< Waamuzi 18 >
1 Siku hizo hapakuwa na mfalme huko Israeli. Kabila la Wadani lilikuwa linatafuta makazi ya kuishi, kwa maana mpaka siku hiyo hawakupokea urithi wowote kutoka miongoni mwa makabila ya Israeli.
೧ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.
2 Watu wa Dani walituma watu watano kutoka kwa idadi yote ya kabila lao, wanaume wenye ujasiri kutoka Sora na kutoka Eshtaoi, ili kukagua ardhi kwa miguu, na kuiangalia. Wakawaambia, “Nendeni mkaangalie nchi.' Wakafika nchi ya mlima wa Efraimu, kwa nyumba ya Mika wakalala huko.
೨ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.
3 Walipokuwa karibu na nyumba ya Mika, walitambua maneno ya Mlawi. Basi wakamsimama na kumwuliza, “Nani alikuleta hapa? Unafanya nini hapa? Kwa nini uko hapa?”
೩ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,
4 Akawaambia, “Hivi ndivyo Mika amefanya kwa ajili yangu Yeye aliniajiri mimi kuwa kahani wake.”
೪ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.
5 Wakamwambia, “Tafadhali tafuta ushauri kwa Mungu, ili tuweze kujua kama safari tunayoendea itafanikiwa.”
೫ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
6 Kuhani huyo akawaambia, “Nenda kwa amani. Bwana atakuongoza katika njia unayoiendea.”
೬ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.
7 Kisha wale watu watano wakaondoka na wakafika Laishia, na waliona watu waliokuwa pale waliishi salama- vivyo hivyo Wasidoni waliishi bila kusumbuliwa na kwa usalama. Hapakuwa na mtu aliyewashinda katika nchi hiyo, au aliyewasumbua kwa namna yoyote. Waliishi mbali na Wasidoni, na hawakuwa na ushirikiano na mtu yeyote.
೭ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
8 Walirudi kwa kabila lao huko Zora na Eshtaol. Ndugu zao waliwauliza, 'Mna habari gani?'
೮ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು
9 Wakasema, “Njoo! Hebu tuwashambulie! Tumeona ardhi na ni nzuri sana. Je hamfanyi kitu? Msiwe wavivu kushambulia na kuchukua ardhi.
೯ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.
10 Mnapoenda, mtakuta watu wanaofikiri wapo salama, na nchi ni pana! Mungu amewapa ninyi-mahali ambako hapajapungukiwa kitu chochote duniani. '
೧೦ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.
11 Watu mia sita wa kabila la Dani, wenye silaha za vita, waliondoka kutoka Sora na Eshtaoli.
೧೧ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,
12 Wakasafiri, wakapanga Kiriath-yearimu, huko Yuda. Ndio maana watu walipaita mahali pale Mahane Dani hata leo; ni magharibi ya Kiriath yearimu.
೧೨ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.
13 Wakaondoka huko na kwenda nchi ya mlima wa Efraimu, wakafika nyumbani kwa Mika.
೧೩ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.
14 Kisha watu watano waliokuwa wamekwenda kutazama nchi ya Laisha waliwaambia jamaa zao, “Je, mnajua kwamba katika nyumba hizi kuna efodi, miungu ya kaya, sanamu zilizochongwa, na sanamu za chuma? Amua sasa utakachofanya.”
೧೪ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?
15 Basi wakarudi huko, wakafika nyumbani mwa Mlawi, nyumbani mwa Mika; wakamsalimu.
೧೫ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.
16 Wana Daniani mia sita, wenye silaha za vita, walisimama kwenye maingilio ya lango.
೧೬ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
17 Wale watu watano waliokuwa wamekwenda kutembelea nchi walikwenda huko na wakachukua sanamu zilizochongwa, efodi, na miungu ya nyumba, na sanamu ya chuma, wakati kuhani alipokuwa amesimama kwenye maingilio ya lango na wanaume mia sita wenye silaha za vita.
೧೭ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.
18 Walipokuwa wakiingia nyumbani kwa Mika na kuchukua sanamu zilizochongwa, efodi, miungu ya nyumba, na sanamu za chuma, kuhani akasema, “mnafanya nini?”
೧೮ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.
19 Wakamwambia, “Tulia! Weka mkono wako kwenye kinywa chako na uje nasi, na uwe kwetu baba na kuhani. Je, ni bora kuwa wewe kuhani kwa ajili ya nyumba ya mtu mmoja, au kuhani kwa kabila na jamaa katika Israeli?”
೧೯ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.
20 Moyo wa kuhani ulifurahi. Akachukua efodi, miungu ya nyumba, na sanamu ya kuchongwa, akaenda pamoja na hao watu.
೨೦ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
21 Basi wakageuka wakaenda. Wameweka watoto wadogo mbele yao wenyewe, pamoja na ng'ombe na mali zao.
೨೧ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.
22 Walipokuwa umbali mzuri kutoka kwa nyumba ya Mika, watu waliokuwa ndani ya nyumba iliyo karibu na nyumba ya Mika waliitwa, nao wakawafikia Wadani.
೨೨ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
23 Waliwapigia kelele Wadani, nao wakageuka, wakamwambia Mika, “Kwa nini mmekuja pamoja?
೨೩ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
24 Akasema, “ninyi mmeiba miungu niliyoifanya, mmemchukua kuhani wangu, na mnaondoka. Je, nina nini tena? Unawezaje kuniuliza, 'Ni nini kinachokusumbua?'”
೨೪ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
25 'Watu wa Dani wakamwambia,” Usiruhusu tusikie chochote unachosema, au baadhi ya watu wenye hasira sana watawapiga, wewe na familia yako mtauawa.”
೨೫ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.
26 Ndipo watu wa Dani wakaenda zao. Mika alipoona kwamba walikuwa na nguvu sana juu yake, akageuka na kurudi nyumbani kwake.
೨೬ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.
27 Watu wa Dani walichukua kile alichokifanya Mika, pamoja na kuhani wake, na wakafika Laisha, kwa watu waliokuwa hawasumbuliwi na wenye usalama na salama wakawaua kwa upanga na kuuchoma mji huo.
೨೭ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
28 Hapakuwa na mtu wa kuwaokoa kwa sababu palikuwa na umbali mrefu kutoka Sidoni, na hawakuwa na uhusiano na mtu yeyote. Palikuwa katika bonde lililo karibu na Beth Rehobu. Wadani wakaujenga mji na kuishi huko.
೨೮ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.
29 Wakauita jina lake Dani, jina la baba zao Dani, ambaye alikuwa mmoja wa wana wa Israeli. Lakini jina la mji hapo mwanzo ulikuwa Laisha.
೨೯ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.
30 Watu wa Dani walijenga sanamu za kuchonga wenyewe. Naye Yonathani, mwana wa Gershomu, mwana wa Musa, yeye na wanawe walikuwa makuhani wa kabila la Wadani mpaka siku ya uhamisho wa nchi.
೩೦ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
31 Basi wakaiabudu sanamu ya kuchonga ya Mika aliyoifanya wakati wa nyumba ya Mungu huko Shilo.
೩೧ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.