< Torati 17 >
1 Msimtolee Bwana Mungu wenu dhabihu ya maksai au kondoo ambaye ana dosari yoyote au hitilafu ndani yake, kwa kuwa hilo litakuwa chukizo kwake.
ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.
2 Ikiwa mwanaume au mwanamke anayeishi kati ya mojawapo ya miji akupayo Bwana, anakutwa anafanya uovu mbele za Bwana Mungu wenu, kwa kuvunja Agano lake,
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.
3 naye amekwenda kinyume na agizo langu kuabudu miungu mingine na kuisujudia, kama vile jua, mwezi au nyota za angani,
ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,
4 hili likiwa limeletwa mbele yenu, ni lazima kulichunguza kikamilifu. Ikiwa ni kweli na kuwa limehakikishwa kwamba hili ni chukizo lililofanyika katika Israeli,
ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,
5 mchukueni huyo mwanaume au mwanamke ambaye amelifanya tendo hili ovu kwenye lango la mji wenu na kumpiga mawe mtu huyo mpaka afe.
ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.
6 Kwa ushuhuda wa mashahidi wawili au watatu mtu huyo atauawa, bali hakuna mtu atakayeuawa kwa ushuhuda wa shahidi mmoja tu.
ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
7 Ni lazima kwanza mikono ya mashahidi itangulie kumuua huyo mtu, kisha mikono ya watu wote. Ni lazima mwondoe uovu miongoni mwenu.
ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
8 Kama mashauri yanaletwa katika mahakama zenu ambayo ni magumu zaidi kwenu kuyaamua, ikiwa ni umwagaji wa damu, madai au mashambulio, yapelekeni mahali ambapo Bwana Mungu wenu atapachagua.
ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.
9 Nendeni kwa makuhani, ambao ni Walawi, na kwa mwamuzi ambaye atakuwa kazini wakati huo. Ulizeni kwao nao watawapa maamuzi.
ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.
10 Ni lazima mtende sawasawa na maamuzi watakayowapa mahali Bwana atakapopachagua. Kuweni waangalifu kufanya kila kitu watakachowaongoza kufanya.
ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.
11 Fanyeni sawasawa na sheria wanayowafundisha na maamuzi wanayowapa. Msigeuke mkono wa kuume au kushoto kuacha kufanya yale wanayowaambia.
ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.
12 Mwanaume atakayeonyesha dharau kwa mwamuzi au kwa kuhani ambaye amewekwa kumtumikia Bwana Mungu wenu lazima auawe. Lazima mwondoe uovu katika Israeli.
ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
13 Watu wote watasikia na kuogopa, nao hawatakuwa wenye kudharau tena.
ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು.
14 Wakati utakapoingia katika nchi anayowapa Bwana Mungu wenu kuimiliki na kukaa humo, nanyi mkasema, “Na tumweke mfalme juu yetu kama mataifa yanayotuzunguka,”
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.
15 kuweni na uhakika wa kumweka mfalme juu yenu ambaye Bwana Mungu wenu atamchagua. Ni lazima atoke miongoni mwa ndugu zenu wenyewe. Msimweke mgeni juu yenu ambaye si ndugu wa Kiisraeli.
ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.
16 Hata hivyo, kamwe mfalme asijipatie hesabu kubwa ya farasi kwa ajili yake mwenyewe, au kuwafanya watu warudi Misri ili kupata farasi zaidi, kwa maana Bwana amekuambia, “Hamtairudia njia ile tena.”
ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.
17 Kamwe asioe wake wengi, la sivyo moyo wake utapotoka. Kamwe asijilimbikizie kiasi kikubwa cha fedha na dhahabu.
ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
18 Atakapokuwa amekalia kiti cha ufalme wake, ajiandikie kwenye kitabu nakala ya sheria kwa ajili yake mwenyewe kutoka zile sheria za makuhani ambao ni Walawi.
ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.
19 Atakuwa na nakala hiyo, naye ataisoma siku zote za maisha yake ili kwamba ajifunze kumheshimu Bwana Mungu wake na kufuata kwa uangalifu maneno yote ya sheria hii na amri hizi,
ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.
20 naye asijifikirie kuwa ni bora kuliko ndugu zake na kuipotosha sheria. Ndipo yeye na wazao wake watatawala katika ufalme wake kwa muda mrefu katika Israeli.
ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.