< Yoshua 18 >
1 Kusanyiko lote la Waisraeli likakusanyika huko Shilo na kusimamisha Hema la Kukutania. Nchi ikawa chini ya utawala wao,
೧ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
2 lakini palikuwa bado makabila saba ya Israeli ambayo yalikuwa hayajapokea urithi wao.
೨ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ.
3 Hivyo Yoshua akawaambia Waisraeli, “Je, mtasubiri hata lini ili kuingia kumiliki nchi ambayo Bwana, Mungu wa baba zenu, amewapa?
೩ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?
4 Chagueni watu watatu kutoka kwenye kila kabila. Nitawatuma hao watu kukagua hiyo nchi na kuniandikia mapendekezo ya mgawanyo wa urithi wa kila kabila. Nao watanirudia.
೪ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
5 Mtaigawanya hiyo nchi katika sehemu saba. Yuda atabaki katika eneo lake upande wa kusini na nyumba ya Yosefu katika nchi yake upande wa kaskazini.
೫ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.
6 Baada ya kuandika maelezo ya hizo sehemu saba za nchi, yaleteni kwangu, nami nitawapigia kura kwa kura mbele za Bwana Mungu wetu.
೬ಅವರು ಪಟ್ಟಿಯಲ್ಲಿ ದೇಶವನ್ನು ಏಳು ಪಾಲು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಬೇಕು. ನಾನು ನಿಮಗೋಸ್ಕರ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಚೀಟು ಹಾಕುವೆನು.
7 Hata hivyo, Walawi hawatakuwa na sehemu miongoni mwenu, kwa maana huduma ya ukuhani kwa Bwana ndio urithi wao. Nao Gadi, Reubeni na nusu ya kabila la Manase wameshapata urithi wao upande wa mashariki mwa Yordani, ambako Mose mtumishi wa Bwana aliwapa.”
೭ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು
8 Watu hao walipokuwa wanaondoka kwenda kuandika vizuri kuhusu hiyo nchi, Yoshua akawaagiza, “Nendeni mkakague hiyo nchi na mwandike maelezo kuihusu. Kisha mrudi kwangu, nami nitawapigia kura hapa Shilo mbele za Bwana.”
೮ದೇಶದ ಪಟ್ಟಿಯನ್ನು ಮಾಡತಕ್ಕ ಜನರು ಹೊರಡುವುದಕ್ಕಿಂತ ಮೊದಲು ಯೆಹೋಶುವನು ಅವರಿಗೆ, “ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಪಟ್ಟಿಮಾಡಿಕೊಂಡು ಶೀಲೋವಿನಲ್ಲಿರುವ ನನ್ನ ಬಳಿಗೆ ಬನ್ನಿರಿ. ನಾನು ಯೆಹೋವನ ಮುಂದೆ ನಿಮಗೋಸ್ಕರ ಚೀಟು ಹಾಕುವೆನು” ಎಂದು ಹೇಳಿ ಕಳುಹಿಸಿದನು.
9 Ndipo hao watu walipoondoka na kupita katika ile nchi. Wakaandika maelezo yake kwenye kitabu, mji kwa mji, katika sehemu saba na kurudisha taarifa kwa Yoshua huko kambini Shilo.
೯ಆ ಜನರು ಹೊರಟು ದೇಶದಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಅದರ ಗ್ರಾಮ ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂತಿರುಗಿ ಬಂದರು.
10 Basi Yoshua akawapigia kura huko Shilo mbele za Bwana, na hapo akagawanya ile nchi kwa Waisraeli kufuatana na mgawanyo wa kabila zao.
೧೦ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.
11 Kura iliangukia kabila la Benyamini, ukoo kwa ukoo. Eneo lao walilogawiwa lilikuwa kati ya kabila la Yuda na la Yosefu.
೧೧ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ.
12 Upande wa kaskazini mpaka wao ulianzia pale Yordani, kupitia kaskazini ya mteremko wa Yeriko na kuendelea magharibi kuingia katika nchi ya vilima, ukitokea kwenye jangwa la Beth-Aveni.
೧೨ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.
13 Kutoka hapo ulikatiza kwenye mteremko wa kusini mwa Luzu (yaani Betheli) na kushuka hadi Ataroth-Adari katika kilima kusini mwa Beth-Horoni ya Chini.
