< Mathayo 18 >
1 Muda huo huo wanafunzi wakaja kwa Yesu na kumwambia, “Ni nani aliye mkubwa katika ufalme wa mbinguni?”
೧ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
2 Yesu akamwita mtoto mdogo, akamweka katikati yao,
೨ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
3 na kusema, “Kweli nawaambieni, msipotubu na kuwa kama watoto wadogo hamtaweza kuingia katika ufalme wa Mungu.
೩ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
4 Hivyo yeyote ajishushaye kama mtoto mdogo, mtu kama huyo ni mkuu katika ufalme wa mbinguni.
೪ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
5 Na yeyote ampokeaye mtoto mdogo kwa jina langu anipokea mimi.
೫ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
6 Lakini yeyote asababishaye mmoja kati ya wadogo hawa wanaoniamini kuasi, itakuwa vizuri kwa mtu huyo jiwe kuu la kusagia likafungwa shingoni mwake, na kuzamishwa kilindini mwa bahari.
೬ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
7 Ole kwa dunia kwa sababu ya wakati wa kukwazwa! kwa kuwa haina budi kwa nyakati hizo kuja, lakini ole kwake kwa mtu yule nyakati hizo zitakuja kwa ajili yake!
೭“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
8 kama mkono wako au mguu wako ukikusababishia kukwazika, ukate na uutupe mbali na wewe. Ni vizuri zaidi kwako wewe kuingia kwenye uzima ukiwa bila mkono au kilema, kuliko kutupwa kwenye moto wa milele ukiwa na mikono yote au miguu yote. (aiōnios )
೮ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (aiōnios )
9 Kama jicho lako likikukwaza, uling`oe na ulitupe mbali na wewe. Ni vizuri zaidi kwako wewe uingie kwenye uzima na jicho moja, kuliko kutupwa kwenye moto wa milele ukiwa na macho yote. (Geenna )
೯ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
10 Tazameni kwamba msije mkamdharau mmoja wa wadogo hawa. Kwa maana nawambieni kuwa mbinguni kuna malaika wao siku zote wakiutazama uso wa Baba yangu aliye mbinguni.
೧೦ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
11 (Zingatia: Maneno yanayoonekana kama ya msitari wa 11, “Kwa kuwa Mwana wa Adamu alikuja kuokoa kile kilichokuwa kimepotea” hayakuonekana katika nakala bora za kale).
೧೧ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
12 Mnafikiri nini? Ikiwa mtu ana kondoo mia moja, na mmoja wao akapotea, je hatawaacha tisini na tisa ya mlimani na kwenda kumtafuta mmoja aliyepotea?
೧೨“ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
13 Na akiisha kumpata, kweli nawaambieni, anamfurahia kuliko wale tisini na tisa wasiopotea.
೧೩ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
14 Vivyo hivyo, siyo mapenzi ya Baba yenu wa mbinguni kuwa mmoja wa wadogo hawa aangamie.
೧೪ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
15 Kama ndugu yako akikukosea, nenda, kamwonyeshe dosari iliyopo kati yako na yeye akiwa pekee yake. Kama akikusikiliza, utakuwa umemrejesha ndugu yako.
೧೫“ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
16 Lakini kama hatakusikiliza, mchukue ndugu mmoja au wawili zaidi pamoja nawe, kwa kuwa kwa vinywa vya mashahidi wawili au watatu kila neno linaweza kuthibitishwa.
೧೬ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
17 Na kama akipuuza kuwasikiliza, liambie kanisa jambo hilo, kama akipuuza vilevile kulisikiliza kanisa, basi na awe kama mtu wa mataifa na mtoza ushuru.
೧೭ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.
18 Kweli nawaambieni, chochote kile mtakachokifunga duniani na mbinguni kitafungwa. na chochote mtakachokifungua duniani na mbinguni kitafunguliwa.
೧೮“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
19 Tena nawaambieni kwamba kama watu wawili kati yenu wakikubaliana juu ya jambo lolote duniani waliombalo, hilo Baba yangu wa mbinguni atalifanya.
೧೯ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
20 Kwa kuwa wawili au watatu wakikusanyika pamoja kwa jina langu, Mimi niko katikati yao.
೨೦ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
21 Tena Petro akaja na kumwambia Yesu, “Bwana, ni mara ngapi ndugu yangu akinikosea nami nimsamehe? Hata mara saba?”
೨೧ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
22 Yesu akamwambia, “Sikuambii mara saba, lakini hata sabini mara saba.
೨೨ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
23 Kwa sababu hiyo ufalme wa mbinguni ni sawa na mfalme fulani aliyetaka kusahihisha hesabu kutoka kwa watumwa wake.
೨೩ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
24 Alipoanza kusahihisha hesabu, mtumwa moja akaletwa kwake ambaye alikuwa anamdai talanta elfu kumi.
೨೪ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.
25 Kwa kuwa hakuwa na njia ya kulipa, bwana wake aliagiza auzwe, mke wake pamoja na watoto wake na kila kitu alichokuwa nacho, na malipo yafanyike.
೨೫ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
26 Hivyo mtumwa alianguka, akapiga magoti mbele yake, akisema, 'Bwana, uwe na uvumilivu pamoja nami, na nitakulipa kila kitu.'
೨೬ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.
27 Hivyo bwana wa yule mtumwa, kwa kuwa alisukumwa sana na huruma, alimwachilia na kumsamehe deni hilo
೨೭ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
28 Lakini mtumwa yule alitoka na kumpata mmoja kati ya watumwa wenzake, aliyekuwa anamdai denari mia. Alimvuta, akamkaba kooni, na kumwambia, 'Nilipe kile ninachokudai.'
೨೮ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
29 Lakini yule mtumwa mwenzake alianguka na kumsihi sana, akisema, 'Uwe na uvumilivu nami, na nitakulipa.'
೨೯ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
30 Lakini mtumwa yule wa kwanza alikataa. Badala yake, alienda na kumtupa gerezani, mpaka atakapo mlipa kile anachomdai.
೩೦ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
31 Na walipoona watumwa wenzake kile kilichotokea. Walisikitishwa sana. Walikuja na kumwambia bwana wao kila kitu kilichotokea.
೩೧ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
32 Ndipo yule bwana wa mtumwa yule alimwita, na kumwambia, 'Ewe mtumwa mwovu, nilikusamehe wewe deni langu lote kwa sababu ulinisihi sana.
೩೨ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
33 Je! Haukutakiwa kuwa na huruma kwa mtumwa mwenzio, kama mimi nilivyokuhurumia wewe?
೩೩ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,
34 Bwana wake alikasirika na kumkabidhi kwa wale watesaji mpaka atakapolipa kiasi chote alichokuwa anadaiwa.
೩೪ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
35 Hivyo ndivyo Baba yangu wa Mbinguni atakavyowafanyia, kama kila mmoja wenu hatamsamehe ndugu yake kutoka moyoni mwenu.”
೩೫ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.