< Mwanzo 38 >
1 Ikawa wakati ule Yuda akawaacha ndugu zake na kukaa na Mwadulami fulani, jina lake Hira.
ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು.
2 Pale akakutana na binti Mkanaani jina lake Shua. Akamwoa na kulala naye.
ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು, ಅವಳನ್ನು ಮದುವೆಯಾಗಿ ಅವಳನ್ನು ಕೂಡಿದನು.
3 Akawa mjamzito na kuzaa mwana. Akaitwa Eri.
ಅವಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ್ ಎಂದು ಹೆಸರಿಟ್ಟನು.
4 Akawa mjamzito tena na kuzaa mwana tena. Akamwita jina lake Onani.
ಆಕೆಯು ತಿರುಗಿ ಗರ್ಭಿಣಿಯಾಗಿ ಮಗನನ್ನು ಹೆತ್ತು, ಅವನಿಗೆ ಓನಾನ್ ಎಂದು ಹೆಸರಿಟ್ಟಳು.
5 Akazaa mwana mwingine akamwita jina lake Shela. Alikuwa huko Kezibu alipomzaa.
ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು, ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ, ಯೆಹೂದನು ಕೆಜೀಬಿನಲ್ಲಿ ಇದ್ದನು.
6 Yuda akaona mke kwa ajili ya Eri, mzaliwa wake wa kwanza. Jina lake Tamari.
ಇದಾದ ಮೇಲೆ ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ತಾಮಾರ್ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.
7 Eri, mzaliwa wa kwanza wa Yuda, alikuwa mwovu mbele za Yahwe. Yahwe akamwua.
ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.
8 Yuda akamwambia Onani, “Lala na mke wa nduguyo. Fanya wajibu wa shemeji kwake, na umwinulie nduguyo mwana.”
ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು.
9 Onani alijua kwamba mtoto asingekuwa wake. Pindi alipolala na mke wa kaka yake, alimwaga mbegu juu ya ardhi ili kwamba asimpatie nduguye mtoto.
ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.
10 Alilolifanya lilikuwa ovu mbele za Yahwe. Yahwe akamwua pia.
ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.
11 Kisha Yuda akamwambia Tamari, mkwewe, “Ukakae mjane katika nyumb aya baba yako hadi Shela, mwanangu, atakapokuwa.” Kwani aliogopa, “Asije akafa pia, kama nduguze.” Tamari akaondoka na kuishi katika nyumba ya babaye.
ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
12 Baada ya muda mrefu, binti Shua, mkewe Yuda, alikufa. Yuda akafarijika na kwenda kwa wakatao kondoo wake manyoya huko Timna, yeye na rafiki yake, Hira Mwadulami.
ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.
13 Tamari akaambiwa, “Tazama, mkweo anakwenda Timna kukata kondoo wake manyoya.”
ಆಗ ತಾಮಾರಳಿಗೆ, “ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೆ ತಿಮ್ನಾ ಊರಿಗೆ ಹೋಗುತ್ತಿದ್ದಾನೆ,” ಎಂದು ತಿಳಿಸಿದಾಗ,
14 Akavua mavazi yake ya ujane na akajifunika kwa ushungi. Akakaa katika lango la Enaimu, lililoko kando ya njia iendayo Timna. Kwa maana aliona kwamba Shela amekua lakini akupewe kuwa mke wake.
ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.
15 Yuda alipomwona alidhani ni kahaba kwa maana alikuwa amefunika uso wake.
ಯೆಹೂದನು ಅವಳನ್ನು ಕಂಡಾಗ, ಅವಳು ಮುಖ ಮುಚ್ಚಿಕೊಂಡಿದ್ದರಿಂದ ಅವಳು ವೇಶ್ಯೆಯೆಂದು ತಿಳಿದುಕೊಂಡನು.
16 Akamwendea kando ya njia na kusema, “Njoo, tafadhari uniruhusu kulala nawe” - kwani hakujua kwamba alikuwa ni mkwewe - naye akasema, “Utanipa nini ili ulale nami?
ಮಾರ್ಗದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು, “ನನ್ನನ್ನು ನಿನ್ನ ಬಳಿಗೆ ಬರಗೊಡಿಸು,” ಎಂದನು. ಏಕೆಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ. ಅವಳು, “ನೀನು ನನ್ನ ಬಳಿಗೆ ಬಂದರೆ, ನನಗೆ ಏನು ಕೊಡುವೆ?” ಎಂದಳು.
