< 1 Wafalme 8 >
1 Kisha Mfalme Solomoni akawaita mbele zake huko Yerusalemu wazee wa Israeli, viongozi wote wa makabila na wakuu wa jamaa za Waisraeli, ili walilete Sanduku la Agano la Bwana kutoka Sayuni, Mji wa Daudi.
೧ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.
2 Wanaume wote wa Israeli wakakusanyika kwa Mfalme Solomoni wakati wa sikukuu ya mwezi wa Ethanimu, ndio mwezi wa saba.
೨ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.
3 Wazee wote wa Israeli walipofika, makuhani wakajitwika Sanduku la Agano,
೩ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
4 nao wakalipandisha Sanduku la Bwana, na Hema la Kukutania pamoja na vyombo vyote vitakatifu vilivyokuwa ndani yake. Makuhani na Walawi wakavibeba,
೪ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
5 naye Mfalme Solomoni na kusanyiko lote la Israeli waliokusanyika kumzunguka walikuwa mbele ya hilo Sanduku, nao wakatoa dhabihu nyingi za kondoo na ngʼombe ambao idadi yao haikuwezekana kuandikwa au kuhesabiwa.
೫ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
6 Makuhani wakalileta Sanduku la Agano la Bwana hadi mahali pake ndani ya sehemu takatifu ndani ya Hekalu, yaani Patakatifu pa Patakatifu, na kuliweka chini ya mabawa ya makerubi.
೬ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
7 Makerubi yalitandaza mabawa yao juu ya mahali pa Sanduku la Agano na kutia kivuli Sanduku pamoja na mipiko yake ya kubebea.
೭ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
8 Mipiko hiyo ilikuwa mirefu sana kiasi kwamba ncha zake zilionekana kutoka Mahali Patakatifu mbele ya Patakatifu pa Patakatifu, lakini sio nje ya Mahali Patakatifu. Hiyo mipiko ipo hata leo.
೮ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
9 Ndani ya Sanduku hapakuwepo kitu kingine chochote isipokuwa zile mbao mbili za mawe ambazo Mose alikuwa ameziweka ndani yake huko Horebu, mahali ambapo Bwana alifanya Agano na Waisraeli baada ya kutoka Misri.
೯ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.
10 Makuhani walipoondoka katika Mahali Patakatifu, wingu likajaza Hekalu la Bwana.
೧೦ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
11 Nao makuhani hawakuweza kufanya huduma yao kwa sababu ya lile wingu, kwa kuwa utukufu wa Bwana ulijaza Hekalu lake.
೧೧ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.
12 Ndipo Solomoni akasema, “Bwana alisema kwamba ataishi katika giza nene;
೧೨ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.
13 naam, hakika nimekujengea Hekalu zuri sana, mahali pako pa kuishi milele.”
೧೩ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.
14 Kusanyiko lote la Israeli lilipokuwa limesimama hapo, mfalme akageuka na kuwabariki.
೧೪ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,
15 Kisha akasema: “Ahimidiwe Bwana, Mungu wa Israeli, ambaye kwa mkono wake mwenyewe ametimiza lile alilomwahidi Daudi baba yangu kwa kinywa chake mwenyewe. Kwa kuwa alisema,
೧೫“ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.
16 ‘Tangu siku niliyowatoa watu wangu Israeli kutoka Misri, sikuchagua mji katika kabila lolote la Israeli ili Hekalu lijengwe humo ili Jina langu lipate kuwamo humo, bali nimemchagua Daudi kuwatawala watu wangu Israeli.’
೧೬ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.
17 “Ilikuwa moyoni mwa Daudi baba yangu kujenga Hekalu kwa ajili ya Jina la Bwana, Mungu wa Israeli.
೧೭ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.
18 Lakini Bwana akamwambia Daudi baba yangu, ‘Kwa sababu ilikuwa moyoni mwako kujenga Hekalu kwa ajili ya Jina langu, ulifanya vyema kuwa na jambo hili moyoni mwako.
೧೮ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.
