< Hesabu 2 >

1 BWANA akasema na Musa na Haruni tena. Akamwambia,
ಯೆಹೋವ ದೇವರು ಮಾತನಾಡಿ ಮೋಶೆ ಮತ್ತು ಆರೋನನಿಗೆ ಹೇಳಿದ್ದೇನೆಂದರೆ:
2 Kila mtu atapanga kulingana na mahali pake, pamoja na mabango ya baba zao. Watapanga kuzunguka hema ya kukutania kila upande.
“ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.”
3 Wale watakaopanga mashariki mwa hema ya kukutania, mahali ambapo juu huonekana wakati wa jua kuchomoza, ni makambi ya Yuda nao watakuwa katika kundi lao. Nashoni mwana wa Aminadabu ni kiongozi wa watu wa Yuda.
ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.
4 Idadi ya watu wa Yuda ni 74, 600.
ಅವನ ಸೈನಿಕರ ಸಂಖ್ಯೆ 74,600 ಮಂದಿ.
5 Kabila la Isakari litapanga mbele ya Yuda. Nethaneli mwana wa Zuari ataliongoza jeshi la Isakari.
ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಗೋತ್ರದವರು. ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗ ನೆತನೆಯೇಲ್ ಎಂಬ ಸೈನ್ಯಾಧಿಪತಿ.
6 Idadi ya kikosi chake ni wanaume 54, 000.
ಅವನ ಸೈನಿಕರ ಸಂಖ್ಯೆ 54,400 ಮಂದಿ.
7 Kabila la Zabuloni litapanga mbele ya Isakari. Eliabu mwana wa Heloni ndiye atakayeliongoza jeshi la Zabuloni.
ಅವನ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ಯನ ಗೋತ್ರದವರು. ಜೆಬುಲೂನ್ಯನ ಮಕ್ಕಳಿಗೆ ಹೇಲೋನನ ಮಗ ಎಲೀಯಾಬನು ಸೈನ್ಯಾಧಿಪತಿ.
8 Idadi ya kikosi chake ni 57, 400.
ಅವನ ಸೈನಿಕರ ಸಂಖ್ಯೆ 57,400 ಮಂದಿ.
9 Idadi yote ya kambi y a Yuda ni 186, 400. Watakuwa wa kwanza kuondoka.
ಯೆಹೂದನ ಪಾಳೆಯದಲ್ಲಿ ಎಣಿಸಲಾದ ಅವರ ಸೈನಿಕರ ಸಂಖ್ಯೆ 1,86,400 ಮಂದಿ. ಅವರು ಮೊದಲು ಹೊರಡತಕ್ಕವರು.
10 Upande wa kusini kutakuwa na kambi ya Reubeni katika kundi lao. Kiongozi wa kundi la Reubeni ni Elizuri mwana wa Shedeuri.
ದಕ್ಷಿಣ ದಿಕ್ಕಿನಲ್ಲಿ: ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ.
11 Idadi ya kikosi chake ni 46, 500.
ಅವನ ಸೈನಿಕರ ಸಂಖ್ಯೆ 46,500 ಮಂದಿ.
12 Simeoni atapanga mbele ya Reubeni. Kiongozi wa watu wa Simeoni ni Shelumieli mwana wa Zurishadai.
ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನನ ಗೋತ್ರದವರು. ಸಿಮೆಯೋನನ ಮಕ್ಕಳಿಗೆ ಚುರೀಷದ್ದೈಯನ ಮಗನಾದ ಶೆಲುಮೀಯೇಲನು ಸೈನ್ಯಾಧಿಪತಿ.
13 Waliohesabiwa kwenye kikosi chake ni 59, 300.
ಅವನ ಸೈನಿಕರ ಸಂಖ್ಯೆ 59,300 ಮಂದಿ.
14 Kabila la Gadi litafuatia. Kiongozi wa watu wa Gadi ni Eliasafu mwana wa Deuli.
ತರುವಾಯ ಗಾದ್ ಗೋತ್ರದವರು. ಗಾದನ ಮಕ್ಕಳಿಗೆ ದೆವುಯೇಲನ ಮಗ ಎಲ್ಯಾಸಾಫನು ಸೈನ್ಯಾಧಿಪತಿ.
15 Idadi ya kikosi chake ni 45, 650.
ಅವನ ಸೈನಿಕರ ಸಂಖ್ಯೆ 45,650 ಮಂದಿ.
