< Torati 29 >

1 Haya ndiyo maneno ya Agano Bwana aliyomwagiza Mose kufanya na Waisraeli huko Moabu, kuwa nyongeza ya Agano alilofanya nao huko Horebu.
ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.
2 Mose akawaita Waisraeli wote akawaambia: Macho yenu yameona yale yote Bwana aliyofanya kwa Mfalme Farao huko Misri, kwa maafisa wake wote na kwa nchi yake yote.
ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು
3 Kwa macho yenu wenyewe mliona yale majaribu makubwa, ishara zile za miujiza na maajabu makubwa.
ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ.
4 Lakini mpaka leo Bwana hajawapa akili ya kuelewa au macho yanayoona au masikio yanayosikia.
ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
5 Kwa muda wa miaka arobaini niliyowaongoza jangwani, nguo zenu hazikuchakaa, wala viatu miguuni mwenu.
ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;
6 Hamkula mkate na hamkunywa divai wala kileo chochote. Nilifanya hivi ili mpate kujua kuwa mimi ndimi Bwana Mungu wenu.
ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.
7 Wakati mlipofika mahali hapa, Sihoni mfalme wa Heshboni na Ogu mfalme wa Bashani walikuja kupigana dhidi yetu, lakini tuliwashinda.
ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.
8 Tuliichukua nchi yao na kuwapa Wareubeni, Wagadi na nusu ya kabila la Manase kama urithi wao.
ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.
9 Fuateni kwa bidii masharti ya Agano hili, ili kwamba mweze kustawi katika kila kitu mnachofanya.
ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.
10 Ninyi nyote leo mnasimama mbele za Bwana Mungu wenu; mkiwa viongozi na wakuu wenu, wazee na maafisa wenu, na wanaume wengine wote wa Israeli,
೧೦ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,
11 pamoja na watoto wenu, wake zenu na pia wageni waishio katika kambi zenu wanaowapasulia kuni na kuwachotea maji.
೧೧ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,
12 Mnasimama hapa ili kufanya Agano na Bwana Mungu wenu, Agano ambalo Mungu analifanya nanyi siku hii ya leo na kulitia muhuri kwa kiapo,
೧೨ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,
13 kuwathibitisha ninyi siku hii ya leo kama taifa lake, ili aweze kuwa Mungu wenu kama alivyowaahidi na kama alivyowaapia baba zenu Abrahamu, Isaki na Yakobo.
೧೩ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.
14 Ninafanya Agano hili pamoja na kiapo chake, sio na ninyi tu
೧೪“ಆತನು ಈ ಒಡಂಬಡಿಕೆಯನ್ನು ಕೇವಲ ನಮ್ಮೊಡನೆ ಮಾಡಿಕೊಳ್ಳುವುದಿಲ್ಲ.
15 mnaosimama hapa na sisi leo mbele za Bwana Mungu wetu, bali pia pamoja na wale ambao hawapo hapa leo.
೧೫ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮತ್ತು ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ.
16 Ninyi wenyewe mnajua jinsi tulivyoishi nchini Misri na jinsi tulivyopita katikati ya nchi mpaka tukafika hapa.
೧೬ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.
17 Mliona miongoni mwao vinyago vyao vya kuchukiza na sanamu za miti na mawe, za fedha na dhahabu.
೧೭ಆ ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ.
18 Hakikisheni kwamba hakuna mwanaume au mwanamke, ukoo au kabila miongoni mwenu leo ambalo moyo wake utamwacha Bwana Mungu wetu, kwenda kuabudu miungu ya mataifa hayo. Hakikisheni hakuna mzizi miongoni mwenu unaotoa sumu chungu ya namna hii.
೧೮“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.
19 Wakati mtu wa namna hii asikiapo maneno ya kiapo hiki, hujibariki mwenyewe na kisha hufikiri, “Nitakuwa salama, hata kama nikiendelea kuifuata njia yangu mwenyewe.” Hili litaleta maafa juu ya nchi iliyonyeshewa sawasawa na nchi kame.
೧೯ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
20 Bwana kamwe hatakuwa radhi kumsamehe, ghadhabu na wivu wa Mungu vitawaka dhidi ya mtu huyo. Laana zote zilizoandikwa katika kitabu hiki zitamwangukia na Bwana atafuta jina lake chini ya mbingu.
೨೦ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
21 Bwana atamtwaa peke yake kutoka makabila ya Israeli kwa maangamizo, kulingana na laana zote za Agano zilizoandikwa kwenye Kitabu hiki cha Sheria.
೨೧ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.
22 Watoto wako watakaofuata baada yako katika vizazi vya baadaye na wageni ambao watakuja kutoka nchi za mbali, wataona maafa, yaliyoipata nchi na magonjwa ambayo Bwana aliyaleta juu yake.
೨೨“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.
23 Nchi yote itakuwa jaa linaloungua la chumvi na kiberiti: hakutakuwa kilichopandwa, hakutakuwa kinachochipua, wala hakutakuwa mimea inayoota juu yake. Itakuwa kama maangamizo ya Sodoma na Gomora, Adma na Seboimu, ambazo Bwana aliangamiza kwa hasira kali.
೨೩ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
24 Mataifa yote yatauliza: “Kwa nini Bwana amefanya hivi juu ya nchi hii? Kwa nini hasira hii kali ikawaka?”
೨೪‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
25 Na jibu litakuwa: “Ni kwa sababu watu hawa waliacha Agano la Bwana, Mungu wa baba zao, Agano alilofanya nao wakati alipowatoa katika nchi ya Misri.
೨೫ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.
26 Walienda zao na kuabudu miungu mingine na kuisujudia, miungu wasioijua, miungu ambayo Mungu hakuwapa.
೨೬ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,
27 Kwa hiyo hasira ya Bwana ikawaka dhidi ya nchi hii, hivyo Mungu akaleta juu yake laana zote zilizoandikwa katika kitabu hiki.
೨೭ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.
28 Katika hasira kali na katika ghadhabu kuu Bwana aliwangʼoa kutoka nchi yao na kuwasukumia katika nchi nyingine, kama ilivyo sasa.”
೨೮ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
29 Mambo ya siri ni ya Bwana Mungu wetu, bali yaliyofunuliwa ni yetu na watoto wetu milele, ili tuweze kuyafanya maneno yote ya sheria hii.
೨೯“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”

< Torati 29 >