< Kutoka 18 >
1 Basi Yethro, kuhani wa Midiani, baba mkwe wa Mose, akawa amesikia kila kitu Mungu alichomfanyia Mose na watu wake wa Israeli, pia jinsi Bwana alivyowatoa Israeli Misri.
೧ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.
2 Baada ya Mose kumrudisha mkewe Sipora, Yethro baba mkwe wake alimpokea
೨ಆಗ ಮೋಶೆಯ ಮಾವನಾದ ಇತ್ರೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು.
3 pamoja na wanawe wawili. Jina la mmoja aliitwa Gershomu, kwa kuwa Mose alisema, “Nimekuwa mgeni katika nchi ya kigeni.”
೩ಆ ಪುತ್ರರಲ್ಲಿ ಒಬ್ಬನಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು.
4 Mwingine aliitwa Eliezeri, kwa kuwa alisema, “Mungu wa baba yangu alikuwa msaada wangu, akaniokoa kutoka upanga wa Farao.”
೪ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು.
5 Yethro, baba mkwe wa Mose, pamoja na wana wawili wa Mose na mkewe, wakamjia Mose huko jangwani, mahali alipokuwa amepiga kambi karibu na mlima wa Mungu.
೫ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನು, ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.
6 Yethro alikuwa ametuma ujumbe kwake Mose, kusema, “Mimi Yethro baba mkwe wako ninakuja kwako pamoja na mke wako na wanao wawili.”
೬ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು.
7 Kwa hiyo Mose akatoka kumlaki baba mkwe wake, akainama na kumbusu. Wakasalimiana, kisha wakaingia hemani.
೭ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.
8 Mose akamwambia baba mkwe wake kuhusu kila kitu Bwana alichomfanyia Farao na Wamisri kwa ajili ya Israeli, na pia kuhusu shida zote walizokutana nazo njiani na jinsi Bwana alivyowaokoa.
೮ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.
9 Yethro akafurahishwa sana kusikia juu ya mambo yote mazuri Bwana aliyowatendea Waisraeli kuwaokoa kutoka mkono wa Wamisri.
೯ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.
10 Yethro akasema, “Sifa na ziwe kwa Bwana, aliyekuokoa wewe kutoka mikononi mwa Wamisri na Farao, na aliyewaokoa watu kutoka mikononi mwa Wamisri.
೧೦ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.
11 Sasa najua ya kuwa Bwana ni mkuu kuliko miungu mingine yote, kwa kuwa amewatendea hivi wale waliowatenda Israeli kwa ujeuri.”
೧೧ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
12 Kisha Yethro, baba mkwe wa Mose, akaleta sadaka ya kuteketezwa na dhabihu nyingine kwa Mungu, naye Aroni pamoja na wazee wote wa Israeli wakaja kula chakula pamoja na baba mkwe wa Mose mbele za Mungu.
೧೨ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.
13 Siku iliyofuata, Mose akachukua nafasi yake kama hakimu wa watu, nao wakasimama kumzunguka kuanzia asubuhi hadi jioni.
೧೩ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.
14 Baba mkwe wake alipoona yote Mose anayowafanyia watu, akasema, “Ni nini hiki unachowafanyia watu? Kwa nini wewe unakuwa mwamuzi wa watu hawa peke yako, wakati watu hawa wamesimama wakikuzunguka tangu asubuhi mpaka jioni?”
೧೪ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು.
15 Mose akamjibu, “Kwa sababu watu wananijia kutaka mapenzi ya Mungu.
೧೫ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.
16 Kila wakiwa na shauri huletwa kwangu, nami huamua kati ya mtu na mwenzake na kuwajulisha juu ya amri na sheria za Mungu.”
೧೬ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ” ಎಂದು ಹೇಳಿದನು.
17 Baba mkwe wa Mose akamjibu, “Unachofanya sio kizuri.
೧೭ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, “ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.
18 Wewe pamoja na watu hawa wanaokujia mtajichosha bure. Kazi ni nzito sana kwako, huwezi kuibeba mwenyewe.
೧೮ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.
19 Sasa nisikilize mimi, nitakupa shauri, naye Mungu na awe pamoja nawe. Yapasa wewe uwe mwakilishi wa watu mbele za Mungu na ulete mashauri yao kwake.
೧೯ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.
20 Uwafundishe amri na sheria, tena uwaonyeshe namna ya kuishi na kazi zinazowapasa wao kufanya.
೨೦ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.
21 Lakini uchague watu wenye uwezo miongoni mwa watu wote, watu wanaomwogopa Mungu, watu waaminifu wanaochukia mali ya dhuluma, uwateuwe wawe maafisa juu ya maelfu, mamia, hamsini na makumi.
೨೧ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
22 Waweke wawe waamuzi wa watu kwa wakati wote, lakini waambie wakuletee kila shauri lililo gumu; yale yaliyo rahisi wayaamue wao wenyewe. Hii itafanya mzigo wako kuwa mwepesi, kwa sababu watashirikiana nawe.
೨೨ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.
23 Kama ukifanya hivi, na ikiwa Mungu ameagiza hivyo, utaweza kushinda uchovu, nao watu hawa wote watarudi nyumbani wameridhika.”
೨೩ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.
24 Mose akamsikiliza baba mkwe wake na kufanya kila kitu alichosema.
೨೪ಮೋಶೆ ತನ್ನ ಮಾವನ ಮಾತಿಗೆ ಒಪ್ಪಿಕೊಂಡು ಅವನು ಹೇಳಿದಂತೆಯೇ ಎಲ್ಲವನ್ನು ಮಾಡಿದನು.
25 Mose akawachagua watu wenye uwezo kutoka Israeli yote, akawafanya kuwa viongozi wa watu, maafisa juu ya maelfu, mamia, hamsini na makumi.
೨೫ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
26 Wakatumika kama waamuzi wa watu kwa wakati wote. Mashauri magumu wakayaleta kwa Mose, lakini yale yaliyo rahisi wakayaamua wenyewe.
೨೬ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
27 Kisha Mose akaagana na Yethro baba mkwe wake, naye akarudi kwa nchi yake.
೨೭ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.