< 1 Samweli 19 >

1 Sauli akamwambia Yonathani mwanawe na watumishi wake wote kwamba wanapaswa kumuua Daudi. Lakini Yonathani, mwana wa Sauli, alitamani sana akae na Daudi.
ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.
2 Hivyo Yonathani akamwambia Daudi, “Baba yangu Sauli anatafuta kukuua. Kwa hiyo uwe macho wakati wa asubuhi na jifiche mahali pa siri.
ಆದ್ದರಿಂದ ಅವನು ದಾವೀದನಿಗೆ, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು. ನಾಳೆ ಬೆಳಿಗ್ಗೆ ಒಂದು ಗುಪ್ತವಾದ ಸ್ಥಳದಲ್ಲಿ ಅಡಗಿಕೊಂಡಿರು.
3 Nami nitatoka nje na kusimama kando ya baba yangu huko shambani uliko wewe, na nitazungumza na baba yangu kuhusu wewe. Kama nikijua jambo lolote nitakuambia.”
ನೀನು ಅಡಗಿಕೊಂಡಿರುವ ಹೊಲಕ್ಕೆ ನಾನು ಬಂದು, ನನ್ನ ತಂದೆಯ ಬಳಿಯಲ್ಲಿ ನಿಂತು, ನಿನ್ನ ವಿಷಯವನ್ನು ಮಾತನಾಡಿ, ಅವನಿಂದ ತಿಳಿದು ಬರುವ ವಿಚಾರವನ್ನು ನಿನಗೆ ತಿಳಿಸುವೆನು” ಎಂದು ಹೇಳಿದನು.
4 Yonathani alimsifia Daudi mbele ya Sauli baba yake akisema, “Mfalme asije akafanya dhambi dhidi ya mtumishi wake Daudi. Maana yeye hajakutenda dhambi, mambo aliyofanya yamekusaidia sana.
ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ, “ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯ ಮಾಡದಿರಲಿ. ಅವನು ನಿನಗೆ ದ್ರೋಹ ಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.
5 Maana alijitoa maisha yake na kumuua yule Mfilisti, naye BWANA akawaletea Waisraeli wote wokovu mkuu. Tena uliuona na kufurahi. Kwa nini utende dhambi juu damu isiyo na hatia kwa kumuua Daudi bila sababu?”
ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.
6 Sauli alimsikiliza Yonathani. Sauli akaapa, “Kama BWANA aishivyo, Yonathani hatauawa.”
ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.
7 Ndipo Yonathani akamwita Daudi na kumwambia mambo hayo yote. Na Yonathani akamleta Daudi kwa Sauli, naye Daudi akawa mbele zake kama zamani.
ಆಗ ಯೋನಾತಾನನು ದಾವೀದನನ್ನು ಕರೆದು, ಅವನಿಗೆ ಈ ಮಾತುಗಳನ್ನು ತಿಳಿಸಿ, ಸೌಲನ ಬಳಿಗೆ ಕರೆದುಕೊಂಡು ಬಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.
8 Baadaye kukawa na vita tena. Daudi akatoka na kupigana na Wafilisti na kuwashinda kwa mauaji makubwa mno. Nao wakakimbia mbele yake.
ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.
9 Yule roho wa ubaya kutoka kwa BWANA ikamjia Sauli alipokuwa ameketi nyumbani mwake na mkuki mkononi mwake, na Daudi akiwa anapiga chombo chake.
ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.
10 Sauli alijaribu kumpigilia Daudi ukutani kwa mkuki wake, lakini akaponyoka kutoka machoni pake, na kwamba Sauli akashindilia mkuki ndani ya ukuta. Daudi alikimbia na kutoroka usiku huo.
೧೦ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.
11 Bado Sauli aliwatuma wajumbe nyumbani kwa Daudi wamvizie kusudi aweze kumuua asubuhi. Mkewe Daudi, Mikali, akamwambia, “Usipoyaokoa maisha yako usiku huu, kesho utauwawa.”
೧೧ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ
12 Hivyo Mikali akamteremsha Daudi kupita dirishani. Naye akaenda, akakimbia na kutoroka.
೧೨ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಲು ಅವನು ಓಡಿಹೋಗಿ ತಪ್ಪಿಸಿಕೊಂಡನು.
13 Mikali alichukua kinyago na kukilaza juu ya kitanda. Kisha akaweka mto wa singa za mbuzi kichwani pake, na akakifunika na nguo.
೧೩ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.
