< Torati 8 >
1 Uwe mwangalifu kufuata kila agizo ninalokupa wewe leo, ili mweze kuishi, kuongezeka na mweze kuingia mkamiliki nchi ambayo Bwana aliahidi kwa kiapo kwa baba zenu.
೧ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
2 Kumbuka jinsi Bwana Mungu wenu alivyowaongoza katika njia yote katika jangwa kwa miaka hii arobaini, kukunyenyekeza na kukujaribu ili ajue lililoko moyoni mwako, kwamba utayashika maagizo yake au la.
೨ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.
3 Alikudhili na kukufanya uone njaa kisha akulishe kwa mana, ambayo wewe wala baba zako hamkuijua, awafundishe kuwa mwanadamu hataishi kwa mkate tu bali kwa kila neno litokalo katika kinywa cha Bwana.
೩ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
4 Nguo zenu hazikuchakaa wala miguu yenu haikuvimba kwa miaka hii arobaini.
೪ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.
5 Mjue basi ndani ya mioyo yenu kama mtu anavyomwadibisha mwanawe, ndivyo Bwana Mungu wako atawaadibisha ninyi.
೫ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.
6 Shikeni maagizo ya Bwana Mungu wenu mtembee katika njia zake na kumheshimu.
೬ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
7 Kwa kuwa Bwana Mungu wenu anawaleta katika nchi nzuri, nchi yenye vijito na mabwawa ya maji, yenye chemchemi zinazotiririka mabondeni na katika vilima;
೭ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ.
8 nchi yenye ngano na shayiri, mizabibu na mitini, mikomamanga, mafuta ya zeituni na asali;
೮ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.
9 nchi ambayo chakula hakitapungua na hamtakosa chochote; nchi ambayo miamba yake ni chuma na mnaweza kuchimba shaba kutoka kwenye vilima.
೯ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
10 Wakati mtakapokwisha kula na kushiba, msifuni Bwana Mungu wenu kwa ajili ya nchi nzuri aliyowapa.
೧೦ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.
11 Jihadharini msimsahau Bwana Mungu wenu, mkashindwa kushika maagizo yake, sheria na amri zake ambazo ninawapa leo.
೧೧ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.
12 Angalia wakati mtakapokuwa mmekula na kushiba, mkajenga nyumba nzuri na kukaa humo,
೧೨ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು,
13 na wakati makundi yenu ya ngʼombe na mbuzi na kondoo yatakapoongezeka na fedha na dhahabu yenu itakapoongezeka na vyote mlivyo navyo vitakapozidishwa,
೧೩ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ,
14 basi mioyo yenu isiwe na kiburi mkamsahau Bwana Mungu wenu aliyewatoa katika nchi ya Misri, kutoka nchi ya utumwa.
೧೪ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
15 Aliwaongoza kupitia jangwa lile kubwa na la kutisha, nchi ile ya kiu isiyo na maji, yenye nyoka wa sumu na nge. Aliwatolea maji kutoka kwenye mwamba mgumu.
೧೫ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
16 Aliwapa mana ya kula jangwani, kitu ambacho baba zenu hawakukijua, ili kuwanyenyekesha na kuwajaribu ninyi ili mwishoni apate kuwatendea mema.
೧೬ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
17 Mnaweza kusema, “Uwezo wangu na nguvu za mikono yangu ndizo zilizonipatia utajiri huu.”
೧೭ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.
18 Lakini kumbukeni Bwana Mungu wenu, ndiye ambaye huwapa uwezo wa kupata utajiri, na hivyo kulithibitisha Agano lake, ambalo aliwaapia baba zenu, kama ilivyo leo.
೧೮ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
19 Ikiwa mtamsahau Bwana Mungu wenu, mkaifuata miungu mingine, mkaiabudu na kuisujudia, ninashuhudia dhidi yenu leo kwamba hakika mtaangamizwa.
೧೯ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.
20 Kama mataifa Bwana aliyoyaangamiza mbele yenu, ndivyo ninyi mtakavyoangamizwa kwa kutokumtii Bwana Mungu wenu.
೨೦ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.