< Wahebrania 9 >
1 Sasa hata agano la kwanza lilikuwa na sehemu ya ibada hapa duniani na taratibu za ibada.
೧ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.
2 Kwani katika hema kulikuwa na chumba kimeandaliwa, chumba cha nje, paliitwa mahali patakatifu. Katika eneo hili palikuwa na kinara cha taa, meza na mikate ya wonyesho.
೨ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.
3 Na nyuma ya pazia la pili kulikuwa na chumba kingine, paliitwa mahali patakatifu zaidi.
೩ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.
4 Mlikuwemo madhabahu ya dhahabu kwa kuvukizia uvumba. Pia mlikuwemo sanduku la agano, ambalo lilikuwa limejengwa kwa dhahabu tupu. Ndani yake kulikuwa na bakuli la dhahabu lenye manna, fimbo ya Haruni iliyoota majani, na zile mbao za mawe za agano.
೪ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.
5 Juu ya sanduku la agano maumbo ya maserafi wa utukufu wafunika mabawa yao mbele ya kiti cha upatanisho, ambacho kwa sasa hatuwezi kuelezea kwa kina.
೫ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.
6 Baada ya vitu hivi kuwa vimekwisha andaliwa, Makuhani kawaida huingia chumba cha nje cha hema kutoa huduma zao.
೬ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.
7 Lakini kuhani mkuu huingia kile chumba cha pili pekee mara moja kila mwaka, na pasipo kuacha kutoa dhabihu kwa ajili yake binafsi, na kwa dhambi za watu walizozitenda pasipo kukusudia.
೭ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
8 Roho Mtakatifu anashuhudia kwamba, njia ya mahali patakatifu zaidi bado haijafunuliwa kwa vile ile hema la kwanza bado linasimama.
೮ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
9 Hili ni kielelezo cha muda huu wa sasa. Vyote zawadi na dhabihu ambavyo vinatolewa sasa haviwezi kukamilisha dhamiri ya anayeabudu.
೯ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.
10 Ni vyakula na vinywaji pekee vimeunganishwa katika namna ya taratibu za ibada ya kujiosha. Vyote hivi vilikuwa taratibu za kimwili vilivyokuwa vimeandaliwa hadi ije amri mpya itakayowekwa mahali pake.
೧೦ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
11 Kristo alikuja kama kuhani mkuu wa mambo mazuri ambayo yamekuja. kupitia ukuu na ukamilifu wa hema kuu ambayo haikufanywa na mikono ya watu, ambayo si wa ulimwengu huu ulioumbwa.
೧೧ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
12 Ilikuwa si kwa damu ya mbuzi na ndama, bali kwa damu yake mwenyewe kwamba Kristo aliingia mahali patakatifu zaidi mara moja kwa kila mmoja na kutuhakikishia ukombozi wetu wa milele. (aiōnios )
೧೨ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. (aiōnios )
13 Kama kwa damu ya mbuzi na mafahari na kunyunyiziwa kwa majivu ya ndama katika hao wasiosafi walitengwa kwa Mungu na kufanya miili yao safi,
೧೩ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
14 Je si zaidi sana damu ya Kristo ambaye kupitia Roho wa milele alijitoa mwenyewe bila mawaa kwa Mungu, kuosha dhamiri zetu kutoka matendo mafu kumtumikia Mungu aliye hai? (aiōnios )
೧೪ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? (aiōnios )
15 Kwa sababu hiyo, Kristo ni mjumbe wa agano jipya. Hii ndiyo sababu mauti imewaacha huru wote walio wa agano la kwanza kutoka katika hatia ya dhambi zao, ili kwamba wote walioitwa na Mungu waweze kupokea ahadi ya urithi wao wa milele. (aiōnios )
೧೫ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. (aiōnios )
16 Kama kuna agano linadumu, ni lazima kuthibitishwa kwa kifo cha mtu yule aliyelifanya.
೧೬ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
17 Kwani agano linakuwa na nguvu mahali kunatokea mauti, kwa sababu hakuna nguvu wakati mwenye kulifanya akiwa anaishi.
೧೭ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ.
18 Hivyo hata si lile agano la kwanza lilikuwa limewekwa pasipo damu.
೧೮ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.
19 Wakati Musa alipokuwa ametoa kila agizo la sheria kwa watu wote, alichukua damu ya ng'ombe na mbuzi, pamoja na maji, kitambaa chekundu, na hisopo, na kuwanyunyizia gombo lenyewe na watu wote.
೧೯ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
20 Kisha alisema, “Hii ni damu ya agano ambayo Mungu amewapa amri kwenu”.
೨೦“ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು.
21 Katika hali ileile, aliinyunyiza damu juu ya hema na vyombo vyote vilivyotumiwa kwa huduma ya ukuhani.
೨೧ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.
22 Na kulingana na sheria, karibu kila kitu kinatakaswa kwa damu. Pasipo kumwaga damu hakuna msamaha.
೨೨ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
23 Kwa hiyo ilikuwa lazima kwamba nakala za vitu vya mbinguni sharti visafishwe kwa hii dhabihu ya wanyama. Hata hivyo, vitu vya mbinguni vyenyewe vilipaswa kusafishwa kwa dhabihu iliyo bora zaidi.
೨೩ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
24 Kwani Kristo hakuingia mahali patakatifu sana palipofanywa na mikono, ambayo ni nakala ya kitu halisi. Badala yake aliingia mbingu yenyewe, mahali ambapo sasa yuko mbele za uso wa Mungu kwa ajili yetu.
೨೪ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
25 Hakuingia kule kwa ajili ya kujitoa sadaka kwa ajili yake mara kwa mara, kama afanyavyo kuhani mkuu, ambaye huingia mahali patakatifu zaidi mwaka baada ya mwaka pamoja na damu ya mwingine,
೨೫ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.
26 kama hiyo ilikuwa kweli, basi ingekuwa lazima kwake kuteswa mara nyingi zaidi tangu mwanzo wa ulimwengu. Lakini sasa ni mara moja hadi mwisho wa miaka aliyojifunua kuiondoa dhambi kwa dhabihu yake mwenyewe. (aiōn )
೨೬ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. (aiōn )
27 Kama ilivyo kwa kila mtu kufa mara moja, na baada ya hiyo huja hukumu,
೨೭ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
28 ndivyo hivyo Kristo naye ambaye alitolewa mara moja kuziondoa dhambi za wengi, atatokea mara ya pili, si kwa kusudi la kushughulikia dhambi, bali kwa ukombozi kwa wale wamgojeao kwa saburi.
೨೮ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.