< Marko 9 >

1 Na alisema kwao, “Hakika nasema kwenu, baadhi yenu kuna watu waliosimama hapa hawataonja mauti kabla ya kuuona ufalme wa Mungu ukija kwa nguvu.”
ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
2 Na baada ya siku sita, Yesu aliwachukua Petro, Yakobo na Yohana pamoja naye mlimani, pekee yao. Ndipo alianza kubadilika mbele yao.
ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
3 Mavazi yake yakaanza kung'aa sana, meupe zaidi, meupe kuliko mng'arishaji yeyote duniani.
ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
4 Ndipo Eliya pamoja na Musa walitokea mbele yao, na walikuwa wakiongea na Yesu.
ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
5 Petro alijibu akamwambia Yesu, “Mwalimu, ni vyema sisi kuwa hapa, na tujenge vibanda vitatu, kimoja kwa ajili yako, kimoja kwa ajili Musa na kingine kwa ajili ya Eliya.”
ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
6 (Kwa kuwa hakujua nini cha kusema, waliogopa sana.)
ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
7 Wingu lilitokea na kuwafunika. Ndipo sauti ikatoka mawinguni ikisema, “Huyu ni mwanangu mpendwa. Msikieni yeye.”
ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
8 Ghafla, walipokuwa wakitazama, hawakumuona yeyote pamoja nao, isipokuwa Yesu tu.
ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
9 Walipokuwa wanateremka kutoka mlimani, aliwaamuru kutokumwambia mtu yeyote yale yote waliyoyaona, mpaka Mwana wa Adamu atakapofufuka kutoka kwa wafu.
ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
10 Ndipo waliyatunza mambo wao wenyewe. Lakini walijadiliana wao kwa wao ni nini maana yake “kufufuliwa kutoka kwa wafu”
೧೦ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
11 Walimwuliza Yesu,”Kwa nini waandishi husema lazima Eliya aje kwanza?”
೧೧ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
12 Akawaambia, “hakika Eliya atakuja kwanza kuokoa vitu vyote. Kwa nini imeandikwa Mwana wa Adamu lazima apate mateso mengi na achukiwe?
೧೨ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
13 Lakini nasema kwenu Eliya alikwisha kuja, na walimfanya kama walivyopenda, kama vile maandiko yasemavyo kuhusu yeye.”
೧೩ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
14 Na waliporudi kwa wanafunzi, waliona kundi kubwa limewazunguka na Masadukayo walikuwa wanabishana nao.
೧೪ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
15 Na mara walipomwona, kundi lote lilishangaa na kumkimbilia kumsalimia.
೧೫ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
16 Aliwauliza wanafunzi wake, “Mnabishana nao juu ya nini?”
೧೬ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
17 Mmoja wao katika kundi alimjibu, “Mwalimu, nilimleta mwanangu kwako; ana roho chafu ambayo humfanya asiweze kuongea,
೧೭ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
18 na humsababishia kutetemeka na kumwangusha chini, na kutoka povu mdomoni na kusaga meno na kukakamaa. Niliwaomba wanafunzi wako kumtoa pepo, lakini hawakuweza.
೧೮ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
19 Aliwajibu, “Kizazi kisichoamini, nitakaa nanyi kwa muda gani? Nitachukuliana nanyi hadi lini? Mleteni kwangu.”
೧೯ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
20 Walimleta mtoto wake. Roho mchafu alipomwona Yesu, ghafla ilimtia katika kutetemeka. Mvulana alianguka chini na kutoa povu mdomoni.
೨೦ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
21 Yesu alimwuliza baba yake, “Amekuwa katika hali hii kwa muda gani?” Baba alisema, “Tangu utoto.
೨೧ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
22 Mara nyingine huanguka katika moto au kwenye maji, na kujaribu kumwangamiza. Kama unaweza kufanya chochote tuhurumie na utusaidie.”
೨೨ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
23 Yesu alimwambia, “Kama uko tayari? Kila kitu kinawezekana kwa yeyote aaminiye.”
೨೩ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
24 Ghafla baba wa mtoto alilia na kusema, “Naamini! Nisaidie kutokuamini kwangu.”
೨೪ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
25 Wakati Yesu alipoona kundi linakimbilia kwao, alimkemea roho mchafu na kusema, “wewe roho bubu na kiziwi, nakuamuru mwache, usiingie kwake tena.”
