< Mwanzo 41 >
1 Ikawa mwishoni mwa miaka miwili mizima Farao akaota ndoto.
೧ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.
2 Tazama, alikuwa amesimama kando ya Nile. Tazama, ng'ombe saba wakatoka katika mto Nile, wakupendeza na wanene, na wakajilisha katika nyasi.
೨ಅಷ್ಟರಲ್ಲಿ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಆ ನೈಲ್ ನದಿಯೊಳಗಿಂದ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
3 Tazama, ng'ombe wengine saba wakatoka katika Nile baada yao, wasiopendeza na wamekondeana. Wakasimama ukingoni mwa mto kando ya wale ng'ombe wengine.
೩ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು.
4 Kisha wale ng'ombe wasiopendeza na waliokonda wakawala wale waliokuwa wanapendeza na walionenepa.
೪ಅವಲಕ್ಷಣವಾದ ಈ ಬಡ ಏಳು ಆಕಳುಗಳು ಲಕ್ಷಣವಾದ ಆ ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
5 Kisha Farao akaamka. Kisha akalala na kuota mara ya pili. Tazama, masuke saba ya nafaka yalichipua katika mche mmoja, mema na mazuri.
೫ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.
6 Tazama, masuke saba, membamba na yaliyokaushwa na upepo wa mashariki, yakachipua baada yake.
೬ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
7 Masuke membamba yakayameza yale masuke saba mema yote. Farao akaamka, na, tazama, ilikuwa ni ndoto tu.
೭ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.
8 Ikawa wakati wa asubuhi roho yake ikafadhaika. Akatuma na kuwaita waganga na wenye hekima wote wa Misri. Farao akawasimlia ndoto zake, lakini hakuna aliyeweza kumtafsiria Farao.
೮ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
9 Kisha mkuu wa wanyweshaji akamwambia Farao, “Leo ninayafikiri makosa yangu.
೯ಹೀಗಿರುವಾಗ ಪಾನದಾಯಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಅರಸನೇ, ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ.
10 Farao aliwakasirikia watumishi wake, na kutuweka kifungoni katika nyumba ya kapteni wa walinzi, mkuu wa waokaji na mimi.
೧೦ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,
11 Tuliota ndoto usiku huo mmoja, yeye na mimi. Kila mmoja aliota kwa kadili ya tafsiri yake.
೧೧ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.
12 Pamoja nasi kulikuwa na kijana Mwebrania, mtumishi wa kapteni wa walinzi. Tulimwambia na akatutafsiria ndoto zetu. Alitutafsiria kila mmoja wetu kulingana na ndoto yake.
೧೨ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
13 Ikawa kama alivyotutafsiria, ndivyo ilivyokuwa. Farao alinirudisha katika nafasi yangu, lakini akamtundika yule mwingine.”
೧೩ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು.
14 Ndipo Farao alipotuma na kumwita Yusufu. Kwa haraka wakamtoa gerezani. Akajinyoa mwenyewe, akabadili mavazi yake, na akaingia kwa Farao.
೧೪ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.
15 Farao akamwambia Yusufu, “Nimeoda ndoto, lakini hakuna wa kuitafsiri. Lakini nimesikia kuhusu wewe, kwamba unaposikia ndoto unaweza kuitafsiri.”
೧೫ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
16 Yusufu akamjibu Farao, kusema, “Siyo katika mimi. Mungu atamjibu Farao kwa uhakika.”
೧೬ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.
17 Farao akamwambia Yusufu, “Katika ndoto yangu, tazama, nilisimama katika ukingo wa Nile.
೧೭ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನೊಳಗೆ ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.”
18 Tazama, ng'ombe saba wakatoka ndani ya Nile, wanene na wakuvutia, nao wakajilisha katika nyasi.
೧೮ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
19 Tazama, ng'ombe wengine saba wakapanda baada yao, dhaifu, wabaya, na wembaba. Sijawao kuona wabaya kama hao katika nchi yote ya Misri.
೧೯ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಆಕಳುಗಳು ಏರಿ ಬಂದವು. ಇಂಥ ಆಕಳುಗಳನ್ನು ನಾನು ಐಗುಪ್ತದೇಶದಲ್ಲಿ ಎಲ್ಲಿಯೂ ನೋಡಿರಲಿಲ್ಲ.
