< 1 Nyakati 17 >
1 Baada ya Daudi kuingia rasmi katika jumba lake la kifalme, akamwambia nabii Nathani, “Hebu tazama, mimi ninakaa kwenye nyumba nzuri iliyojengwa kwa mierezi, wakati Sanduku la Agano la Bwana liko ndani ya hema.”
ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.
2 Nathani akamjibu Daudi, “Lolote ulilo nalo moyoni mwako litende, kwa maana Mungu yu pamoja nawe.”
ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.
3 Usiku ule neno la Mungu likamjia Nathani, kusema:
ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನೆಂದರೆ:
4 “Nenda ukamwambie mtumishi wangu Daudi, ‘Hili ndilo asemalo Bwana: Wewe hutanijengea mimi nyumba ili nikae humo.
“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ.
5 Mimi sijakaa ndani ya nyumba tangu siku ile niliyowatoa Israeli kutoka Misri mpaka leo. Nimehama kutoka hema moja hadi jingine na kutoka mahali pamoja hadi pengine.
ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.
6 Je, popote nilipokwenda pamoja na Waisraeli wote, wakati wowote nilimwambia kiongozi yeyote niliyemwagiza kuwachunga watu wangu, kwa nini hujanijengea nyumba ya mierezi?’
ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’
7 “Sasa basi, mwambie mtumishi wangu Daudi, ‘Hili ndilo asemalo Bwana Mwenye Nguvu Zote: Nilikuchukua machungani na kutoka kuandama kondoo ili uwatawale watu wangu Israeli.
“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.
8 Nimekuwa pamoja nawe popote ulipokwenda, nami nimekuondolea mbali adui zako wote mbele yako. Basi nitalifanya jina lako kuwa kuu kama majina ya watu walio wakuu sana duniani.
ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
9 Nami nitawapatia watu wangu Israeli mahali na nitawapa ili wawe na mahali pao wenyewe pa kuishi na wasisumbuliwe tena. Watu waovu hawatawaonea tena, kama walivyofanya mwanzoni,
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.
10 na ambavyo wamefanya siku zote tangu nilipowachagua viongozi kwa ajili ya watu wangu Israeli. Pia nitawatiisha adui zenu wote. “‘Pamoja na hayo ninakuambia kwamba Bwana atakujengea nyumba:
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.
11 Wakati wako utakapokuwa umekwisha, nawe ukawa umekwenda kukaa na baba zako, nitamwinua mzao wako aingie mahali pako kuwa mfalme, mmoja wa wana wako mwenyewe, nami nitaufanya imara ufalme wake.
ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.
12 Yeye ndiye atakayejenga nyumba kwa ajili yangu, nami nitakifanya imara kiti cha ufalme wake milele.
ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.
13 Mimi nitakuwa baba yake, naye atakuwa mwanangu. Kamwe sitaondoa upendo wangu kwake, kama nilivyouondoa kwa yeye aliyekutangulia.
ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.
14 Nitamweka juu ya nyumba yangu na ufalme wangu milele; kiti chake cha enzi nitakifanya imara milele.’”
ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’” ಎಂದು ಹೇಳಿದರು.
15 Nathani akamwarifu Daudi maneno yote ya maono haya.
ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.
16 Ndipo Mfalme Daudi akaingia ndani, akaketi mbele za Bwana, akasema: “Mimi ni nani, Ee Bwana Mungu, na jamaa yangu ni nini, hata umenileta mpaka hapa nilipo?
ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?
17 Kana kwamba hili halitoshi machoni pako, Ee Mungu, umenena pia kuhusu siku zijazo za nyumba ya mtumishi wako. Umeniangalia kama mtu aliyetukuka kuliko watu wote, Ee Bwana Mungu.
ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.
18 “Daudi aweza kukuambia nini zaidi kuhusu kumheshimu mtumishi wako? Kwa maana wewe unamjua mtumishi wako,
“ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.
19 Ee Bwana Mungu. Kwa ajili ya mtumishi wako, tena sawasawa na mapenzi yako, umefanya jambo hili kubwa sana na kujulisha ahadi hizi zote zilizo kubwa sana.
ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.
20 “Hakuna aliye kama wewe, Ee Bwana Mungu, wala hakuna Mungu ila wewe, kama vile tulivyosikia kwa masikio yetu wenyewe.
“ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.
21 Naye ni nani aliye kama watu wako Israeli: taifa pekee duniani ambalo Mungu wake alitoka kwenda kulikomboa kwa ajili yake mwenyewe na kujifanyia jina kwa ajili yake mwenyewe, kwa kufanya maajabu makubwa na ya kutisha kwa kuwafukuza mataifa mbele ya watu wako, ambao uliwakomboa kutoka Misri?
ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?
22 Uliwafanya watu wako Israeli kuwa watu wako wewe mwenyewe milele, nawe, Ee Bwana Mungu, umekuwa Mungu wao.
ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.
23 “Sasa basi, Bwana ahadi uliyoweka kuhusu mtumishi wako na nyumba yake na uithibitishe milele. Fanya kama ulivyoahidi,
“ಈಗ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.
24 ili ithibitike na jina lako litakuwa kuu milele. Kisha watu watasema, ‘Bwana Mungu Mwenye Nguvu Zote, Mungu aliye juu ya Israeli, ndiye Mungu wa Israeli.’ Nayo nyumba ya mtumishi wako Daudi itafanywa imara mbele zako.
‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.
25 “Wewe, Mungu wangu, umemfunulia mtumishi wako Daudi kwamba utamjengea yeye nyumba. Hivyo mtumishi wako amekuwa na ujasiri wa kukuomba maombi haya.
“ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.
26 Ee Bwana, wewe ndiwe Mungu! Umemwahidi mtumishi wako mambo haya mazuri.
ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.
27 Basi imekupendeza kuibariki nyumba ya mtumishi wako, ili idumu milele machoni pako; kwa ajili yako, Ee Bwana, umeibariki, nayo itabarikiwa milele.”
ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ, ಅದನ್ನು ಆಶೀರ್ವದಿಸಲು ಸಂತೋಷಪಡಿರಿ; ಯೆಹೋವ ದೇವರೇ, ನೀವು ಆಶೀರ್ವದಿಸಿದ್ದೀರಿ, ಅದು ನಿತ್ಯ ಆಶೀರ್ವಾದ ಹೊಂದಿರುವುದು.”