< 2 Petro 1 >
1 Simon Petro, Mtumwa na Mtume wa Yesu Kristo, Kwa wale walioipokea imani ile ile ya thamani kama tulivyoipokea sisi, imani iliyo ndani ya haki ya Mungu na mwokozi wetu Yesu Kristo.
೧ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
2 Neema iwe kwenu; amani iongezeke kupitia maarifa ya Mungu na Bwana wetu Yesu.
೨ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.
3 Kupitia maarifa ya Mungu tumepata mambo yake yote kwa ajili ya uchaji wamaisha, Toka kwa Mungu aliyetuita kwa ajili ya uzuri wa utukufu wake.
೩ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
4 Kwa njia hii alitutumainishia ahadi kuu za thamani. Alifanya hili ili kutufanya warith wa asili ya Mungu, kwa kadiri tunavyoendelea kuuacha uovu wa dunia hii.
೪ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
5 Kwa sababu hii, fanyeni bidii kuongeza uzuri kwa njia ya imani yenu, kwa sababu ya uzuri, maarifa.
೫ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
6 Kupitia maarifa, kiasi, na kupitia kiasi saburi, na kupitia saburi, utauwa.
೬ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,
7 Kupitia utauwa upendo wa ndugu na kupitia upendo wa ndugu, upendo.
೭ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
8 Kama mambo haya yamo ndani yenu, yakiendelea kukua ndani yenu, basi ninyi hamtakuwa tasa au watu msiozaa matunda katika maarifa ya Bwana wetu Yesu Kristo.
೮ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.
9 Lakini yeyote asiyekuwa na mambo haya, huyaona mambo ya karibu tu; yeye ni kipofu. amesahau utakaso wa dhambi zake za kale.
೯ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
10 Kwa hiyo, ndugu zangu, fanyeni juhudi ili kujihakikishia uteule na wito kwa ajili yenu. Kama mtayafanya haya, hamtajikwaa.
೧೦ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
11 Hivyo mtajipatia wingi wa lango la kuingilia katika ufalme wa milele wa Bwana wetu na mwokozi Yesu Kristo. (aiōnios )
೧೧ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು. (aiōnios )
12 Kwa hiyo mimi nitakuwa tayari kuwakumbusha mambo haya kila mara, hata kama mnayafahamu, na sasa mmekuwa imara katika kweli.
೧೨ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು.
13 Nafikiria kuwa niko sahihi kuwaamsha na kuwakumbusha juu ya mambo haya, ningali nimo katika hema hii.
೧೩ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.
14 Kwa maana najua kuwa si muda mrefu nitaiondoa hema yangu, kama Bwana Yesu Kristo alivyonionyesha.
೧೪ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.
15 Nitajitahidi kwa bidii kwa ajili yenu ili mkumbuke mambo haya baada ya mimi kuondoka.
೧೫ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.
16 Kwa kuwa sisi hatukufuata hadthi zilizoingizwa kwa ustadi pale tulipowaeleza juu ya nguvu na kujidhihirisha kwa Bwana wetu Yesu Kristo, bali sisi tulikuwa mashahidi wa utukufu wake.
೧೬ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
17 Yeye alipokea Utukufu na heshima toka kwa Mungu baba pale sauti iliposikika toka katika utukufu mkuu ikisema, “Huyu ndiye mwanangu, mpendwa wangu ambaye nimependezwa naye.”
೧೭ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
18 Tuliisikia sauti hii ikitokea mbinguni pale tulipokuwa naye kwenye ule mlima mtakatifu.
೧೮ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.
19 Tunalo hili neno la unabii lililothibitika, ambalo kwalo mwafanya vyema kulitekeleza. Ni kama taa ing'aayo gizani mpaka kuchapo na nyota za mawio zionekanazo katika mioyo yenu.
೧೯ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
20 Tambueni haya ya kwamba, hakuna unabii unaoandikwa kwa sababu ya kujifikirisha kwa nabii mwenyewe.
೨೦ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.
21 Kwa kuwa hakuna unabii uliokuja kwa mapenzi ya mwanadamu, isipokuwa wanadamu waliwezeshwa na Roho Mtakatifu aliyeongea toka kwa Mungu.
೨೧ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.