< Ruth 1 >

1 Wakati Waamuzi walipotawala Israeli, kulikuwa na njaa katika nchi. Mtu mmoja kutoka nchi ya Bethlehemu ya Yuda, pamoja na mke wake na wanawe wawili, akaenda kuishi katika nchi ya Moabu.
ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.
2 Mtu huyu aliitwa Elimeleki, mkewe aliitwa Naomi, na hao wanawe wawili waliitwa Maloni na Kilioni. Walikuwa Waefrathi kutoka Bethlehemu ya Yuda. Wakaenda katika nchi ya Moabu, wakaishi huko.
ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು.
3 Elimeleki mumewe Naomi akafa, hivyo Naomi akabaki na wanawe wawili.
ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತುಹೋದನು. ಆಕೆಯೂ ಆಕೆಯ ಇಬ್ಬರು ಪುತ್ರರೂ ಉಳಿದರು.
4 Nao wakaoa wanawake Wamoabu, jina la mmoja aliitwa Orpa, na wa pili aliitwa Ruthu. Baada ya kama miaka kumi,
ಇವರು ಒರ್ಫಾ, ರೂತ್ ಎಂಬ ಹೆಸರುಗಳುಳ್ಳ ಇಬ್ಬರು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
5 Maloni na Kilioni pia wakafa. Basi Naomi akabaki hana mume wala wanawe wawili.
ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
6 Aliposikia akiwa huko Moabu kwamba Bwana amewasaidia watu wake kwa kuwapa chakula, Naomi na wakweze wakajiandaa kurudi nyumbani.
ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
7 Yeye na wakweze wawili wakaondoka pale walipokuwa wakiishi na kushika njia kurudi nchi ya Yuda.
ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು.
8 Ndipo Naomi akawaambia wale wakwe zake wawili, “Rudini, kila mmoja wenu nyumbani kwa mama yake. Bwana na awatendee fadhili kama mlivyowatendea hao waliofariki, na pia mimi.
ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ.
9 Bwana na amjalie kila mmoja wenu maisha mema nyumbani kwa mume mwingine.” Kisha akawabusu, nao wakalia kwa sauti kubwa,
ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.
10 wakamwambia, “Tutarudi pamoja na wewe nyumbani kwa watu wako.”
ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ, “ನಿಶ್ಚಯವಾಗಿ ನಿಮ್ಮ ಜನರ ಬಳಿಗೆ ನಿಮ್ಮ ಸಂಗಡ ತಿರುಗಿ ಬರುತ್ತೇವೆ,” ಎಂದರು.
11 Lakini Naomi akasema, “Rudini nyumbani, binti zangu. Kwa nini mnifuate? Je, mimi nitaweza tena kuwa na wana wengine ambao wataweza kuwaoa ninyi?
ಅದಕ್ಕೆ ನೊವೊಮಿಯು, “ಬೇಡ ನನ್ನ ಮಕ್ಕಳೇ, ನೀವು ಹಿಂತಿರುಗಿ ಹೋಗಿರಿ. ನನ್ನ ಸಂಗಡ ಏಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ಮುಂದೆ ನನ್ನ ಗರ್ಭದಲ್ಲಿ ನನಗೆ ಪುತ್ರರಾಗುವರೋ?
12 Rudini nyumbani, binti zangu; mimi ni mzee kiasi kwamba siwezi kumpata mume mwingine. Hata kama ningefikiria kuwa bado kuna tumaini kwangu, hata kama ningekuwa na mume usiku huu na kuwazaa wana,
ನನ್ನ ಮಕ್ಕಳೇ, ನೀವು ನಿಮ್ಮ ಮನೆಗೆ ಹಿಂದಿರುಗಿ ಹೋಗಿರಿ. ಏಕೆಂದರೆ ನಾನು ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ, ನಾನು ಸಂತಾನವಾಗುವ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹೆತ್ತರೂ,
13 je, mngesubiri mpaka wakue? Mngebakia bila kuolewa mkiwasubiri? La, hasha, binti zangu. Nimepata uchungu kuliko ninyi, kwa sababu mkono wa Bwana umekuwa kinyume nami!”
ಅವರು ದೊಡ್ಡವರಾಗುವವರೆಗೂ ಕಾದು ಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಇಲ್ಲ, ನನ್ನ ಮಕ್ಕಳೇ; ಯೆಹೋವ ದೇವರ ಹಸ್ತವು ನನಗೆ ವಿರೋಧವಾಗಿದೆ. ಆದ್ದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ,” ಎಂದಳು.
14 Kisha wakalia tena kwa sauti. Orpa akambusu mama mkwe wake, akaenda zake, lakini Ruthu akaambatana naye.
ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.
15 Naomi akamwambia, “Tazama, mwenzako anarejea kwa watu wake na kwa miungu yake. Rudi pamoja naye.”
ಆಗ ನೊವೊಮಿ, “ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರುಗಿ ಹೋದಳು. ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು,” ಎಂದಳು.
16 Lakini Ruthu akajibu, “Usinisihi nikuache au niache kukufuata. Utakakokwenda nami nitakwenda, na wewe utakapoishi nitaishi. Watu wako watakuwa watu wangu, na Mungu wako atakuwa Mungu wangu.
ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.
17 Pale utakapofia nami nitafia hapo, na papo hapo nitazikwa. Bwana na aniadhibu vikali, kama kitu kingine chochote kitanitenga nawe isipokuwa kifo.”
ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು.
18 Naomi alipotambua kwamba Ruthu amenuia kufuatana naye, hakuendelea kumsihi tena.
ರೂತಳು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ನೊವೊಮಿ ತಿಳಿದು ಸುಮ್ಮನಾದಳು.
19 Kwa hiyo hao wanawake wawili wakaondoka, wakafika Bethlehemu. Walipofika Bethlehemu, mji mzima ulitaharuki, wanawake wakashangaa, wakasema, “Huyu aweza kuwa ni Naomi?”
ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ನಡೆದುಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣದವರಲ್ಲಿ ಕುತೂಹಲ ಮೂಡಿಸಿತು. ಅವರು, “ಇವಳು ನೊವೊಮಿಯೋ?” ಎಂದರು.
20 Akawaambia, “Msiniite tena Naomi, niiteni Mara, kwa sababu Mwenyezi amenitendea mambo machungu sana.
ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.
21 Mimi niliondoka hali nimejaa, lakini Bwana amenirudisha mtupu. Kwa nini kuniita Naomi? Bwana amenitendea mambo machungu; Mwenyezi ameniletea msiba.”
ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು.
22 Kwa hiyo Naomi alirudi pamoja na Ruthu Mmoabu mkwe wake, nao wakafika Bethlehemu mwanzoni mwa kuvuna shayiri.
ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತಳೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶದಿಂದ ತಿರುಗಿಬಂದಳು. ಅವರು ಜವೆಗೋಧಿಯ ಸುಗ್ಗಿಯ ಕಾಲ ಪ್ರಾರಂಭವಾದಾಗ ಬೇತ್ಲೆಹೇಮಿಗೆ ತಲುಪಿದರು.

< Ruth 1 >