< Nehemia 8 >
1 Watu wote walikusanyika kama mtu mmoja katika eneo la wazi mbele ya lango la maji. Wakamwomba Ezra mwandishi akilete Kitabu cha Sheria ya Musa, ambacho Bwana aliwaamuru Israeli.
೧ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
2 Siku ya kwanza ya mwezi wa saba, Ezra, kuhani, akaleta sheria mbele ya mkutano, wanaume na wanawake, na wote waliokuwa na uwezo wa kusikia na kuelewa.
೨ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.
3 Akatizama eneo lililo wazi mbele ya lango la Maji, na akasoma toka asubuhi hadi adhuhuri, mbele ya wanaume na wanawake, na yeyote ambaye angeweza kuelewa. Na wote wakasikiliza kwa makini kitabu cha Sheria.
೩ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.
4 Na Ezra, mwandishi, alisimama juu ya jukwaa la mbao ambalo watu walikuwa wametengeneza kwa kusudi hilo. Pembeni yake walisimama Matithia, Shema, Anaya, Uria, Hilkia na Maaseya, upande wake wa kuume; na Pedaya, Misbaeli, Malkiya, Hashumu, Hashbadani, Zekaria na Meshulamu walikuwa wamesimama upande wake wa kushoto.
೪ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.
5 Ezra alifungua kitabu mbele ya watu wote, kwa kuwa alikuwa amesimama juu ya watu, na alipoufungua watu wote wakasimama.
೫ಸರ್ವಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ ಎಲ್ಲರೂ ಎದ್ದು ನಿಂತರು.
6 Ezra akamshukuru Bwana, Mungu mkuu; na watu wote wakainua mikono yao, wakajibu, “Amina! Amina!” Wakainamisha vichwa vyao, wakamwabudu Bwana kwa nyuso zao zikiwa chini.
೬ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.
7 Yeshua, Bani, Sherebia, Yamini, Akubu, Shabethai, Hodai, Maaseya, Kelita, Azaria, Yozabidi, Hanania, Pelaya nao ni Walawi, waliwasaidia watu kuelewa sheria, watu wakakaa mahali pao.
೭ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.
8 Wao walisoma katika kitabu, Sheria ya Mungu, wakaeleza wazi kwa tafsiri na kutoa maana ili watu waelewe yaliyosomwa.
೮ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.
9 Nehemia, gavana, na Ezra kuhani, na mwandishi, na Walawi waliokuwa wakitafsiri kwa watu, wakawaambia watu wote, Siku hii ni takatifu kwa Bwana, Mungu wenu. Msiomboleze au kulia. Kwa kuwa watu wote walilia wakati waliposikia maneno ya sheria.
೯ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
10 Nehemia akawaambia, 'Nendeni, mle kilichonona, mkate na maji ya kunywa, na mpelekeni mtu asiye na kitu, kwa maana siku hii ni takatifu kwa Bwana wetu. Msiwe na huzuni, kwa kuwa furaha ya Bwana ni nguvu zenu.
೧೦ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
11 Basi Walawi wakawafanya watu kuwa na utulivu, wakisema, “Nyamazeni! kwa maana siku hii ni takatifu. Msiwe na huzuni.”
೧೧ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.
12 Watu wote wakaenda kula na kunywa na kugawana chakula na kusherehekea kwa furaha kubwa kwa sababu walielewa maneno waliyohubiriwa.
೧೨ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.
13 Siku ya pili viongozi wa nyumba za mababu kutoka kwa watu wote, makuhani na Walawi, wakakusanyika kwa Ezra, mwandishi ili kupata ufahamu kutoka kwenye maneno ya sheria.
೧೩ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.
14 Wakaona imeandikwa katika sheria namna Bwana alivyomuamuru Musa kwamba wana wa Israeli waishi katika hema wakati wa sikukuu ya mwezi wa saba.
೧೪ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.
15 Wanapaswa kutoa tamko katika miji yao yote, na huko Yerusalemu, wakisema, 'Nendeni nje kwenye nchi ya vilima, na mkalete matawi kutoka kwenye mzeituni mwitu, na matawi ya mihadsi, na matawi ya mitende na matawi ya miti minene ili kufanya vibanda vya muda kama ilivyoandikwa.”
೧೫ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”
16 Basi watu wakatoka na kuleta matawi, wakajifanyia mahema, kila mmoja juu ya paa zao, katika ua zao, katika mahakama za nyumba ya Mungu, mahali pa wazi pa lango la Maji, na katika mraba wa lango la Efraimu.
೧೬ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.
17 Kisha kusanyiko lote la wale waliorudi kutoka kifungoni wakafanya mahema na kukaa ndani yake. Kwa kuwa tangu siku za Yoshua, mwana wa Nuni hata siku hiyo, watu wa Israeli hawakuadhimisha sikukuu hii. Na furaha ilikuwa kubwa sana.
೧೭ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.
18 Pia siku kwa siku, tangu siku ya kwanza hadi mwisho, Ezra alisoma kutoka Kitabu cha Sheria ya Mungu. Walifanya sikukuu kwa siku saba na siku ya nane kilikuwa na kusanyiko zuri, kwa utiifu wa amri.
೧೮ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.