16 Wote waliohesabiwa kwenye kambi ya Reubeni, kulingana na kikosi chake, ni 151, 450. Watakuwa wa pili kuondoka.
ರೂಬೇನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
17 Kifuatacho, ni hema la kukutania kuondoka kambini pamoja na Walawi likiwa katikati ya kambi zote. Lazima waondoke hapo kambini kwa mpangilio huo kama walivyoingia kwenye kambi. Kila mwanamume lazima awe mahali pake kwa kufuata bango lake.
ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
18 Migawanyiko ya kambi y Efraimu kufuata mahali pake. Kiongozi wa watu wa Efraimu ni Elishama mwana wa Amihudi.
ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ.
19 Hesabu ya kikosi hiki ni 40, 500.
ಅವನ ಸೈನಿಕರ ಸಂಖ್ಯೆ 40,500 ಮಂದಿ.
20 Baada ya hao lilifuata kabila la Manase. Kiongozi wa Manase ni Gamaliel mwana wa Pedazuri.
ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ.
21 Hesabu ya kikosi hiki ni 32, 200.
ಅವನ ಸೈನಿಕರ ಸಂಖ್ಯೆ 32,200 ಮಂದಿ.
22 Kabila litakalofuata ni la Benjamini. Kiongozi wa Benjamini n Abidani mwana wa Gidioni.
ತರುವಾಯ ಬೆನ್ಯಾಮೀನ್ ಗೋತ್ರದವರು. ಬೆನ್ಯಾಮೀನನ ಮಕ್ಕಳಿಗೆ ಗಿದ್ಯೋನಿಯ ಮಗ ಅಬೀದಾನನು ಸೈನ್ಯಾಧಿಪತಿ.
23 Hesabu ya kikosi hiki ni 35, 000
ಅವನ ಸೈನಿಕರ ಸಂಖ್ಯೆ 35,400 ಮಂದಿ.
24 Wote waliohesabiwa katika kambi ya Efraimu ni 108, 100. Watakuwa wa tatu kuondoka.
ಎಫ್ರಾಯೀಮನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,08,100 ಮಂದಿ. ಇವರು ಮೂರನೆಯವರಾಗಿ ಹೊರಡತಕ್ಕವರು.
25 Upande wa kaskazini kutakuwa na kambi ya kikosi cha Dani. Kiongozi wa watu wa Dani ni Ahiezeri mwana wa Amishadai.
ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು: ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ.
26 Hesabu ya kikosi hiki ni 62, 700.
ಅವನ ಸೈನಿಕರ ಸಂಖ್ಯೆ 62,700 ಮಂದಿ.
27 Watu wa kabila ya Asheri watapanga mbele ya Dani. Kiongozi wa Asheri ni Pagieli mwana wa Okirani.
ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಆಶೇರ್ ಗೋತ್ರದವರು. ಆಶೇರನ ಮಕ್ಕಳಿಗೆ ಒಕ್ರಾನನ ಮಗ ಪಗೀಯೇಲನು ಸೈನ್ಯಾಧಿಪತಿ.
28 Hesabu ya Kikosi hiki ni 41, 500.
ಅವನ ಸೈನಿಕರ ಸಂಖ್ಯೆ 41,500 ಮಂದಿ.
29 Kabila la Naftali ndilo litakalofuatia. Kiongozi wa Naftali ni Ahira mwana wa Enani.
ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ.
30 Hesabu ya kikosi hiki ni 53, 400.
ಅವನ ಸೈನಿಕರ ಸಂಖ್ಯೆ 53,400 ಮಂದಿ.
31 Wote waliohesabiwa kwenye kambi ya Dani ni 157, 600. Hawa watakuwa wa mwisho kuondoka kambini, wakifuata bango lao.
ದಾನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,57,600 ಮಂದಿ. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯ ದಂಡಾಗಿ ಹೊರಡತಕ್ಕದ್ದು.
32 Hawa ndio Waisraeli, waliohesabiwa kufuata familia zao. Wote waliohesabiwa kwenye kambi zao, kwa kufuata vikosi vyao ni 603, 550.
ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ.
33 Lakini Musa na Haruni hawakujumuisha Walawi kwenye Hesabu ya Waisrael. Ilikuwa kama BWANA alivyokuwa amemwagiza Musa.
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ.
34 Watu wa Israel walifanya yote ambayo BWANA alimwagiza Musa. Walipanga kwa kufuata mabango yao. Walisafiri kutoka kambini kwa kufuata jamaa zao, kwa mpangilio wa familia za koo zao.
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.

< Hesabu 2 >