< Isaya 29 >
1 Ole wako, wewe Arieli, Arieli, mji alimokaa Daudi! Ongezeni mwaka kwa mwaka, na mzunguko wa sikukuu zenu uendelee.
೧ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.
2 Hata hivyo nitauzunguka Arieli kwa jeshi, utalia na kuomboleza, utakuwa kwangu kama mahali pa kuwashia moto madhabahuni.
೨ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.
3 Nitapiga kambi pande zote dhidi yako, nitakuzunguka kwa minara na kupanga mazingirwa yangu dhidi yako.
೩ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.
4 Utakaposhushwa, utanena kutoka ardhini, utamumunya maneno yako kutoka mavumbini. Sauti yako itatoka katika nchi kama vile ya mzimu, utanongʼona maneno yako toka mavumbini.
೪ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
5 Lakini adui zako wengi watakuwa kama vumbi laini, kundi la wakatili watakuwa kama makapi yapeperushwayo. Naam, ghafula, mara moja,
೫ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
6 Bwana Mwenye Nguvu Zote atakuja na ngurumo, tetemeko la ardhi, na kwa sauti kuu, atakuja na dhoruba, tufani na miali ya moto iteketezayo.
೬ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
7 Kisha makundi ya mataifa yote yale yapiganayo dhidi ya Arieli, yale yanayomshambulia yeye na ngome zake, na kumzunguka kwa jeshi, watakuwa kama ilivyo ndoto, kama maono wakati wa usiku:
೭ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.
8 kama vile mtu aliye na njaa aotavyo kuwa anakula, lakini huamka, bado njaa yake ingalipo, kama vile mtu mwenye kiu aotavyo kuwa anakunywa maji, lakini huamka akiwa anazimia, akiwa bado angali ana kiu. Hivyo ndivyo itakavyokuwa kwa makundi yote ya mataifa yanayopigana dhidi ya Mlima Sayuni.
೮ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
9 Duwaeni na kushangaa, jifanyeni vipofu wenyewe na msione, leweni, lakini si kwa mvinyo, pepesukeni lakini si kwa kileo.
೯ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.
10 Bwana amewaleteeni usingizi mzito: Ameziba macho yenu (ninyi manabii); amefunika vichwa vyenu (ninyi waonaji).
೧೦ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
11 Kwa maana kwenu ninyi, maono haya yote si kitu ila maneno yaliyotiwa lakiri katika kitabu. Kama mkimpa mtu yeyote awezaye kusoma kitabu hiki, nanyi mkamwambia, “Tafadhali kisome,” yeye atajibu, “Mimi siwezi, kwa kuwa kimetiwa lakiri.”
೧೧ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
12 Au kama mkimpa mtu yeyote kitabu hiki asiyeweza kusoma na kumwambia, “Tafadhali kisome,” atajibu, “Mimi sijui kusoma.”
೧೨ಅಕ್ಷರವಿಲ್ಲದವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ನನಗೆ ಓದಲು ಬರುವುದಿಲ್ಲ” ಎಂದು ಹೇಳುವನು.
13 Bwana anasema: “Watu hawa hunikaribia kwa vinywa vyao na kuniheshimu kwa midomo yao, lakini mioyo yao iko mbali nami. Ibada yao kwangu inatokana na maagizo waliyofundishwa na wanadamu.
೧೩ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
14 Kwa hiyo mara nyingine tena nitawashangaza watu hawa, kwa ajabu juu ya ajabu. Hekima ya wenye hekima itapotea, nayo akili ya wenye akili itatoweka.”
೧೪ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.
15 Ole kwa wale wanaokwenda kwenye vilindi virefu kumficha Bwana mipango yao, wafanyao kazi zao gizani na kufikiri, “Ni nani anayetuona? Ni nani atakayejua?”
೧೫ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
16 Mnapindua mambo juu chini, kana kwamba mfinyanzi aweza kufikiriwa kuwa kama udongo wa mfinyanzi! Je, kile kilichofinyangwa chaweza kumwambia yule aliyekifinyanga, “Wewe hukunifinyanga mimi?” Je, chungu kinaweza kumwambia mfinyanzi, “Wewe hujui chochote?”
೧೬ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?
17 Kwa muda mfupi sana, je, Lebanoni haitageuzwa kuwa shamba lenye rutuba, na shamba lenye rutuba liwe kama msitu?
೧೭ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.
18 Katika siku ile viziwi watasikia maneno ya kitabu, na katika utusitusi na giza macho ya kipofu yataona.
೧೮ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
19 Mara nyingine tena wanyenyekevu watafurahi katika Bwana, wahitaji watafurahi katika yeye Aliye Mtakatifu wa Israeli.
೧೯ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
20 Wakatili watatoweka na wenye kudhihaki watatokomea, nao wote wenye jicho la uovu watakatiliwa mbali,
೨೦ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.
21 wale ambao kwa neno humfanya mtu kuwa mwenye hatia, wamtegeao mtego mtetezi katika mahakama, na kwa ushuhuda wa uongo humnyima haki yeye asiye na hatia.
೨೧ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
22 Kwa hiyo hili ndilo Bwana, aliyemkomboa Abrahamu, analosema kwa nyumba ya Yakobo: “Yakobo hataaibishwa tena, wala nyuso zao hazitabadilika sura tena.
೨೨ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.
23 Wakati watakapoona watoto wao miongoni mwao, kazi ya mikono yangu, watalitakasa Jina langu takatifu; wataukubali utakatifu wa yeye Aliye Mtakatifu wa Yakobo, nao watamcha Mungu wa Israeli.
೨೩ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
24 Wale wanaopotoka rohoni watapata ufahamu, nao wale wanaolalamika watayakubali mafundisho.”
೨೪ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.