19 Hata hivyo, sio wewe utakayenijengea hekalu, bali mwanao, ambaye ni nyama yako na damu yako mwenyewe, yeye ndiye atakayejenga Hekalu kwa ajili ya Jina langu.’
೧೯ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದನು.
20 “Bwana ametimiza ahadi aliyoiweka: Nimeingia mahali pa Daudi baba yangu na sasa ninakikalia kiti cha ufalme cha Israeli, kama vile Bwana alivyoahidi, nami nimejenga Hekalu kwa ajili ya Jina la Bwana, Mungu wa Israeli.
೨೦ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.
21 Nimetenga nafasi humo kwa ajili ya Sanduku la Agano, ambamo ndani yake kuna lile Agano la Bwana alilofanya na baba zetu wakati alipowatoa Misri.”
೨೧ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.
22 Kisha Solomoni akasimama mbele ya madhabahu ya Bwana machoni pa kusanyiko lote la Israeli, akakunjua mikono yake kuelekea mbinguni
೨೨ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,
23 na kusema: “Ee Bwana, Mungu wa Israeli, hakuna Mungu kama wewe juu mbinguni wala chini duniani, wewe unayetunza Agano lako la upendo na watumishi wanaodumu katika njia yako kwa moyo wote.
೨೩“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
24 Umetimiza ahadi yako kwa mtumishi wako Daudi baba yangu, kwa kinywa chako uliahidi na kwa mkono wako umetimiza, kama ilivyo leo.
೨೪ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.
25 “Sasa Bwana, Mungu wa Israeli, mtimizie mtumishi wako Daudi baba yangu ahadi zako ulizomwahidi uliposema, ‘Kamwe hutakosa kuwa na mtu atakayeketi mbele zangu kwenye kiti cha ufalme cha Israeli, kama wanao wakiangalia yote wayafanyayo kuenenda mbele zangu kama vile ulivyofanya.’
೨೫ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
26 Sasa, Ee Mungu wa Israeli, acha neno lako lile ulilomwahidi mtumishi wako Daudi baba yangu litimie.
೨೬ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.
27 “Lakini kweli, je, Mungu atafanya makao duniani? Mbingu, hata mbingu zilizo juu sana, haziwezi kukutosha wewe. Sembuse Hekalu hili nililojenga!
೨೭“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
28 Hata hivyo sikiliza dua ya mtumishi wako na maombi yake kwa huruma, Ee Bwana Mungu wangu. Sikia kilio na dua ambayo mtumishi wako anaomba mbele zako siku hii ya leo.
೨೮ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
29 Macho yako na yafumbuke kuelekea Hekalu hili usiku na mchana, mahali hapa ambapo ulisema, ‘Jina langu litakuwako humo,’ ili kwamba upate kusikia maombi ambayo mtumishi wako ataomba kuelekea mahali hapa.
೨೯ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.
30 Usikie maombi ya mtumishi wako na ya watu wako Israeli wakati wanapoomba kuelekea mahali hapa. Sikia kutoka mbinguni, mahali pa makao yako na usikiapo, samehe.
೩೦ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
31 “Mtu anapomkosea jirani yake na akatakiwa kuapa, akija na kuapa mbele ya madhabahu yako ndani ya Hekalu hili,
೩೧“ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,
32 basi, sikia kutoka mbinguni na ukatende. Hukumu kati ya watumishi wako, ukimhukumu yule mwenye hatia na kuleta juu ya kichwa chake yale aliyoyatenda. Umtangazie mwenye haki kwamba hana hatia, hivyo ukathibitishe kuwa haki kwake.
೩೨ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
33 “Wakati watu wako Israeli watakapokuwa wameshindwa na adui kwa sababu ya dhambi walizofanya dhidi yako, watakapokugeukia na kulikiri jina lako, wakiomba na kufanya dua kwako katika Hekalu hili,
೩೩“ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,
34 basi usikie kutoka mbinguni, ukasamehe dhambi ya watu wako Israeli na kuwarudisha katika nchi uliyowapa baba zao.