೧೩ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನ್ನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗುತ್ತದೆ.
14 Kutoka kilima kinachotazamana na Beth-Horoni upande wa kusini mpaka ule ukazunguka kusini kufuatia upande wa magharibi, na ukatokezea Kiriath-Baali (yaani Kiriath-Yearimu), mji wa watu wa Yuda. Huu ndio uliokuwa upande wa magharibi.
೧೪ಅದರ ಮೇರೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು ಕಿರ್ಯಾತ್ ಬಾಳ್ ಎನ್ನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯಾತ್ಯಾರೀಮ್ ಎಂಬ ಪಟ್ಟಣದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ಪಡುವಣ ಮೇರೆ.
15 Upande wa kusini mpaka ulianzia kwenye viunga vya Kiriath-Yearimu kwa upande wa magharibi, nao ukatokeza kwenye chemchemi ya maji ya Neftoa.
೧೫ದಕ್ಷಿಣ ದಿಕ್ಕಿನ ಮೇರೆಯು ಪಡುವಣ ಮೂಲೆಯಾಗಿರುವ ಕಿರ್ಯಾತ್ಯಾರೀಮಿನ ಪ್ರಾಂತ್ಯದಿಂದ
16 Mpaka ukateremka hadi shefela inayotazamana na Bonde la Ben-Hinomu, kaskazini mwa Bonde la Refaimu. Ukaendelea chini kwenye Bonde la Hinomu sambamba na mteremko wa kusini mwa mji mkubwa wa Wayebusi na kisha hadi En-Rogeli.
೧೬ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.
17 Kisha ukapinda kuelekea kaskazini, ukaenda hadi En-Shemeshi na kuendelea mpaka Gelilothi, inayotazamana na Njia ya Adumimu, ukateremka hadi kwenye Jiwe la Bohani mwana wa Reubeni.
೧೭ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
18 Ukaendelea upande wa mteremko wa kaskazini wa Beth-Araba ukateremka hadi Araba.
೧೮ಅರಾಬದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.
19 Kisha ukaenda mpaka kwenye mteremko wa kaskazini wa Beth-Hogla na kujitokeza kwenye ghuba ya kaskazini ya Bahari ya Chumvi, kwenye maingilio ya Yordani upande wa kusini. Huo ulikuwa mpaka wa kusini.
೧೯ಅಲ್ಲಿಂದ ಮೇರೆಯು ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಬಡಗಣ ಮೂಲೆಗೆ ಹೋಗಿ ಯೊರ್ದನ್ ನದಿಯು ಸಮುದ್ರಕ್ಕೆ ಬಂದು ಸೇರುವ ಸ್ಥಳದಲ್ಲಿ ಕೊನೆಗೊಳ್ಳುತ್ತದೆ. ಇದೇ ದಕ್ಷಿಣ ದಿಕ್ಕಿನ ಮೇರೆಯು.
20 Nayo Yordani ikawa ndio mpaka wa upande wa mashariki. Hii ilikuwa ndiyo mipaka iliyoonyesha urithi wa koo za Benyamini pande zote.
೨೦ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು.
21 Kabila ya Benyamini, ukoo kwa ukoo, ilikuwa na miji mikubwa ifuatayo: Yeriko, Beth-Hogla, Emeki-Kesisi,
೨೧ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
22 Beth-Araba, Semaraimu, Betheli,
೨೨ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,
೨೩ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
24 Kefar-Amoni, Ofni, na Geba; miji kumi na miwili pamoja na vijiji vyake.
೨೪ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;
25 Gibeoni, Rama na Beerothi,
೨೫ಗಿಬ್ಯೋನ್, ರಾಮಾ, ಬೇರೋತ್,
27 Rekemu, Irpeeli, Tarala,
೨೭ರೆಕೆಮ್, ಇರ್ಪೇಲ್, ತರಲಾ,
28 Zela, Elefu, mji wa Wayebusi (yaani Yerusalemu), Gibea na Kiriathi; miji kumi na minne pamoja na vijiji vyake. Huu ndio uliokuwa urithi wa Benyamini kwa ajili ya koo zake.
೨೮ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು ಇವೇ. ಬೆನ್ಯಾಮೀನ ಗೋತ್ರಗಳಿಗೆ ದೊರಕಿದ ಸ್ವತ್ತು ಇವೇ.