< Ruth 4 >
1 Boazi akakwea mpaka kwenye lango la mji, akaketi pale. Yule mtu wa jamaa aliyekuwa wa karibu wa kukomboa, ambaye Boazi alimtaja, akaja. Boazi akasema, “Njoo hapa, rafiki yangu. Karibu uketi.” Naye akakaribia, akaketi.
೧ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
2 Boazi akatwaa watu kumi miongoni mwa wazee wa mji, akawaambia, “Ketini hapa.” Nao wakaketi.
೨ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು.
3 Kisha akamwambia yule jamaa wa karibu wa kukomboa, “Naomi, aliyerudi hapa kutoka nchi ya Moabu, anauza sehemu ya ardhi iliyokuwa mali ya ndugu yetu Elimeleki.
೩ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.
4 Nami niliwaza nikujulishe wewe na kukuambia uinunue mbele ya hawa waliopo hapa, na mbele ya wazee wa watu wangu. Kama wewe utaikomboa, haya fanya hivyo. Lakini kama hutaikomboa, uniambie, ili nijue. Kwa kuwa hakuna mtu mwingine mwenye haki ya kuikomboa ila wewe na baada yako ni mimi.” Naye akasema, “Nitaikomboa mimi.”
೪ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.
5 Ndipo Boazi akasema “Siku utakaponunua hiyo ardhi kutoka kwa Naomi na Ruthu, Mmoabu, itakubidi kumchukua pia huyo mjane, ili kudumisha jina la marehemu pamoja na mali yake.”
೫ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.
6 Aliposikia hili, yule jamaa wa karibu wa kukomboa akasema, “Basi mimi sitaweza kuikomboa, kwa sababu inaonekana nitauhatarisha urithi wangu. Wewe ikomboe mwenyewe. Mimi sitaweza.”
೬ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.
7 (Basi katika siku za kale huko Israeli, ili kukamilisha tendo la kukomboa na kukabidhiana mali, mmoja huvua kiatu chake na kumpatia mwingine. Hii ilikuwa ni njia ya kuhalalisha mabadilishano katika Israeli.)
೭ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
8 Basi yule jamaa wa karibu wa kukomboa akamwambia Boazi, “Wewe inunue mwenyewe.” Naye huyo jamaa akavua kiatu chake.
೮ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು.
9 Kisha Boazi akawatangazia wazee na watu wote waliokuwepo, “Leo ninyi ni mashahidi kwamba mimi nimenunua kutoka kwa Naomi yote yaliyokuwa mali ya Elimeleki, Kilioni na Maloni.
೯ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;
10 Nimemchukua pia Ruthu, Mmoabu, mjane wa Maloni, awe mke wangu, ili kuendeleza jina la marehemu pamoja na mali zake, ili jina lake marehemu lisitoweke miongoni mwa jamaa yake, wala katika kumbukumbu za mji wake. Leo hivi ninyi ni mashahidi!”
೧೦ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
11 Kisha wazee pamoja na watu wote waliokuwa langoni wakasema, “Sisi ni mashahidi. Bwana na amfanye mwanamke huyu aingiaye nyumbani mwako kuwa kama Raheli na kama Lea, wale wanawake wawili ambao pamoja waliijenga nyumba ya Israeli. Nawe ufanikiwe katika Efrathi na uwe mashuhuri katika Bethlehemu.
೧೧ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
12 Kupitia kwa watoto ambao Bwana atakupa kutokana na huyu mwanamwali, jamaa yako na ifanane na ya Peresi, ambaye Tamari alimzalia Yuda.”
೧೨ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ” ಅಂದರು.
13 Basi Boazi akamwoa Ruthu, naye akawa mke wake. Alipoingia kwake, Bwana akamjalia Ruthu, naye akapata mimba, akamzaa mtoto wa kiume.
೧೩ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
14 Wanawake wakamwambia Naomi: “Ahimidiwe Bwana, asiyekuacha bila kuwa na jamaa wa karibu wa kukomboa. Na awe mashuhuri katika Israeli yote!
೧೪ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.
15 Atakurejeshea uhai wako na kukuangalia katika siku za uzee wako. Kwa maana mkweo ambaye anakupenda, na ambaye kwako ni bora zaidi ya watoto wa kiume saba, ndiye alimzaa.”
೧೫ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.
16 Basi Naomi akamchukua yule mtoto, akampakata na akawa mlezi wake.
೧೬ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.
17 Wanawake waliokuwa jirani zake wakasema, “Naomi ana mtoto wa kiume.” Wakamwita jina lake Obedi. Yeye ndiye baba yake Yese, aliye baba yake Daudi.
೧೭ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.
18 Hivi ndivyo vizazi vya Peresi: Peresi alimzaa Hesroni,
೧೮ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು;
19 Hesroni akamzaa Ramu, Ramu akamzaa Aminadabu,
೧೯ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
20 Aminadabu akamzaa Nashoni, Nashoni akamzaa Salmoni,
೨೦ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು;
21 Salmoni akamzaa Boazi, Boazi akamzaa Obedi,
೨೧ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;
22 Obedi akamzaa Yese, na Yese akamzaa Daudi.
೨೨ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.