< Torati 8 >

1 Mnapaswa kuyashika maagizo yote ninayowapa leo, ili kwamba mweze kuishi na kuongezeka, na kuingia na kuimiliki nchi ambayo Yahwe aliaapa kwa baba zenu.
ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.
2 Mtakumbuka akilini njia zote ambazo Yahwe Mungu amewaongoza miaka hii arobaini kwenye jangwa, ili kwamba apate kuwanyenyekeza, ili kwamba awajaribu kujua nini kilikuwa ndani ya mioyo yenu, kama mungeweza kuyashika maagizo yake au hapana.
ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.
3 Aliwanyenyekeza, na kuwafanya kuwa na njaa, na kuwalisha manna, ambayo hamkuijua na ambayo baba zenu hawakuijua. Alifanya hivyo kuwafanya nyie kujua si kwa mkate tu watu wanaishi, badala ni kwa chochote hutoka kwenye kinywa cha Yahwe kwamba watu wanaishi.
ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
4 Mavazi yenu hayakuchanika na kudondoka, na miguu yenu haikuvimba kipindi cha miaka hiyo arobaini.
ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.
5 Mtatafakari katika mioyo yenu kuhusu, namna, kama mtu anavyo mwadibisha kijana wake, hivyo Yahwe Mungu wenu anawadibisha ninyi.
ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.
6 Mtayashika maagizo ya Yahwe Mungu wenu, ili kwamba mweze kutembea katika njia zake na kumheshimu.
ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಂಡು, ಅವರ ಮಾರ್ಗಗಳಲ್ಲಿ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
7 Kwa kuwa Yahwe Mungu wenu anawaleta katika nchi nzuri, nchi ya vijito vya maji, visima na chemchemi, vitiririkavyo kwenda kwenye mabonde na miongoni mwa milima,
ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ.
8 nchi ya ngano na shayiri, mizabibu, mtini, na komamanga; nchi mizeituni na asali.
ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.
9 Ni nchi ambayo mtakula mkate bila kupungukiwa, na ambapo mtaenda bila chochote; nchi ambayo mawe yametengenezwa kwa chuma, na kutokana na milima mtaweze kuchimba shaba.
ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.
10 Mtakula na kushiba, na mtambariki Yahwe Mungu wenu kwa nchi nzuri ambayo amewapa.
ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.
11 Iweni makini kwamba msimsahau Yahwe Mungu wenu, na kwamba msipuuzie maagizo yake, hukumu zake, na sheria zake ambazo ninakuamuru leo,
ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.
12 vinginenyo unapokula na ukashiba, na wakati unajenga nyumba nzuri na kuishi ndani zao.
ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,
13 Na muwe makini wakati makundi yenu na mifugo yenu ikiongezeka, na wakati wa fedha zenu na dhahabu zenu zikiongezeka, na vyote mlivyonavyo kuongezeka,
ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,
14 basi kwamba mioyo yenu iliniuliza juu ya kumsahau Yahwe Mungu wenu-aliyewaleta kutoka nchi ya Misri, toka nyumba ya utumwa.
ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.
15 Usimsahau yeye aliyewaongoza kupitia jangwa kuu na la kutisha, ambako ndani yake kulikuwa na nyoka wa moto na nge, na pitia nchi yenye kiu ambako hapakuwa na maji, ambaye yeye alileta maji toka kwenye mwamba wa jiwe.
ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.
16 Ambaye aliwalisha kwenye jangwa kwa manna ambayo mababu zenu hawakuijua, ili kwamba awajaribu, kufanya uzuri kwenu mwishoni-
ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.
17 lakini mnaweza kusema mioyoni mwenu, Nguvu yangu na mkono wangu wa uweza umepata utajiri huu wote.
ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.
18 Lakini mtamkumbuka akilini Yahwe Mungu wenu, kwa kuwa ni yeye awapae ninyi nguvu ya kupata utajiri, ili kwamba aweze kuanzisha agano lake aliloapa kwa baba zenu, kama ilivyo leo.
ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.
19 Itakuwa kwamba, kama mtamsahau Yahwe Mungu wenu na kuwaendea miungu mingine, kuibudu, na kuiheshimu, nashuhudia kinyume dhidi yenu leo kwamba mtateketea.
ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.
20 Kama mataifa ambayo Yahwe anatengeneza kuyaangamiza mbele yenu, hivyo mtaangamia, kwa sababu hamkusikiliza sauti ya Yahwe Mungu wenu.
ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.

< Torati 8 >