೨೫ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
26 Alilia kwa nguvu na kumhangaisha mtoto na roho alimtoka. Mtoto alionekana kama amekufa, Ndipo wengi walisema, “Amekufa,”
೨೬ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
27 Lakini Yesu alimchukua kwa mkono akamwinua, na mtoto alisimama.
೨೭ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
28 Wakati Yesu alipoingia ndani, wanafunzi wake walimwuliza faragha, “Kwa nini hatukuweza kumtoa?”
೨೮ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
29 Aliwaambia, “kwa namna hii hatoki isipokuwa kwa maombi.”
೨೯ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
30 Walitoka pale na kupitia Galilaya. Hakutaka mtu yeyote ajue walipo,
೩೦ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
31 kwa kuwa alikuwa anafundisha wanafunzi wake. Aliwaambia, “Mwana wa Adamu atafikishwa mikononi mwa watu, na watamuua. Atakapokuwa amekufa, baada ya siku tatu atafufuka tena.”
೩೧ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
32 Lakini hawakuelewa maelezo haya, na waliogopa kumwuliza.
೩೨ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
33 Ndipo walifika Karperinaumu. Wakati akiwa ndani ya nyumba aliwauliza, ''Mlikuwa mnajadili nini njiani”?
೩೩ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
34 Lakini walikuwa kimya. Kwani walikuwa wanabishana njiani kwamba nani alikuwa mkubwa zaidi.
೩೪ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
35 Alikaa chini akawaita kumi na wawili pamoja, na alisema nao, “Kama yeyote anataka kuwa wa kwanza, ni lazima awe wa mwisho na mtumishi wa wote.”
೩೫ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
36 Alimchukua mtoto mdogo akamweka katikati yao. Akamchukua katika mikono yake, akasema,
೩೬ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
37 “Yeyote ampokeaye mtoto kama huyu kwa jina langu, pia amenipokea mimi, na ikiwa mtu amenipokea, hanipokei mimi tu, lakini pia aliyenituma.”
೩೭“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
38 Yohana alimwambia, “Mwalimu tulimwona mtu anatoa pepo kwa jina lako na tukamzuia, kwa sababu hatufuati.”
೩೮ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
39 Lakini Yesu alisema, “Msimzuie, kwa kuwa hakuna atakayefanya kazi kubwa kwa jina langu na ndipo baadaye aseme neno baya lolote juu yangu.
೩೯ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
40 Yeyote asiyekuwa kinyume nasi yuko upande wetu.
೪೦ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
41 Yeyote atakayekupa kikombe cha maji ya kunywa kwa sababu uko na Kristo, kweli nawaambia, hatapoteza thawabu yake.
೪೧ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
42 Yeyote anayewakosesha hawa wadogo waniaminio mimi, ingekuwa vyema kwake kufungiwa jiwe la kusagia shingoni na kutupwa baharini.
೪೨ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
43 Kama mkono wako ukikukosesha ukate. Ni heri kuingia katika uzima bila mkono kuliko kuingia kwenye hukumu ukiwa na mikono yote. Katika moto “usiozimika”. (Geenna g1067)
೪೩ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
44 (Zingatia: Mstari hii, “Mahali ambapo funza hawafi na moto usiozimika.” haumo katika nakala za kale).
೪೪
45 Kama mguu wako ukikukosesha, ukate. Ni vyema kwako kuingia uzimani ukiwa kilema, kuliko kutupwa hukumuni na miguu miwili. (Geenna g1067)
೪೫ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
46 (Zingatia: Mstari huu, “Mahali ambapo funza hawafi na moto usioweza kuzimika” haumo kwenye nakala za kale).
೪೬
47 Kama jicho lako likikukosesha ling'oe. Ni vyema kwako kuingia katika Ufalme wa Mungu ukiwa na jicho moja, kuliko kuwa na macho mawili na kutupwa kuzimu. (Geenna g1067)
೪೭ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
48 Mahali palipo na funza wasiokufa, na moto usiozimika.
೪೮ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
49 Kwa kuwa kila mmoja atakolezwa na moto.
೪೯“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
50 Chumvi ni nzuri, kama chumvi ikipoteza ladha yake, utaifanyaje iwe na ladha yake tena? Muwe na chumvi miongoni mwenu wenyewe, na muwe na amani kwa kila mmoja.”
೫೦ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”

< Marko 9 >