< Hosea 9 >
1 Usifurahie, ee Israeli; usishangilie kama mataifa mengine. Kwa kuwa hukuwa mwaminifu kwa Mungu wako; umependa ujira wa kahaba kwenye kila sakafu ya kupuria nafaka.
೧ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
2 Sakafu za kupuria nafaka na mashinikizo ya kukamulia divai havitalisha watu, divai mpya itawapungukia.
೨ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
3 Hawataishi katika nchi ya Bwana, Efraimu atarudi Misri na atakula chakula kilicho najisi huko Ashuru.
೩ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.
4 Hawatammiminia Bwana sadaka ya divai wala dhabihu zao hazitampendeza. Dhabihu kama hizo zitakuwa kwao kama mkate wa waombolezaji; nao wote wazilao watakuwa najisi. Chakula hiki kitakuwa kwa ajili yao wenyewe; kisije katika Hekalu la Bwana.
೪ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.
5 Mtafanya nini katika siku ya sikukuu zenu zilizoamriwa, katika siku za sikukuu za Bwana?
೫ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?
6 Hata ikiwa wataokoka maangamizi, Misri atawakusanya, nayo Memfisi itawazika. Hazina zao za fedha zitasongwa na michongoma, nayo miiba itafunika mahema yao.
೬ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.
7 Siku za adhabu zinakuja, siku za malipo zimewadia. Israeli na afahamu hili. Kwa sababu dhambi zenu ni nyingi sana na uadui wenu ni mkubwa sana, nabii anadhaniwa ni mpumbavu, mtu aliyeongozwa na Mungu anaonekana mwendawazimu.
೭ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
8 Nabii, pamoja na Mungu wangu, ndiye mlinzi juu ya Efraimu, hata hivyo mitego inamngojea katika mapito yake yote, na uadui katika nyumba ya Mungu wake.
೮ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.
9 Wamezama sana katika rushwa, kama katika siku za Gibea. Mungu atakumbuka uovu wao na kuwaadhibu kwa ajili ya dhambi zao.
೯ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.
10 “Nilipompata Israeli, ilikuwa kama kupata zabibu jangwani; nilipowaona baba zenu, ilikuwa kama kuona matunda ya kwanza katika mtini. Lakini walipofika Baal-Peori, walijiweka wakfu kwa ile sanamu ya aibu, nao wakawa najisi kama kitu kile walichokipenda.
೧೦ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
11 Utukufu wa Efraimu utaruka kama ndege: hakuna kuzaa, hakuna kuchukua mimba, hakuna kutunga mimba.
೧೧ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
12 Hata wakilea watoto, nitamuua kila mmoja. Ole wao nitakapowapiga kisogo!
೧೨ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!
13 Nimemwona Efraimu, kama Tiro, aliyeoteshwa mahali pazuri. Lakini Efraimu wataleta watoto wao kwa mchinjaji.”
೧೩ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.
14 Wape, Ee Bwana, je, utawapa nini? Wape matumbo ya kuharibu mimba na matiti yaliyokauka.
೧೪ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.
15 “Kwa sababu ya uovu wao wote huko Gilgali, niliwachukia huko. Kwa sababu ya matendo yao ya dhambi, nitawafukuza katika nyumba yangu. Sitawapenda tena, viongozi wao wote ni waasi.
೧೫ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.
16 Efraimu ameharibiwa, mzizi wao umenyauka, hawazai tunda. Hata kama watazaa watoto, nitawachinja watoto wao waliotunzwa vizuri.”
೧೬ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.
17 Mungu wangu atawakataa kwa sababu hawakumtii; watakuwa watu wa kutangatanga miongoni mwa mataifa.
೧೭ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.