< Zacarías 4 >
1 Y el ángel que me hablaba vino otra vez, despertándome como un hombre fuera de su sueño.
೧ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು,
2 Y él me dijo: ¿Qué ves? Y dije: veo un candelabro, hecho de oro, con su copa en la parte superior y siete luces encendidas; y hay siete tubos en cada una de las luces que están en la parte superior;
೨“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
3 Y dos olivos junto a él, uno a la derecha de la copa y otro a la izquierda.
೩ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ” ಎಂದು ಹೇಳಿದೆನು.
4 Y respondí y le dije al ángel que me estaba hablando: ¿Qué es esto, mi señor?
೪ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,
5 Entonces el ángel que me estaba hablando, respondiéndome, dijo: ¿No sabes qué es? Y yo dije: No, mi señor.
೫ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.
6 Esta es la palabra del Señor a Zorobabel, diciendo: No por la fuerza o por el poder, sino por mi espíritu, dice el Señor de los ejércitos.
೬ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.
7 ¿Quién eres tú, gran montaña? ante Zorobabel, llegarás a nivel del suelo: y él dejará que todos vean la piedra principal, con gritos de: Gracia, gracia a ella.
೭ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.
8 Entonces la palabra del Señor vino a mí, diciendo:
೮ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ,
9 Las manos de Zorobabel han puesto los cimientos de esta casa en su lugar, y sus manos la completarán; y te quedará claro que el Señor de los ejércitos me ha enviado a ti.
೯“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.
10 Porque ¿quién ha menospreciado el día de las cosas pequeñas? porque se alegrarán cuando vean la plomada, en la mano de Zorobabel terminando la obra. Entonces él me respondió: Estas siete luces son los ojos del Señor que suben y bajan rápidamente por toda la tierra.
೧೦ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?
11 Y respondí y le dije: ¿Qué son estos dos olivos en el lado derecho del soporte de luz y en el izquierdo?
೧೧ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.
12 Y respondiendo por segunda vez, le dije: ¿Qué son estas dos ramas de olivo, a través de cuyos tubos de oro se drena el aceite?
೧೨ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.
13 Y él me respondió: ¿No sabes qué son? Y yo dije: No, mi señor.
೧೩ಅದಕ್ಕೆ ಆ ದೂತನು ನನಗೆ, “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂದು ಕೇಳಿದಾಗ ನಾನು, “ಇಲ್ಲ ಸ್ವಾಮೀ” ಎಂದೆ.
14 Y él dijo: Estos son los dos ungidos, cuyo lugar está junto al Señor de toda la tierra.
೧೪ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.