< Oseas 2 >
1 Di a tus hermanos, Ammi; y a tus hermanas, Ruhama.
೧ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ.
2 Toma la causa contra tu madre, tómala, porque ella no es mi esposa, y yo no soy su esposo; aparta tus prostituciones de su rostro y sus adulterios de entre sus senos;
೨“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.
3 Por temor a que pueda quitarle su túnica y dejarla descubierta como en el día de su nacimiento; convirtiéndola en un lugar de desechos y tierra seca, causándole la muerte por la necesidad de agua.
೩ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.
4 Y no tendré piedad de sus hijos, porque ellos son los hijos de sus prostituciones.
೪ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳಲ್ಲವೇ.
5 Porque su madre se prostituyó; la que los concibió, se deshonró, porque dijo: Iré tras mis amantes, que me dan mi pan y mi agua, mi lana y mi lino, mi aceite y mi bebida.
೫ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”
6 Por esta causa pondré espinas en su camino, construyendo un muro a su alrededor para que no pueda seguir su camino.
೬ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
7 Y si ella persigue a sus amantes, no los alcanzará; si los busca, no los encontrará; entonces ella dirá, volveré con mi primer esposo, porque entonces era mejor para mí que ahora.
೭ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.
8 Porque ella no sabía que fui yo quien le dio el grano, el vino y el aceite, aumentando su plata y oro que le dieron al Baal.
೮ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
9 Entonces quitaré nuevamente mi grano a su tiempo y mi vino, y quitaré mi lana y mi lino con los que su cuerpo podría haber estado cubierto.
೯ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.
10 Y ahora descubriré su vergüenza ante los ojos de sus amantes, y nadie la liberara de mi mano.
೧೦ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.
11 Y pondré fin a toda su alegría, sus fiestas, sus nuevas lunas, sus días de reposo y todas sus fiestas solemnes.
೧೧ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
12 Y destruiré sus viñas y sus higueras, de las cuales ella ha dicho: Estos son los pagos que mis amantes me han hecho; y los convertiré en un desperdicio de árboles, y las bestias del campo los llevarán a comer.
೧೨ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
13 Y la castigaré por los días de los Baales, a quienes ha estado quemando perfumes, cuando se adornaba con sus anillos en la nariz y sus joyas, y fue tras sus amantes, sin pensar en mí, dice él Señor.
೧೩ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”
14 Por esta causa la haré venir al desierto y le diré palabras al corazón.
೧೪“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
15 Y desde allí le daré viñedos, y el valle de Acor como puerta de esperanza; y ella cantará allí como en los días en que era joven, y como en el momento en que salió de la tierra de Egipto.
೧೫ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”
16 Y en aquel día, dice el Señor, me dirás, esposo mío; y nunca más me llamarás mi señor.
೧೬ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.
17 Porque le quitaré los nombres de los Baales de su boca, y nunca más volverá a decir sus nombres.
೧೭ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.
18 Y en ese día haré un pacto por ellos con las bestias del campo y las aves del cielo y los reptiles; Pondré fin al arco, la espada y la guerra en toda la tierra, y haré que descansen en paz.
೧೮ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
19 Y te tomaré como mi novia para siempre; En verdad, te desposaré en justicia y en juicio, en amor y en misericordia.
೧೯ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.
20 Te tomaré como mi novia de buena fe, y tendrás conocimiento del Señor.
೨೦ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”
21 Y será, en ese día, dice el Señor, que daré respuesta a los cielos, y los cielos a la tierra;
೨೧ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.
22 Y la tierra dará su respuesta al grano, el vino y el aceite, y ellos darán una respuesta a Jezreel;
೨೨ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.
23 Y la pondré como simiente en la tierra, y tendré misericordia de ella a quien no se le dio misericordia; y diré a los que no fueron mi pueblo: Tú eres mi pueblo, y ellos dirán: Dios mío.
೨೩ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು, ಲೋ ರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅಮ್ಮಿಗೆ ‘ನೀನು ನನ್ನ ಪ್ರಜೆಯೇ’ ಎಂದು ಹೇಳುವೆನು. ಅವರು ನನ್ನನ್ನು ‘ನನ್ನ ದೇವರೇ’ ಎಂದು ಭಜಿಸುವರು” ಎಂದು ನುಡಿಯುತ್ತಾನೆ.