20 Wale ng'ombe wembamba na wabaya wakawala wale ng'ombe saba na wanene.
೨೦ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.
21 Walipokuwa wamemaliza kuwala wote, haikujulikana kama walikuwa wamewala, kwani walibaki wabaya kama mwanzo. Kisha nikaamka.
೨೧ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಿಬರಲಿಲ್ಲ. ಅವು ಮೊದಲಿದ್ದಂತೆ ಬಡವಾಗಿಯೇ ಇದ್ದವು. ಆಗ ನನಗೆ ಎಚ್ಚರವಾಯಿತು.
22 Niliona katika ndoto yangu, na tazama, masuke saba yakatoka katika bua moja, jema na limejaa.
೨೨“ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಏಳು ಒಳ್ಳೆ ಪುಷ್ಟಿಯುಳ್ಳ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿ ಬಂದವು.
23 Tazama, masuke saba zaidi, yaliyonyauka, membamba na yamekaushwa na upepo wa mashariki, yakachipua baada yake.
೨೩ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.
24 Yale masuke membamba yakayameza masuke saba mema. Niliwaambia waganga ndoto hizi, lakini hakuna aliyeweza kunielezea.”
೨೪ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
25 Yusufu akamwambia Farao, “Ndoto za Farao ni moja. Mungu amemwambia Farao kuhusu jambo analokwenda kulifanya.
೨೫ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.
26 Wale ng'ombe saba wema ni miaka saba, na masuke saba mema ni miaka saba. Ndoto ni moja.
೨೬ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.
27 Na wale ng'ombe saba wembamba na wabaya waliokuja baadaye ni miaka saba, na pia masuke saba membamba yaliyokaushwa na upepo wa mashariki itakuwa miaka saba ya njaa.
೨೭ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
28 Hilo ni jambo nililomwambia Farao. Mungu amemfunulia Farao jambo analokwenda kulifanya.
೨೮ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.
29 Tazama, miaka saba yenye utele mwingi inakuja katika nchi yote ya Misri.
೨೯ಐಗುಪ್ತ ದೇಶದಲ್ಲೆಲ್ಲಾ ಬಹು ವಿಶೇಷವಾದ ಏಳು ಸುಭಿಕ್ಷ ವರ್ಷಗಳೂ ಬರುವವು.
30 Na miaka saba ya njaa itakuja baada yake, na utele wote katika nchi ya Misri utasahaulika, na njaa itaiaribu nchi.
೩೦ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.
31 Utele hautakumbukwa katika nchi kwa sababu ya njaa itakayofuata, kwa kuwa itakuwa kali sana.
೩೧ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
32 Kwamb ndoto ilijirudia kwa Farao sababu ni kwamba jambo hili limeanzishwa na Mungu, na Mungu atalitimiza hivi karibuni.
೩೨ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
33 Basi Farao atafute mtu mwenye maharifa na busara, na kumweka juu ya nchi ya Misri.
೩೩“ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
34 Farao na afanye hivi: achague wasimamizi juu ya nchi. Na wachukue sehemu ya tano ya mazao ya Misri katika miaka saba ya shibe.
೩೪ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.
35 Na wakusanye chakula chote cha hii miaka myema ijayo na kuitunza nafaka chini ya mamlaka ya Farao, kwa chakula kutumika katika miji. Wakiifadhi.
೩೫ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.
36 Chakula kitakuwa matumizi ya nchi kwa miaka saba ya njaa itakayokuwa katika nchi ya Misri. Kwa njia hii nchi haitaaribiwa na njaa.”
೩೬ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.
37 Ushauri huu ukawa mwema machoni pa Farao na machoni pa watumishi wake wote.
೩೭ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.
38 Farao akawambia watumishi wake, “Je tunaweza kumpata mtu kama huyu, ambaye ndani yake kuna Roho wa Mungu?”
೩೮ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
39 Hivyo Farao akamwambia Yusufu, “Kwa vile Mungu amekuonesha yote haya, hakuna mtu mwenye ufahamu na busara kama wewe.
೩೯ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.
