< Jeremías 16 >
1 Y otra vez vino a mí la palabra del Señor, diciendo:
೧ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
2 No debes tomar una esposa para ti o tener hijos o hijas en este lugar.
೨“ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.
3 Porque esto es lo que el Señor ha dicho acerca de los hijos e hijas que nacen en este lugar, y sobre sus madres que los han dado a luz, y sobre sus padres que les han dado vida en esta tierra:
೩ಏಕೆಂದರೆ ಈ ಸ್ಥಳದಲ್ಲಿ ಹುಟ್ಟುವ ಗಂಡು ಹೆಣ್ಣು ಮಕ್ಕಳು, ಅವರನ್ನು ಹೆತ್ತ ತಾಯಿಯರು, ಅವರನ್ನು ಈ ದೇಶದಲ್ಲಿ ಪಡೆದ ತಂದೆಯಂದಿರಿಗೆ, ಇವರೆಲ್ಲರ ವಿಷಯವಾಗಿ ಯೆಹೋವನು ಹೀಗೆ ನುಡಿದಿದ್ದಾನೆ,
4 La muerte de enfermedades malignas los alcanzará; no habrá llanto para ellos ni nadie los sepultará; serán como estiércol sobre la faz de la tierra; la espada y la necesidad de alimento acabarán con ellos; sus cuerpos muertos serán carne para las aves del cielo y para las bestias de la tierra.
೪ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.
5 Porque esto es lo que ha dicho el Señor: No entres en la casa donde estén de luto por un muerto, no vayas a hacerles llorar o cantos de dolor por ellos; porque yo he quitado la paz a este pueblo, dice el Señor: Incluso misericordia y piedad.
೫ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.
6 La muerte alcanzará a los grandes y pequeños en la tierra: sus cuerpos no se colocarán en sepulturas, y nadie llorará por ellos ni se herirá él cuerpo, ni se cortará el cabello por ellos.
೬ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.
7 Nadie les hará un banquete de tristeza, para darles consuelo a los muertos, ni se llevarán a la boca la copa de consuelo a causa de su padre o de su madre.
೭ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.
8 Y no debes entrar a la casa del banquete, ni sentarte con ellos para comer o beber.
೮ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.
9 Porque el Señor de los ejércitos, el Dios de Israel, ha dicho: Mira, delante de tus ojos y en tus días acabaré en este lugar con las voces risueñas y la voz de alegría; a la voz del hombre recién casado y la voz de la novia.
೯ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’
10 Y será que cuando digas todas estas palabras a la gente, entonces te dirán: ¿Por qué ha hecho el Señor todo este mal contra nosotros? ¿Cuál es nuestra maldad y cuál es nuestro pecado que hemos cometido contra el Señor nuestro Dios?
೧೦ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
11 Entonces les dirás: Porque tus padres me han dejado, dice el Señor, y han ido tras otros dioses y se han convertido en sus sirvientes y en sus adoradores, y me han entregado y no han cumplido mi ley;
೧೧ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,
12 Y has hecho peor mal que tus padres; para ver, cada uno de ustedes es guiado por el orgullo de su corazón malvado, para no escucharme.
೧೨ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
13 Por esta razón te enviaré fuera de esta tierra a una tierra que te es extraña, a ti y a tus padres; Allí serás los siervos de otros dioses día y noche, y no tendré piedad de ustedes.
೧೩ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.
14 Por esta causa, mira, vienen días, dice el Señor, cuando ya no se dirá: Por el Señor vivo, que sacó a los hijos de Israel de la tierra de Egipto.
೧೪“ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,
15 Pero, por el Señor vivo, que sacó a los hijos de Israel de la tierra del norte y de todos los países a los que los había enviado, y los llevaré de vuelta a la tierra que les di a sus padres.
೧೫‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.
16 Mira, enviaré a gran número de pescadores, dice el Señor, y los tomarán como peces en una red; y después de eso, enviaré a buscar un número de arqueros para que los cacen, y los saquen de cada montaña y de cada colina, y fuera de los agujeros de las rocas.
೧೬ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.
17 Porque mis ojos están en todos sus caminos: no hay ninguna protección para ellos en mi rostro, y su maldad no se mantiene en secreto ante mis ojos.
೧೭ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.
18 Y les daré la recompensa de su maldad y su pecado dos veces; porque han contaminado mi tierra, y han hecho que mi herencia esté llena de los cuerpos de sus ídolos impíos y repugnantes.
೧೮ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
19 Oh Señor, mi fortaleza y mi torre fuerte, mi lugar seguro en el día de la angustia, las naciones vendrán a ti desde los confines de la tierra, y dirán: La herencia de nuestros padres no es más que engaño, vanidades y cosas en las que no hay beneficio.
೧೯ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
20 ¿Hará un hombre dioses para sí, que no son dioses?
೨೦ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.
21 Por esta razón, en verdad, los haré ver, esta vez les daré conocimiento de mi mano y mi poder; y estarán seguros de que mi nombre es el Señor.
೨೧ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.