< Jeremías 24 >
1 El Señor me dio una visión, y vi dos canastas llenas de higos puestas frente al Templo del Señor, después de Nabucodonosor, rey de Babilonia, había hecho prisionero a Jeconías, al hijo de Joacim, rey de Judá, a los jefes de Judá, y a los artesanos y herreros de Jerusalén, y los había llevado a Babilonia.
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.
2 Una canasta tenía higos muy buenos, como los higos que primero llegaron a crecer; y la otra canasta tenía higos muy malos, tan malos que no servían para comer.
ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
3 Entonces el Señor me dijo: ¿Qué ves, Jeremías? Y dije, higos; los buenos higos son muy buenos y los malos muy malos, y de nada sirven para la comida, son tan malos.
ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.
4 Y vino a mí la palabra del Señor, diciendo:
ಆಗ ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:
5 Esto es lo que el Señor, el Dios de Israel, ha dicho: Como estos buenos higos, en mi opinión estarán los prisioneros de Judá, a quienes he enviado desde este lugar a la tierra de los caldeos para su bien.
“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.
6 Porque mantendré mis ojos en ellos para siempre, y los llevaré de vuelta a esta tierra, a edificarlos y no destruirlos, plantándolos y no desarraigándolos.
ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.
7 Y les daré un corazón para que me conozcan, porque yo soy el Señor; y ellos serán mi pueblo, y yo seré su Dios, porque ellos volverán a mí con todo su corazón.
ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.
8 Y como los higos malos que son tan malos que no sirven de nada para la comida, así que renunciaré a Sedequías, rey de Judá, a sus jefes y al resto de Jerusalén que aún se encuentran en esta tierra, y aquellos que están en la tierra de Egipto.
“‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.
9 Los entregaré para ser causa de temor y de angustia entre todos los reinos de la tierra; para ser un nombre de vergüenza y conversación común y una palabra cortante y una maldición en todos los lugares donde los enviaré errantes.
‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.
10 Y enviaré espada, hambruna, y enfermedad, entre ellos hasta que sean cortados de la tierra que les di a ellos y a sus padres.
ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’”