14 Sauli alipowatuma wajumbe kumchukua Daudi, mkewe akasema, “Daudi ni mgonjwa.”
೧೪ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು ಅವನಿಗೆ ಸ್ವಸ್ಥವಿಲ್ಲವೆಂದು ಹೇಳಿಕಳುಹಿಸಿದಳು.
15 Kisha Sauli akawatuma wajumbe kumtazama; akisema, “Mleteni kwangu akiwa kitandani, ili nimuue.”
೧೫ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.
16 Wale wajumbe walipoingia ndani, tazama, kile kinyago kilikuwa kitandani pamoja na mto wa singa za mbuzi kichwani.
೧೬ಅವರು ಹೋಗಿ ನೋಡಲು ಹಾಸಿಗೆಯ ಮೇಲಿರುವುದು ಮೇಕೆಕೂದಲಿನಿಂದ ಹೆಣೆದ ಜಾಲರಿಯ ಒಂದು ವಿಗ್ರಹ ಎಂದು ತಿಳಿದುಬಂತು.
17 Sauli akamuuliza Mikali, “Kwa nini umenidanganya na kumwachilia adui yangu aende, na tena ametoroka?” Mikali akamjibu Sauli, “Aliniambia, 'Acha niende. Kwa nini nikuuwe?”'
೧೭ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.
18 Basi Daudi akakimbia na kutoroka, na akaenda kwa Samweli huko Rama na kumweleza yote ambayo Sauli amemtendea. Ndipo yeye na Samweli wakaenda na kukaa Nayothi.
೧೮ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ನಯೋತ್ ಎಂಬ ಸ್ಥಳದಲ್ಲಿ ವಾಸವಾಗಿದ್ದರು.
19 Naye Sauli akaambiwa kwamba, “Tazama, Daudi yuko huko Nayothi iliyoko Rama.”
೧೯ದಾವೀದನು ರಾಮದ ನಯೋತಿನಲ್ಲಿರುವುದು ಸೌಲನಿಗೆ ಗೊತ್ತಾಗಲು,
20 Kisha Sauli akawatuma wajumbe kumkamata Daudi. Nao walipowaona kundi la manabii wakitabiri, na Samweli akisimama kama kiongozi wao, Roho wa Mungu akawaingia wale wajumbe wa Sauli, nao pia wakatabiri.
೨೦ಅವನು ದಾವೀದನನ್ನು ಹಿಡಿದು ತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪ್ರವಾದಿಸುತ್ತಿರುವುದನ್ನೂ, ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನು ಕಂಡಾಗ, ದೇವರ ಆತ್ಮವು ಅವರ ಮೇಲೆಯೂ ಬಂದಿತು. ಅವರೂ ಪ್ರವಾದಿಸಿದರು.
21 Sauli alipoambiwa hivyo, akawatuma wajumbe wengine, nao pia wakatabiri. Basi Sauli aliwatuma tena wajumbe kwa mara ya tatu, na hao pia wakatabiri.
೨೧ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.
22 Kisha naye akaenda Rama na kufika katika kisima kirefu kilichoko huko Seku. Akauliza, “Samweli na Daudi wako wapi?” Mtu mmoja akasema, “Angalia, Wako Nayothi huko Rama.”
೨೨ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.
23 Hivyo Sauli akaenda Nayothi huko Rama. Ndipo Roho wa Mungu pia akaja juu yake, naye alipokuwa akienda alitabiri, hadi alipofika Nayothi huko Rama.
೨೩ಅವನು ಅಲ್ಲಿಂದ ರಾಮದ ನಯೋತಿಗೆ ಹೋಗುವಾಗ ದೇವರ ಆತ್ಮವು ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವ ತನಕ ಪ್ರವಾದಿಸುತ್ತಾ ಹೋದನು.
24 Na yeye pia, alirarua mavazi yake, naye pia akatabiri mbele ya Samweli siku hiyo akilala uchi mchana kutwa na usiku kucha. Kwa sababu ya jambo hili, watu husema, “Je, Sauli pia ni miongoni mwa manabii?”
೨೪ಅಲ್ಲಿಗೆ ಸೇರಿದ ಮೇಲೆ ಅವನು ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪ್ರವಾದಿಸುತ್ತಾ, ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಇದರಿಂದ “ಸೌಲನೂ ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ” ಎಂಬ ಮಾತು ಪ್ರಚಲಿತವಾಯಿತು.

< 1 Samweli 19 >