísimo, hizo las puertas de madera de olivo, el arco y los soportes de las puertas formando una abertura de cinco lados.
೩೧ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.
32 En las puertas de madera de olivo se cortaron diseños de querubines, palmeras y flores abiertas, todas ellas, con las puertas, chapadas en oro.
೩೨ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.
33 Luego hizo columnas de madera de olivo para el camino hacia el templo; Los pilares eran cuadrados:
೩೩ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
34 Y dos puertas plegables de madera de ciprés, con dos hojas.
೩೪ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
35 Estaban labrados con diseños querubines, palmeras y flores abiertas, chapados en oro.
೩೫ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.
36 Y el espacio interior estaba amurallado con tres líneas de piedras cuadradas y una línea de tablas de madera de cedro.
೩೬ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.
37 En el cuarto año se colocó la base del templo en su lugar, en el mes Ziv.
೩೭ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.
38 Y en el año undécimo, en el mes Bul, que es el octavo mes, la construcción del templo se completó en cada detalle, como se había diseñado. Así que llevo siete años construyéndose.
೩೮ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.