< Ayubu 3 >
1 Baada ya hayo, Ayubu akafunua kinywa chake na kuilani siku aliyozaliwa.
೧ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,
3 “Na ipotelee mbali siku niliyozaliwa mimi, usiku uliosema, 'Mimba ya mtoto wa kiume imetungwa.'
೩“ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ
4 Siku hiyo na iwe giza; Mungu toka juu asiifikilie, wala mwanga usiiangazie.
೪ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
5 Ishikwe na giza na giza la mauti liwe lake. Wingu na likae juu yake; kila kitu kiifanyacho siku kuwa giza kweli na kiitishe.
೫ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.
6 Usiku huo, na ukamatwe na giza tororo. Usihesabiwe miongoni mwa siku za mwaka; na usiwekwe katika hesabu ya miezi.
೬ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
7 Tazama, usiku huo na uwe tasa; na sauti ya shangwe isiwe ndani yake.
೭ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.
8 Na wailani siku hiyo, hao wafahamuo namna ya kumuamsha lewiathani.
೮ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.
9 Nyota za mapambazuko yake zitiwe giza. Siku hiyo iutafute mwanga, lakini isiupate; wala makope ya mapambazuko isiyaone,
೯ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
10 kwasababu haikuifunga milango ya tumbo la mama yangu, na kwasababu haikunifichia taabu machoni pangu.
೧೦ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.
11 Kwanini si-kufa wakati lipotokeza katika tumbo la uzazi? Kwanini sikuitoa roho yangu hapo mama aliponizaa?
೧೧ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
12 kwanini magoti yake yalinipokea? Kwanini maziwa yake yanipokee hata ninyonye?
೧೨ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?
13 Kwa sasa ningelikuwa nimelala chini kimya kimya. Ningelala usingizi na kupata pumziko
೧೩ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.
14 pamoja na wafalme na washauri wa dunia, ambao walijijengea makaburi ambayo sasa ni magofu.
೧೪ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.
15 Au Ningelikuwa nimelala pamoja na wakuu wenye dhahabu, waliozijaza nyumba zao fedha.
೧೫ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.
16 Au pengine ningekuwa sijazaliwa, kama watoto wachanga wasio uona mwanga kabisa.
೧೬ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
17 Huko waovu huacha kusumbua; huko waliochoka hupumzika.
೧೭ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.
18 Huko wafungwa kwa pamoja hupata amani; hawaisikii sauti ya msimamizi wa watumwa.
೧೮ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.
19 Wote wadogo na watu maarufu wako huko; mtumishi yuko huru kwa bwana wake huko.
೧೯ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.
20 Kwa nini yeye aliye mashakani kupewa mwanga? Kwa nini hao wenye uchungu moyoni kupewa uhai,
೨೦ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
21 ambao hutamani mauti lakini hawapati; ambao huyachimbulia mauti zaidi ya kutafuta hazina iliyofichika?
೨೧ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
22 Kwa nini kupewa mwanga ambao hushangilia mno na kufurahi walionapo kaburi?
೨೨ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.
23 Kwanini kupewa mwanga mtu ambaye njia zake zimefichika, mtu ambaye Mungu amemzungushia uwa?
೨೩ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?
24 Kwa kuwa kushusha kwangu pumzi kwatokea badala ya kula; kuugua kwangu kumemiminika kama maji.
೨೪ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.
25 Maana jambo lile niliogopalo limenipata; nalo linitialo hofu limenijilia.
೨೫ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.
26 Mimi sioni raha, sipati utulivu, na sipati pumziko; badala yake huja taabu.”
೨೬ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”