೩೪ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.
35 “Wakati mbingu zitakapokuwa zimefungwa kusiwe na mvua kwa sababu watu wako wametenda dhambi dhidi yako, watakapoomba kuelekea mahali hapa na kulikiri jina lako nao wakageuka kutoka dhambi zao kwa sababu umewaadhibu,
೩೫“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,
36 basi usikie kutoka mbinguni na usamehe dhambi ya watumishi wako, watu wako Israeli. Wafundishe njia sahihi ya kuishi na ukanyeshe mvua juu ya nchi uliyowapa watu wako kuwa urithi.
೩೬ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
37 “Wakati njaa au tauni vikija juu ya nchi, au koga au kawa, nzige au panzi, au wakati adui atakapowazingira katika mji wao wowote, maafa ya namna yoyote au ugonjwa wowote unaoweza kuwajia,
೩೭“ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
38 wakati dua au maombi yatakapofanywa na mmojawapo wa watu wako Israeli, kila mmoja akitambua taabu za moyo wake mwenyewe, naye akainyoosha mikono yake kuelekea Hekalu hili:
೩೮ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,
39 basi usikie kutoka mbinguni, katika makao yako. Usamehe na utende, umpe kila mtu kulingana na matendo yake, kwa kuwa unaujua moyo wake (kwa kuwa ni wewe peke yako ujuaye mioyo ya watu wote),
೩೯ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
40 ili wakuogope kwa wakati wote watakaoishi katika nchi uliyowapa baba zetu.
೪೦ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.
41 “Kwa habari ya mgeni ambaye si miongoni mwa watu wako Israeli, lakini amekuja kutoka nchi ya mbali kwa sababu ya jina lako,
೪೧“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ
42 kwa maana watu watasikia juu ya Jina lako kuu na juu ya mkono wako wenye nguvu na mkono wako ulionyooshwa, atakapokuja na kuomba kuelekea Hekalu hili,
೪೨ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,
43 basi na usikie kutoka mbinguni, mahali pa makao yako, ukafanye lolote ambalo mgeni huyo anakuomba, ili mataifa yote ya dunia wapate kujua jina lako na wakuogope kama wafanyavyo watu wako Israeli nao wapate pia kujua kwamba nyumba hii niliyoijenga imeitwa kwa Jina lako.
೪೩ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.
44 “Wakati watu wako watakapokwenda vitani dhidi ya adui zao, popote utakapowapeleka, wakati watakapoomba kwa Bwana kuelekea mji ambao umeuchagua, na Hekalu nililolijenga kwa ajili ya Jina lako,
೪೪ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ
45 basi usikie dua na maombi yao kutoka mbinguni, ukawatetee haki yao.
೪೫ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.
46 “Watakapotenda dhambi dhidi yako, kwa kuwa hakuna mtu yeyote ambaye hatendi dhambi, nawe ukachukizwa nao na kuwakabidhi kwa adui, ambaye atawachukua utumwani katika nchi yake mwenyewe, mbali au karibu;
೪೬“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
47 na kama watabadilika mioyo yao katika nchi wanakoshikiliwa mateka, nao wakatubu na kukulilia katika nchi ya wale waliowashinda na kusema, ‘Tumetenda dhambi, tumefanya makosa, tumetenda uovu’;
೪೭ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
48 kama wakikugeukia kwa moyo wao wote na nafsi zao katika nchi ya adui zao ambao waliwachukua mateka, wakakuomba kuelekea nchi uliyowapa baba zao, kuelekea mji uliouchagua na Hekalu nililolijenga kwa ajili ya Jina lako;
೪೮‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,
49 basi kutoka mbinguni, mahali pa makao yako, usikie dua yao na maombi yao na kuitetea haki yao.
೪೯ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
50 Uwasamehe watu wako, waliotenda dhambi dhidi yako; uwasamehe makosa yote waliyoyatenda dhidi yako, ukawafanye wale waliowashinda kuwaonea huruma;
೫೦ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
51 kwa maana ni watu wako na urithi wako, uliowatoa Misri, kutoka kwenye lile tanuru la kuyeyushia chuma.
