< 1 Wakorintho 2 >
1 Ndugu zangu nilipokuja kwenu, sikuja na maneno ya ushawishi wala hekima ya hali ya juu nilipowahubiria siri ya Mungu.
೧ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.
2 Kwa kuwa niliamua kutokujua kitu chochote wakati nikiwa nanyi isipokuwa Yesu Kristo aliyesulubiwa.
೨ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
3 Mimi nilikuja kwenu nikiwa dhaifu na mwenye hofu na kwa kutetemeka sana.
೩ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.
4 Kuhubiri kwangu na ujumbe wangu haukuwa kwa hekima na maneno ya ushawishi bali kwa madhihirisho ya nguvu za Roho
೪ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
5 ili imani yenu isiwe imejengwa katika hekima ya wanadamu bali katika nguvu za Mungu.
೫
6 Lakini miongoni mwa watu waliokomaa twanena hekima, wala si hekima ya ulimwengu huu au ya watawala wa dunia hii wanaobatilika. (aiōn )
೬ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. (aiōn )
7 Sisi tunanena hekima ya Mungu ambayo ni siri, tena iliyofichika, ambayo Mungu aliikusudia kabla ya ulimwengu kuwepo, kwa ajili ya utukufu wetu. (aiōn )
೭ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. (aiōn )
8 Hakuna hata mtawala mmoja wa nyakati hizi aliyeelewa jambo hili. Kwa maana kama wangelielewa, wasingemsulubisha Bwana wa utukufu. (aiōn )
೮ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; (aiōn )
9 Lakini ni kama ilivyoandikwa: “Hakuna jicho limepata kuona, wala sikio limepata kusikia, wala hayakuingia moyoni wowote, yale Mungu amewaandalia wale wampendao”:
೯ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
10 Lakini mambo haya Mungu ametufunulia kwa Roho wake. Roho huchunguza kila kitu, hata mambo ya ndani sana ya Mungu.
೧೦ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.
11 Kwa maana ni nani anayejua mawazo ya mtu isipokuwa roho iliyo ndani ya huyo mtu? Vivyo hivyo hakuna mtu ajuaye mawazo ya Mungu isipokuwa Roho wa Mungu.
೧೧ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.
12 Basi hatukupokea roho ya dunia bali Roho atokaye kwa Mungu, ili tuweze kuelewa kile kipawa ambacho Mungu ametupatia bure.
೧೨ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
13 Haya ndiyo tusemayo, si kwa maneno tuliyofundishwa kwa hekima ya wanadamu bali kwa maneno tuliyofundishwa na Roho, tukifafanua kweli za kiroho kwa maneno ya kiroho.
೧೩ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
14 Mtu ambaye hana Roho hawezi kupokea mambo yatokayo kwa Roho wa Mungu, kwa kuwa ni upuzi kwake, naye hawezi kuyaelewa kwa sababu hayo yanaeleweka tu kwa upambanuzi wa rohoni.
೧೪ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
15 Mtu wa kiroho hubainisha mambo yote, lakini yeye mwenyewe habainishwi na mtu yeyote.
೧೫ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
16 “Kwa maana ni nani aliyefahamu mawazo ya Bwana ili apate kumfundisha?” Lakini sisi tunayo mawazo ya Kristo.
೧೬“ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.