< Torati 14 >
1 Ninyi ni watoto wa Bwana Mungu wenu. Msijichanje ama kujinyoa upara kwenye paji la uso kwa ajili ya aliyekufa,
೧ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.
2 kwa maana ninyi ni taifa takatifu kwa Bwana Mungu wenu. Bwana amewachagua ninyi kuwa taifa la kipekee kutoka mataifa yote juu ya uso wa dunia, mwe tunu yake.
೨ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
3 Msile kitu chochote ambacho ni machukizo.
೩ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.
4 Hawa ndio wanyama mtakaokula: ngʼombe, kondoo, mbuzi,
೪ನೀವು ತಿನ್ನಬಹುದಾದ ಪಶುಜಾತಿಗಳು ಯಾವುವೆಂದರೆ ದನ, ಕುರಿ, ಆಡು,
5 kulungu, paa, kongoni, paa mweupe, mbuzi-mwitu, pofu na kondoo wa mlimani.
೫ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ (ಕಾಡುಟಗರು) ಎಂಬಿವುಗಳೇ.
6 Mnaweza kumla mnyama yeyote mwenye kwato zilizogawanyika mara mbili, pia yule anayecheua.
೬ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.
7 Hata hivyo, miongoni mwa wale wanaocheua au wale walio na kwato zilizogawanyika kamwe msile ngamia, sungura na pelele. Iwapo wanacheua, lakini hawana kwato zilizogawanyika; ni najisi kwenu kwa taratibu za kiibada.
೭ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.
8 Nguruwe pia ni najisi; ingawa ana kwato zilizogawanyika, hacheui. Msile nyama yake wala kugusa mzoga wake.
೮ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.
9 Katika viumbe hai vyote viishivyo kwenye maji, mnaweza kula yeyote aliye na mapezi na magamba.
೯ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.
10 Lakini chochote kisicho na mapezi na magamba msile; kwenu ni najisi.
೧೦ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.
11 Mnaweza kula ndege yeyote aliye safi.
೧೧ಎಲ್ಲಾ ಶುದ್ಧ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಹುದು.
12 Lakini wafuatao msiwale: tai, furukombe, kipungu,
೧೨ನೀವು ತಿನ್ನಬಾರದವುಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು, ಕ್ರೌಂಚ,
13 kengewa mwekundu, kengewa mweusi, mwewe wa aina yoyote,
೧೩ಗಿಡಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,
14 kunguru wa aina yoyote,
೧೪ಸಕಲವಿಧವಾದ ಕಾಗೆ,
15 mbuni, kiruka-njia, dudumizi, kipanga wa aina yoyote,
೧೫ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,
16 bundi, mumbi, bundi mkubwa,
೧೬ಗೂಬೆ, ಹೆಗ್ಗೂಬೆ, ಕರೇಟು,
೧೭ಚೀಲಮೂಗಿ, ರಣಹದ್ದು, ನೀರುಕಾಗೆ,
18 korongo, koikoi wa aina yoyote, hudihudi na popo.
೧೮ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಕಣ್ಣಕಪಡಿ.
19 Wadudu wote warukao kwa makundi ni najisi kwenu, msiwale.
೧೯ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವೂ ನಿಮಗೆ ಅಶುದ್ಧ. ಅವುಗಳನ್ನು ನೀವು ತಿನ್ನಬಾರದು.
20 Lakini viumbe vyote vyenye mabawa vilivyo safi mwaweza kula.
೨೦ರೆಕ್ಕೆಯುಳ್ಳವುಗಳಲ್ಲಿ ಶುದ್ಧ ಜಾತಿಯವುಗಳನ್ನು ಮಾತ್ರ ನೀವು ತಿನ್ನಬಹುದು.
21 Msile kitu chochote mtakachokuta kimekufa. Mnaweza kumpa mgeni yeyote anayeishi katika mojawapo ya miji yenu, naye anaweza kula au mnaweza kumuuzia mtu wa nchi nyingine. Lakini ninyi ni watu watakatifu kwa Bwana Mungu wenu. Msitokose mwana-mbuzi katika maziwa ya mama yake.
೨೧ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
22 Hakikisheni mmetenga sehemu ya kumi ya mazao yote ya mashamba yenu kila mwaka.
೨೨ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.
23 Mtakula zaka za nafaka yenu, divai mpya, mafuta na wazaliwa wa kwanza wa makundi yenu ya ngʼombe na ya kondoo na mbuzi mbele za Bwana Mungu wenu pale mahali atakapopachagua kama maskani kwa ajili ya Jina lake, ili kwamba mpate kujifunza kumheshimu Bwana Mungu wenu daima.
೨೩ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
24 Lakini ikiwa mahali pale ni mbali sana nanyi mmebarikiwa na Bwana Mungu wenu na hamwezi kubeba zaka yenu (kwa sababu mahali pale Bwana atakapopachagua kuliweka Jina lake ni mbali sana),
೨೪ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,
25 basi badilisheni zaka yenu kuwa fedha, mkaichukue hiyo fedha mwende nayo mahali Bwana Mungu wenu atakapopachagua.
೨೫ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.
26 Tumieni hiyo fedha kununua chochote ukitakacho: ngʼombe, kondoo, divai au kinywaji chochote chenye chachu au chochote mnachotaka. Kisha ninyi na wa nyumbani mwenu mtaila mbele za Bwana Mungu wenu na kufurahi.
೨೬ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
27 Msiache kuwajali Walawi waishio katika miji yenu, kwa kuwa hao hawana shamba wala urithi wao wenyewe.
೨೭ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.
28 Mwishoni mwa kila mwaka wa tatu, leteni zaka zote za mazao ya miaka ile na uyahifadhi kwenye miji yenu,
೨೮ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.
29 ili Walawi (ambao hawana mashamba wala urithi wao wenyewe) na wageni, yatima na wajane wanaoishi kwenye miji yenu wapate kuja kula na kushiba, ili Bwana Mungu wenu apate kuwabariki ninyi katika kazi zote za mikono yenu.
೨೯ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.