40 Utakuwa juu ya nyumba yangu, watu wangu watatawaliwa kwa kadili ya neno lako. Katika kiti cha enzi peke yake mimi nitakuwa mkuu kuliko wewe.”
೪೦ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
41 Farao akamwambia Yusufu, “Tazama, nimekuweka juu ya nchi yote ya Misri.”
೪೧ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,
42 Farao akavua pete yake ya mhuri kutoka katika mkono wake na kuiweka katika mkono wa Yusufu. Akamvika kwa mavazi ya kitani safi, na kuweka mkufu wa dhahabu shingoni mwake.
೪೨ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
43 Akataka apandishwe katika kibandawazi cha pili alichokuwa nacho. Watu wakapiga kelele mbele yake, “Pigeni magoti.” Farao akamweka juu ya nchi yote ya Misri.
೪೩ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
44 Farao akamwambia Yusufu, “Mimi ni Farao, mbali na wewe, hakuna mtu atakayeinua mkono wake au mguu wake katika nchi ya Misri.”
೪೪ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
45 Farao akamwita Yusufu jina la Zafenathi Panea.” Akampa Asenathi, binti wa Potifera kuhani wa On, kuwa mke wake. Yusufu akaenda juu ya nchi yote ya Misri.
೪೫ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.
46 Yusufu alikuwa na umri wa miaka thelathini aliposimama mbele ya Farao, mfalme wa Misri. Yusufu akatoka mbele ya Farao, na kwenda katika nchi yote ya Misri.
೪೬ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
47 Katika miaka saba ya shibe nchi ilipozaa kwa wingi.
೪೭ಸುಭಿಕ್ಷವಾದ ಏಳು ವರ್ಷಗಳಲ್ಲಿ ಭೂಮಿಯು ಹೇರಳವಾಗಿ ಫಲಕೊಟ್ಟಿತು.
48 Akakusanya chakula chote cha miaka saba iliyokuwako katika nchi ya Misri na kukiweka chakula katika miji. Akaweka katika kila mji chakula cha mashamba yaliyokizunguka.
೪೮ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.
49 Yusufu akahifadhi nafaka kama mchanga wa bahari, kingi kiasi kwamba akaacha kuhesabu, kwa sababu kilikuwa hakihesabiki.
೪೯ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
50 Kabla miaka ya njaa kuingia Yusufu akapata wana wawili, ambao Asenathi, binti wa Potifera kuhani wa On, alimzalia.
೫೦ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
51 Yusufu akamwita mzaliwa wake wa kwanza Manase, kwani alisema, “Mungu amenisahaurisha shida zangu zote na nyumba yote ya baba yangu.”
೫೧ಚೊಚ್ಚಲು ಮಗನು ಹುಟ್ಟಿದಾಗ ಯೋಸೇಫನು, “ನಾನು ನನ್ನ ಎಲ್ಲಾ ಕಷ್ಟವನ್ನು, ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ಮಾಡಿದನು” ಎಂದು ಹೇಳಿ ಅವನಿಗೆ “ಮನಸ್ಸೆ” ಎಂದು ಹೆಸರಿಟ್ಟನು.
52 Akamwita mwanawe wa pili Efraimu, kwani alisema, Mungu amenipa uzao katika nchi ya mateso yangu.”
೫೨ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು.
53 Miaka saba ya shibe iliyokuwa katika nchi ya Misri ikafika mwisho.
೫೩ಐಗುಪ್ತ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ
54 Miaka saba ya njaa ikaanza, kama alivyokuwa amesema Yusufu. Kulikuwa na njaa katika nchi zote, lakini katika nchi yote ya Misri kulikuwa na chakula.
೫೪ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
55 Nchi yote ya Misri ilipokuwa na njaa, watu wakapiga kelele kwa Farao kwa ajili ya chakula. Farao akawambia Wamisri wote, “Nendeni kwa Yusufu na mfanye atakavyosema.”
೫೫ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
56 Njaa ilikuwa juu ya uso wote wa nchi. Yusufu akafungua ghala zote na kuuza chakula kwa Wamisri. Njaa ilikuwa kali sana katika nchi ya Misri.
೫೬ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
57 Dunia yote ikaja Misri kununua nafaka kutoka kwa Yusufu, kwani njaa ilikuwa kali katika dunia yote.
೫೭ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.