೫೧ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
52 “Macho yako na yafumbuke juu ya ombi la mtumishi wako na ombi la watu wako Israeli, nawe uwasikilize wakati wowote wanapokulilia.
೫೨ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
53 Kwa maana uliwachagua wao kutoka mataifa yote ya ulimwengu kuwa urithi wako mwenyewe, kama ulivyotangaza kupitia mtumishi wako Mose wakati wewe, Ee Bwana Mwenyezi, ulipowatoa baba zetu kutoka Misri.”
೫೩ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.
54 Wakati Solomoni alipomaliza dua hizi zote na maombi kwa Bwana, akainuka kutoka mbele ya madhabahu ya Bwana, mahali alipokuwa amepiga magoti, mikono yake ikawa imekunjuliwa kuelekea juu mbinguni.
೫೪ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
55 Akasimama na kubariki kusanyiko lote la Israeli kwa sauti kubwa akisema:
೫೫ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,
56 “Ahimidiwe Bwana, aliyewapa pumziko watu wake Israeli kama vile alivyokuwa ameahidi. Hakuna hata neno moja lililopunguka kati ya ahadi zote nzuri alizozitoa kupitia mtumishi wake Mose.
೫೬“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
57 Bwana Mungu wetu na awe pamoja nasi kama alivyokuwa na baba zetu, kamwe asituache wala kutukataa.
೫೭ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
58 Yeye na aielekeze mioyo yetu kwake, ili tutembee katika njia zake zote na kuzishika amri na maagizo na masharti aliyowapa baba zetu.
೫೮ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.
59 Nami maneno yangu haya, ambayo nimeyaomba mbele za Bwana, yawe karibu na Bwana Mungu wetu usiku na mchana, ili kwamba atetee shauri la mtumishi wake na la watu wake Israeli kulingana na hitaji lao la kila siku,
೫೯ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.
60 ili kwamba mataifa yote ya dunia wajue kwamba Bwana ndiye Mungu na kwamba hakuna mwingine.
೬೦ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
61 Lakini ni lazima mwiweke mioyo yenu kikamilifu kwa Bwana Mungu wetu, kuishi kwa maagizo yake na kutii amri zake, kama ilivyo wakati huu.”
೬೧ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.
62 Kisha mfalme na Israeli wote pamoja naye wakatoa dhabihu mbele za Bwana.
೬೨ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
63 Solomoni akatoa dhabihu sadaka za amani kwa Bwana: ngʼombe 22,000, pamoja na kondoo na mbuzi 120,000. Hivyo ndivyo mfalme na Waisraeli wote walivyoweka wakfu Hekalu la Bwana.
೬೩ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
64 Siku iyo hiyo mfalme akaweka wakfu sehemu ya katikati ya ua uliokuwa mbele ya Hekalu la Bwana na hapo akatoa sadaka za kuteketezwa, sadaka za nafaka na mafuta ya sadaka za amani, kwa sababu madhabahu ya shaba iliyokuwa mbele za Bwana ilikuwa ndogo sana kuweza kubeba sadaka hizo za kuteketezwa, sadaka za nafaka na mafuta ya sadaka ya amani.
೬೪ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.
65 Hivyo Solomoni akaiadhimisha sikukuu kwa wakati ule, na Israeli wote pamoja naye. Walikuwa kusanyiko kubwa sana, watu kutoka Lebo-Hamathi hadi Kijito cha Misri. Wakaiadhimisha mbele za Bwana Mungu wetu kwa siku saba na siku saba zaidi, yaani, jumla siku kumi na nne.
೬೫ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
66 Siku iliyofuata, aliwaruhusu watu waondoke. Wakambariki mfalme, kisha wakaenda nyumbani, wakiwa na mashangilio na furaha rohoni kwa ajili ya mambo yote mema ambayo Bwana ametenda kwa ajili ya Daudi mtumishi wake na watu wake Israeli.
೬೬ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.