< Zaburi 55 >
1 Uyategee sikio maombi yangu, Mungu; nawe usijifiche mbali na kusihi kwangu.
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ಮಸ್ಕಿಲ್ ರಾಗದಲ್ಲಿ ದಾವೀದನು ರಚಿಸಿದ ಕೀರ್ತನೆ. ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.
2 Unitazame kwa makini na unijibu; Sina pumziko katika shida zangu
ನನ್ನನ್ನು ಆಲೈಸಿರಿ, ನನಗೆ ಉತ್ತರಕೊಡಿರಿ. ನಾನು ನನ್ನ ಚಿಂತೆಯಿಂದ ದುಃಖಿಸುತ್ತಾ ಬೇಸರವಾಗಿದ್ದೇನೆ.
3 kwa sababu ya sauti ya adui zangu, kwa sababu ya ukandamizaji wa waovu; maana wananiletea matatizo na kunitesa wakiwa na hasira.
ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.
4 Moyo wangu wasumbuka ndani yangu, na hofu ya kifo imeniangukia.
ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.
5 Uwoga na kutetemeka kumenijia, nayo hofu imenielemea.
ಭಯವೂ ನಡುಗೂ ನನಗೆ ಬಂದಿವೆ; ಭೀತಿಯು ನನ್ನನ್ನು ಮುಚ್ಚಿದೆ.
6 Nikasema, “Oh, kama tu ningekuwa na mabawa kama njiwa! Ningelipaa mbali na kupata pumziko.
“ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.
7 Tazama, ningeenda mbali; ningekaa jangwani. (Selah)
ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ.
8 Ningefanya haraka kuja mafichoni mwako kuzikimbia dhoruba na tufani.”
ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು.
9 Uwaangamize, Bwana, vuruga lugha zao! Kwa maana nimeona vurugu na ugomvi katika mji.
ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.
10 Mchana na usiku wao huenda kwenye kuta zake; uchafu na ufisadi uko katikati yake.
ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ.
11 Uovu uko katikati yake; ukandamizaji na uongo hauiachi mitaa yake.
ನಾಶಕರ ಶಕ್ತಿಗಳು ನಗರ ಮಧ್ಯದಲ್ಲಿ ಇವೆ. ಬೀದಿಗಳೊಳಗಿಂದ ಬೆದರಿಕೆಯೂ ವಂಚನೆಯೂ ತೊಲಗುವುದಿಲ್ಲ.
12 Kwa maana hakuwa adui aliye nikemea, hivyo ningevumilia; wala ingekuwa ni yule aliye nichukia aliyejiinua mwenyewe dhidi yagu, hivyo ningejificha asinione.
ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು.
13 Lakini ulikuwa wewe, mtu sawa na mimi, mwenzangu na rafiki yangu.
ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ.
14 Tulikuwa na ushirika mtamu pamoja; tuliingia katika nyumba ya Mungu tukiwa na umati mkubwa.
ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು.
15 Kifo na kiwapate ghafla; na washuke wakiwa hai kuzimuni, maana ndiko waishiko waovu, hapo hapo kati yao. (Sheol )
ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ. (Sheol )
16 Lakini kwangu mimi, nitamwita Mungu, na Yahwe ataniokoa.
ಆದರೆ ನಾನು ದೇವರನ್ನು ಕರೆಯುವೆನು. ಯೆಹೋವ ದೇವರು ನನ್ನನ್ನು ರಕ್ಷಿಸುವರು.
17 Wakati wa jioni, asubuhi na mchana ninalalamika na kuomboleza; yeye atasikia sauti yangu.
ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.
18 Kwa usalama kabisa atayaokoa maisha yangu na vita dhidi yangu, kwa maana wale waliopigana nami walikuwa ni wengi.
ಅನೇಕರು ನನ್ನನ್ನು ವಿರೋಧಿಸಿದರೂ ನನಗೆ ವಿರೋಧವಾಗಿ ಆಗುವ ಯುದ್ಧಗಳಲ್ಲಿ ದೇವರು ನನ್ನನ್ನು ಯಾವುದೇ ಹಾನಿಯಾಗದಂತೆ ವಿಮೋಚಿಸುವರು.
19 Mungu, yule unayetawala milele, atawasikia na kuwaaibisha wao. (Selah) Hawabadiliki, na hawamhofu Mungu.
ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.
20 Rafiki yangu ameinua mikono yake dhidi ya wale waliokuwa na amani naye; Hakuheshimu agano alilokuwa nalo.
ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
21 Mdomo wake ulikuwa laini kama siagi, lakini moyo wake ulikuwa adui; maneno yake yalikuwa laini kuliko mafuta, lakini yalikuwa ni panga zilizochomolewa.
ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.
22 Umtwike mizigo yako Yahwe, naye atakusaidia; yeye hataruhusu mtu mwenye haki kuyumbayumba.
ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.
23 Bali wewe, Mungu, utawaleta waovu chini kwenye shimo la uharibifu; watu wenye kiu ya kumwaga damu na waongo hawataishi hata nusu ya maisha kama wengine, lakini mimi nitakuamini wewe.
ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.