17 Akasema, “Nitakuletea mwana mbuzu wa kundi.” Akasema, “Je utanipa rehani hata utakapo leta?”
ಅವನು, “ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿಸುತ್ತೇನೆ,” ಎಂದನು. ಅವಳು, “ನೀನು ಅದನ್ನು ಕಳುಹಿಸುವವರೆಗೆ ಈಡು ಕೊಡುವೆಯೋ?” ಎಂದಳು.
18 Akasema, “Nikupe rehani gani?” Naye akasema, “Mhuri wako na mshipi, na fimbo iliyo mkononi mwako.” Akampa na kulala naye. Akawa mjamzito.
ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
19 Akaamka na kuondoka. Akavua ushungi wake na kuvaa vazi la ujane wake.
ತರುವಾಯ ಅವಳು ಎದ್ದು ಹೋಗಿ, ಮುಸುಕನ್ನು ತೆಗೆದಿಟ್ಟು, ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
20 Yuda akatuma mwana mbuzi kutoka kundini kwa mkono wa rafiki yake Mwadulami ili aichukue rehani kutoka katika mkono wa mwanamke, lakini hakumwona.
ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
21 Kisha Mwadulami akauliza watu wa sehemu hiyo,”Yupo wapi kahaba aliyekuwa Enaimu kando ya njia?” Wakasema, hapajawai tokea kahaba hapa.”
ಅದುಲ್ಲಾಮ್ಯನು ಆಕೆಯ ಊರಿನವರನ್ನು, “ಏನಯಿಮಿನ ಬಹಿರಂಗ ಮಾರ್ಗದ ಬಳಿಯಲ್ಲಿದ್ದ ವೇಶ್ಯೆ ಎಲ್ಲಿ?” ಎಂದು ಕೇಳಿದಾಗ. ಅವರು, “ಈ ಸ್ಥಳದಲ್ಲಿ ಯಾವ ವೇಶ್ಯೆಯೂ ಇರಲಿಲ್ಲ,” ಎಂದರು.
22 Akarudi kwa Yuda na kusema, “Sikumwona. Pia watu wa eneo hilo wamesema, 'Hajawai kuwapo kahaba hapa.”
ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು.
23 Yuda akasema, “Mwache akae na vitu, tusije tukaaibika. Hakika, nimemletea mwanambuzi, lakini hukumwona.”
ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.
24 Ikawa baada ya miezi mitatu Yuda akaambiwa, “Tamari mkweo amefanya ukahaba, na kwa hakika, yeye ni mjamzito.” Yuda akasema, “Mleteni hapa ili achomwe.”
ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.
25 Alipoletwa nje, alipeleka ujumbe kwa mkwewe, “Mimi ni mjamzito kwa mtu mwenye vitu hivi.” Akasema, “Tambua tafadhari, mhuri huu na mshipi na fimbo ni vya nani.”
ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.
26 Yuda akavitambua na kusema, “Yeye ni mwenye haki kuliko mimi, kwani sikumpa Shela, mwanangu awe mme wake.” Hakulala naye tena.
ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.
27 Muda wake wa kujifungua ukafika, tazama, mapacha walikuwa tumboni mwake.
ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು.
28 Ikawa alipokuwa akijifungua mmoja akatoa mkono nje, na mkunga akachukua kitambaa cha rangi ya zambarau na kukifunga katika mkono wake na kusema, “Huyu ametoka wa kwanza.”
ಆಕೆಯು ಹೆರುವಾಗ ಒಂದು ಮಗುವು ತನ್ನ ಕೈಚಾಚಿತು. ಆಗ ಸೂಲಗಿತ್ತಿಯು, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.
29 Ikawa aliporudisha mkono wake, tazama, ndugu yake akatoka kwanza. Mkunga akasema, “Umetokaje” Na akaitwa Peresi.
ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು, “ನೀನು ಕಿತ್ತುಕೊಂಡು ಹೊರಗೆ ಬಂದೆಯಾ?” ಎಂದಳು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು.
30 Kisha ndugu yake akatoka, akiwa na utepe wa zambarau juu ya mkono wake, naye akaitwa Zera.
ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.