< Zekaria 4 >

1 Ndipo malaika aliyekuwa akiongea nami akageuka na kuniamsha kama mtu aamshwavyo usingizini.
ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು,
2 Akaniuliza, “Unaona nini?” Nikasema, “Ninaona kinara cha taa kimetengenezwa kwa dhahabu tupu, na bakuli juu yake. Kina taa saba juu yake na mirija mmoja kwa kila taa.
“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;
3 Kando yake kuna mizeituni miwili, mmoja upande wa kulia na mwingine upande wa kushoto.”
ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ” ಎಂದು ಹೇಳಿದೆನು.
4 Kisha nikamwiliza tena na malaika aliyeongea nami. “Mambo haya yanamaana gani, bwana wangu?”
ಪುನಃ ನಾನು ಪ್ರಸ್ತಾಪವನ್ನೆತ್ತಿ ವಿವರಿಸುವ ದೇವದೂತನನ್ನು, “ಸ್ವಾಮೀ, ಇವು ಏನನ್ನು ಸೂಚಿಸುತ್ತದೆ?” ಎಂದು ಕೇಳಿದ್ದಕ್ಕೆ,
5 Naye akanijibu na kusema, Haujui mambo haya yanamaanisha nini?” Nikasema, “ndiyo sijui bwana wangu.”
ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.
6 Hivyo akaniambia, “Hili ni neno la Yahwe kwa Zerubabeli: lisemalo siyo kwa uwezo wala kwa nguvu, lakini ni kwa Roho wangu, asema Yahwe wa majeshi.
ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.
7 U nini wewe, mlima mrefu? Mbele ya Zerubabeli utakuwa tambarare, naye ataondoa jiwe la juu kwa kelele ya 'Neema! Neema kwake!”
ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.
8 Neno la Yahwe likanijia kusema,
ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ,
9 “Mikono ya Zerubabeli imeweka misingi ya nyumba hii nayo itaimaliza. Ndipo mtakapojua kuwa Yahwe wa majeshi amenituma kwenu.
“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.
10 Ni nani aliyedharau siku ya mambo madogo? Watu hawa wataona jiwe la kupimia mkononi mwa Zerubabeli, nao watafurahi. (Taa saba ni macho ya Yahwe yanayozunguka duniani mwote.)”
೧೦ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?
11 Ndipo nilipomwuliza malaika, Mizeituni hii miwili isimamayo upande wa kushoto na kulia wa kinara cha taa ni nini?”
೧೧ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?” ಎಂದೆನು.
12 Nikauliza kwa mara nyingine tena, “Haya matawi mawili ya mizeituni kando ya mirija miwili ya dhahabu iliyo na mafuta ya dhahabu yanatiririka kutoka ndani yake?
೧೨ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.
13 Naye akaniambia, “Hauvijui vitu hivi ni nini?” Nami nikasema, “Hapana, bwana wangu.”
೧೩ಅದಕ್ಕೆ ಆ ದೂತನು ನನಗೆ, “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂದು ಕೇಳಿದಾಗ ನಾನು, “ಇಲ್ಲ ಸ್ವಾಮೀ” ಎಂದೆ.
14 Akasema, “Hawa ni wana wa mafuta mabichi ya mizeituni wasimamao mbele ya Bwana wa dunia yote.”
೧೪ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.

< Zekaria 4 >