< Kutoka 3 >

1 Basi Mose alikuwa anachunga mifugo ya Yethro mkwewe, kuhani wa Midiani. Mose akapeleka mifugo mbali nyuma ya jangwa, naye akafika Horebu, mlima wa Mungu.
ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
2 Huko malaika wa Bwana akamtokea Mose katika mwali wa moto kutoka kichakani. Mose akaona kwamba ingawa kile kichaka kilikuwa kinawaka moto, kilikuwa hakiteketei.
ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
3 Ndipo Mose akawaza, “Nitageuka sasa nione kitu hiki cha ajabu, nami nione ni kwa nini kichaka hiki hakiteketei.”
ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.
4 Bwana alipoona kuwa amegeuka ili aone, Mungu akamwita kutoka ndani ya kile kichaka, “Mose! Mose!” Naye Mose akajibu, “Mimi hapa.”
ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.
5 Mungu akamwambia, “Usikaribie zaidi. Vua viatu vyako, kwa maana mahali unaposimama ni patakatifu.”
ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.
6 Kisha akamwambia, “Mimi ni Mungu wa baba yako, Mungu wa Abrahamu, Mungu wa Isaki, na Mungu wa Yakobo.” Mose aliposikia hayo, akafunika uso wake kwa sababu aliogopa kumtazama Mungu.
ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.
7 Bwana akamwambia, “Hakika nimeona mateso ya watu wangu katika Misri. Nimesikia kilio chao kwa sababu ya wasimamizi wao, nami naguswa na mateso yao.
ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
8 Basi nimeshuka niwaokoe kutoka mkono wa Wamisri, niwatoe na kuwapandisha kutoka nchi hiyo, niwapeleke katika nchi nzuri na kubwa, nchi itiririkayo maziwa na asali, nchi ya Wakanaani, Wahiti, Waamori, Waperizi, Wahivi na Wayebusi.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
9 Sasa kilio cha Waisraeli kimenifikia, nami nimeona jinsi Wamisri wanavyowatesa.
ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
10 Basi, sasa nenda. Ninakutuma kwa Farao ili kuwatoa watu wangu Waisraeli kutoka Misri.”
೧೦ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.
11 Lakini Mose akamwambia Mungu, “Mimi ni nani hata niende kwa Farao kuwatoa Waisraeli nchini Misri?”
೧೧ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.
12 Naye Mungu akasema, “Mimi nitakuwa pamoja nawe. Hii itakuwa ishara kwako kwamba ni Mimi nimekutuma: Hapo utakapokuwa umewatoa watu Misri, mtamwabudu Mungu katika mlima huu.”
೧೨ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
13 Mose akamwambia Mungu, “Ikiwa nitawaendea Waisraeli na kuwaambia, ‘Mungu wa baba zenu amenituma kwenu,’ nao wakiniuliza, ‘Jina lake ni nani?’ Nitawaambia nini?”
೧೩ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
14 Mungu akamwambia Mose, “Mimi niko ambaye niko. Hivyo ndivyo utakavyowaambia Waisraeli: ‘Mimi niko amenituma kwenu.’”
೧೪ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.
15 Vilevile Mungu akamwambia Mose, “Waambie Waisraeli, ‘Bwana, Mungu wa baba zenu, Mungu wa Abrahamu, Mungu wa Isaki, na Mungu wa Yakobo amenituma kwenu.’ Hili ndilo Jina langu milele, Jina ambalo mtanikumbuka kwalo kutoka kizazi hadi kizazi.
೧೫ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.
16 “Nenda, ukawakusanye wazee wa Israeli, uwaambie, ‘Bwana, Mungu wa baba zenu, Mungu wa Abrahamu, Isaki na Yakobo, alinitokea akaniambia: Nimewatazama, nami nimeona mliyofanyiwa katika Misri.
೧೬ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.
17 Nami nimeahidi kuwapandisha kutoka mateso yenu katika nchi ya Misri, niwapeleke nchi ya Wakanaani, Wahiti, Waamori, Waperizi, Wahivi na Wayebusi, nchi itiririkayo maziwa na asali.’
೧೭ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.
18 “Wazee wa Israeli watakusikiliza. Kisha wewe na wazee mtakwenda kwa mfalme wa Misri na kumwambia, ‘Bwana, Mungu wa Waebrania ametutokea. Turuhusu twende safari ya siku tatu huko jangwani kutoa dhabihu kwa Bwana Mungu wetu.’
೧೮ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.
19 Lakini nafahamu kwamba mfalme wa Misri hatawaruhusu kwenda, mpaka mkono wenye nguvu umlazimishe.
೧೯ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.
20 Kwa hiyo nitaunyoosha mkono wangu na kuwapiga Wamisri kwa maajabu yote nitakayofanya miongoni mwao. Baada ya hayo, atawaruhusu mwondoke.
೨೦ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.
21 “Nami nitawapa hawa watu upendeleo mbele ya Wamisri, kwa hiyo mtakapoondoka nchini hamtaondoka mikono mitupu.
೨೧“ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.
22 Kila mwanamke Mwisraeli atamwomba jirani yake Mmisri na mwanamke yeyote anayeishi nyumbani kwake ampe vyombo vya fedha, dhahabu na nguo, ambavyo mtawavika wana wenu na binti zenu. Hivyo mtawateka nyara Wamisri.”
೨೨ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.

< Kutoka 3 >