< 2 Crónicas 32 >
1 Ahora, después de estas cosas y esta obra de corazón sincero, Senaquerib, rey de Asiria, entró en Judá y puso a su ejército en posición frente a las ciudades amuralladas de Judá, tratando de penetrar en ellas por la fuerza.
೧ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
2 Y cuando Ezequías vio que Senaquerib había venido con el propósito de luchar contra Jerusalén,
೨ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
3 Consultó con sus gobernantes y hombres de guerra la cuestión de detener los manantiales de agua fuera de la ciudad; y le dieron su apoyo.
೩ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
4 Así que reunieron a un gran número de personas, y detuvieron todos los manantiales de agua y el arroyo que fluía a través de la tierra, diciendo: ¿Por qué los reyes de Asiria vienen y tienen mucha agua?
೪ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
5 Luego se animó, edificó la muralla donde estaba derribada, elevó sus torres y construyó otra muralla en el exterior; e hizo fuerte él terraplén en la ciudad de David, y reunió una gran cantidad de todo tipo de instrumentos de guerra, escudos y flechas.
೫ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
6 Y puso a los jefes de guerra sobre el pueblo, y envió a todos a que se reunieran con él en la explanada en la entrada de la ciudad, y para darles ánimo, les dijo:
೬ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
7 Sé fuerte y confía; no temas, y no te preocupes por el rey de Asiria y todo el gran ejército que está con él, porque hay más entre nosotros.
೭“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
8 Con él es un brazo de carne; pero tenemos al Señor nuestro Dios, que nos ayuda y lucha por nosotros. Y el pueblo puso su fe en lo que dijo Ezequías, rey de Judá.
೮ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
9 Después de esto, Senaquerib, rey de Asiria, envió a sus siervos a Jerusalén en ese momento estaba destinado con todo su ejército frente a Laquis, para decirle a Ezequías y a todos los hombres de Judá en Jerusalén.
೯ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
10 Senaquerib, rey de Asiria, dice: ¿En qué estás esperando, esperando aquí en la ciudad amurallada de Jerusalén?
೧೦“ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
11 ¿No es Ezequías quien te obliga a hacerlo, causando tu muerte por necesidad de comida y agua, diciendo: El Señor nuestro Dios nos dará la salvación de las manos del rey de Asiria?
೧೧ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
12 ¿No le ha quitado este mismo Ezequías sus lugares altos y sus altares, diciendo a Judá y a Jerusalén: adoren solo un altar, quemando ofrendas en él?
೧೨ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
13 ¿No saben lo que hemos hecho mis antepasados y yo a todos los pueblos de todas las tierras? ¿Podrían los dioses de las naciones de esas tierras evitar que su tierra cayera en mis manos?
೧೩ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
14 ¿Quién estaba allí entre todos los dioses de esas naciones, que mis padres destruyeron, quién pudo mantener a su pueblo a salvo de mis manos? ¿Y es posible que tu Dios te mantenga a salvo de mis manos?
೧೪ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
15 Así que no te dejes engañar por Ezequías ni dejes que te ayude a hacer esto, y no pongas fe en lo que dice; porque ningún dios de ninguna nación o reino ha podido mantener a su pueblo a salvo de mis manos o las manos de mis antepasados; ¡cuánto menos tu Dios te mantendrá a salvo de mis manos!
೧೫ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
16 Y sus siervos dijeron aún más contra el Señor Dios y contra su siervo Ezequías.
೧೬ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
17 Además, envió cartas para avergonzar al Señor Dios de Israel, y decir mal contra él, diciendo: Como los dioses de las naciones de otras tierras no han podido guardar la gente a salvo de mis manos, el Dios de Ezequías tampoco mantendrá a su gente a salvo de mis manos.
೧೭ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
18 Estas cosas decían, gritando a gran voz en el idioma de los judíos, a los habitantes de Jerusalén que estaban en la pared, con el propósito de molestarlos y ponerles miedo, y así poder conquistar la ciudad.
೧೮ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
19 Hablando del Dios de Jerusalén como si fuera como los dioses de los pueblos de la tierra, el trabajo de las manos de los hombres.
೧೯ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
20 Ezequías, el rey, e Isaías, el profeta, hijo de Amoz, oraron por esto, clamando al cielo.
೨೦ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
21 Y él Señor envió a un ángel que mató a todos los hombres de guerra, a los jefes ya los capitanes del ejército del rey de Asiria. Así que volvió a su país avergonzado. Y cuando entró en la casa de su dios, sus hijos, la descendencia de su cuerpo, lo mataron allí con la espada.
೨೧ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
22 Entonces el Señor le dio a Ezequías y al pueblo de Jerusalén la salvación del poder de Senaquerib, el rey de Asiria, y de todos los demás, dándoles reposo por todos lados.
೨೨ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
23 Llegaron grandes cantidades a Jerusalén con ofrendas para el Señor, y cosas de gran precio para Ezequías, rey de Judá, desde entonces, fue honrado entre todas las naciones.
೨೩ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
24 En aquellos días, Ezequías estaba enfermo y cerca de la muerte; e hizo oración al Señor, y el Señor en respuesta le dio una señal.
೨೪ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
25 Pero Ezequías a pesar del beneficio que había recibido, no fue agradecido, porque su corazón se enorgulleció; Y la ira del Señor vino sobre él, y sobre Judá y en Jerusalén.
೨೫ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
26 Pero entonces, Ezequías, en pena por lo que había hecho, se humilló; y él y toda Jerusalén se humillaron ante él Señor, para que la ira del Señor no cayera sobre ellos en la vida de Ezequías.
೨೬ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
27 Ezequías tenía gran riqueza y honra; y se hizo almacenes para su oro y plata y joyas y especias, y para escudos y todo tipo de hermosas vasijas.
೨೭ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
28 Y almacenes para el producto de grano y vino y aceite; Y establos para el ganado y rediles para los rebaños.
೨೮ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
29 E hizo pueblos para sí, y juntó muchos bienes en rebaños y manadas: porque Dios le había dado grandes riquezas.
೨೯ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
30 Fue Ezequías quien hizo que el agua más alta del agua de Gihón se detuviera y el agua cayera en el lado oeste de la ciudad de David. En todo lo que emprendió, Ezequías lo hizo bien.
೩೦ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
31 Sin embargo, en el asunto de los representantes enviados por los gobernantes de Babilonia para recibir noticias de la maravilla que había tenido lugar en la tierra, Dios dejó de guiarlo, probándolo para ver qué había en su corazón.
೩೧ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
32 Los demás hechos de Ezequías, y el bien que hizo, están registrados en la visión del profeta Isaías, hijo de Amoz, en el libro de los reyes de Judá e Israel.
೩೨ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
33 Entonces Ezequías murió y lo enterraron en la parte más alta de los lugares de descanso de los hijos de David: y todo Judá y la gente de Jerusalén le dieron honor a su muerte. Y su hijo Manasés se hizo rey en su lugar.
೩೩ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.