< Éxodo 28 >
1 Ahora, acérquense a Aarón su hermano, y sus hijos con él, de entre los hijos de Israel, para que sean mis sacerdotes, Aarón, Nadab, Abiú, Eleazar e Itamar, sus hijos.
೧ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.
2 Y haz túnicas sagradas para Aarón tu hermano, para que él se vista de gloria y hermosura.
೨ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.
3 Ordena a todos los de dones artísticos, a quienes he hecho llenos del espíritu de sabiduría, que hagan túnicas para Aarón, para que sea santificado como mi sacerdote.
೩ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.
4 Esto es lo que han de hacer: él pectoral para el ssacerdote, un efod, la capa, y un manto de costura bordado, una mitra y una cinta de lino; ellos deben hacer túnicas sagradas para Aarón tu hermano y para sus hijos, para que puedan hacer el trabajo de sacerdotes para mí.
೪ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
5 Ellos tomarán oro, tela azul, púrpura, rojo y el mejor lino,
೫ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರವನ್ನು, ಹಾಗೂ ನಾರಿನ ಬಟ್ಟೆಯನ್ನು ಆ ಕೆಲಸಕ್ಕಾಗಿ ಉಪಯೋಗಿಸಬೇಕು.
6 Y harán el efod de oro, tela azul, púrpura y rojo, y el mejor lino, obra de un diseñador.
೬ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.
7 Tendrá dos tirantes cosidos al borde en la parte superior de los brazos, así se unirán.
೭ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ತುದಿಗಳು ಜೋಡಿಸಲ್ಪಟ್ಟಿರಬೇಕು.
8 Y el cinturón bellamente trabajado, que va sobre él, debe ser del mismo trabajo y el mismo material, de oro, tela azul y púrpura y rojo e hilo de lino torcido.
೮ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.
9 Tomarás dos piedras de ónice, sobre las cuales se grabarán los nombres de los hijos de Israel:
೯ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.
10 Seis nombres en una piedra y seis en la otra, en el orden de su nacimiento.
೧೦ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.
11 Con el trabajo de un joyero, como el grabado de un sello, los nombres de los hijos de Israel deben ser grabados en ellos, y deben ser fijados en marcos de oro.
೧೧ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.
12 Y las dos piedras se colocarán sobre el efod, sobre los hombros, piedras para recordar los hijos de Israel. Aarón tendrá sus nombres en sus hombros cuando delante Señor, para recordarlos.
೧೨ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
13 Y harás, marcos de oro;
೧೩ಆ ರತ್ನಗಳನ್ನು ಜೋಡಿಸುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.
14 Y dos cadenas del mejor oro, retorcidas como cuerdas; y tienen las cadenas fijadas en los marcos.
೧೪ಮತ್ತು ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕ ಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.
15 Y harás un pectoral del juicio, semejante al efod, bordados artísticamente hecho de de oro, tela azul, púrpura y rojo, y el mejor lino.
೧೫ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.
16 Debe ser cuadrado, doblado en dos, una mano estirada de largo y una mano estirada de ancho.
೧೬ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು.
17 Y sobre él debes poner cuatro líneas de joyas; la primera línea es ser una sárdica, topacio y una esmeralda;
೧೭ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.
18 El segundo, turquesa, zafiro y diamante;
೧೮ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲರತ್ನ ಮತ್ತು ವಜ್ರಗಳಿರಬೇಕು.
19 El tercero, jacinto, ágata y amatista;
೧೯ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು.
20 El cuarto, un berilo, ónice y un jaspe; deben ser arreglados en marcos de oro.
೨೦ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.
21 Las joyas serán doce en número, para los nombres de los hijos de Israel; cada joya que tiene el nombre de una de las doce tribus cortada como en un sello.
೨೧ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
22 Y harás dos cadenas de oro, retorcidas como cuerdas, para fijarlas en el pectoral del sacerdote.
೨೨ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು.
23 Y pon dos anillos de oro en los dos extremos del pectoral.
೨೩ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು.
24 Pon las dos cadenas de oro en los dos anillos en los extremos del pectoral;
೨೪ಆ ಎರಡು ಸರಪಣಿಗಳನ್ನು ಎದೆಯ ಪದಕದ ಕವಚದ ಮೂಲೆಗಳಲ್ಲಿರುವ ಕೊಂಡಿಗಳಿಗೆ ಸಿಕ್ಕಿಸಬೇಕು.
25 Uniendo los otros extremos de las cadenas a los marcos de oro y poniéndolos en la parte delantera del efod, en la parte superior de los brazos.
೨೫ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.
26 Luego haz dos anillos de oro y ponlos en los extremos inferiores del pectoral, en el borde del lado interno más cercano al efod.
೨೬ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.
27 Y haz otros dos anillos de oro, y ponlos en la parte delantera del efod en la parte superior de los brazos, en la unión, sobre la cinta labrada.
೨೭ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
28 Para que los anillos de la bolsa se fijen a los anillos del efod con un cordón azul y a la cinta del efod, para que él pectoral no se suelte del efod.
೨೮ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.
29 Y Aarón tendrá los nombres de los hijos de Israel en el pectoral del sacerdote sobre su corazón cada vez que entre en el lugar santo, para recordarlos delante de él Señor.
೨೯ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.
30 Y en él pectoral pondrás el Urim y Tumim, para que estén en el corazón de Aarón cada vez que esté delante del Señor; y Aarón puede tener el poder de tomar decisiones por los hijos de Israel delante del Señor en todo momento.
೩೦ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು.
31 El manto que va con el efod se hará de azul;
೩೧ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.
32 Con un agujero en la parte superior, en el medio; el agujero debe ser bordeado con un dobladillo para que sea fuerte, para que no se rompa.
೩೨ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.
33 Y alrededor de sus faldas ponen granadas en azul, púrpura y rojo, con campanillas de oro entre ellas;
೩೩ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.
34 Una campana de oro y una granada alrededor de las faldas de la túnica.
೩೪ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.
35 Aarón se lo pondrá para su santa obra; y su sonido quedará claro cuando vaya al lugar santo delante del Señor, y cuando salga, manteniéndolo a salvo de la muerte.
೩೫ಆರೋನನು ಯಾಜಕ ಸೇವೆ ಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದಂತಿರಲು ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು.
36 Debes hacer un plato del mejor oro, grabado, como en un sello, estas palabras: SANTIDAD AL SEÑOR.
೩೬ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.
37 Y la pondrás con un cordón azul y lo pondrás en la parte delantera de la mitra:
೩೭ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.
38 Y estará sobre la frente de Aarón, y será Aarón responsable de cualquier error en todas las ofrendas sagradas hechas por los hijos de Israel; estará en su lugar frente todo el tiempo, para que sus ofrendas puedan agradar al Señor.
೩೮ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.
39 La túnica será artísticamente bordada; y harás un turbante de lino y una cinta de lino con bordado artísticamente.
೩೯ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.
40 Y a los hijos de Aarón les harás túnicas, cinturones diademas, para que sean vestidos de gloria y honor.
೪೦ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.
41 Y con ellos vestirán Aarón, tu hermano, y sus hijos, ungiendolos, separándolos y santificándolos, para que sean mis sacerdotes.
೪೧ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.
42 Y les harás pantalones de lino, cubriendo sus cuerpos desde la cintura hasta la rodilla;
೪೨ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.
43 Aarón y sus hijos se los pondrán cuando vayan al Tabernáculo de reunión o se acerquen al altar, cuando estén haciendo el trabajo del lugar santo, para que estén libres de cualquier pecado que cause la muerte: esto es estatuto perpetuo para él y su simiente después de él para siempre.
೪೩ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.